Homeಮುಖಪುಟಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯಲ್ಲಿ 800 ಕೋಟಿ ಹಗರಣ: ಮಾಗಡಿ ಶಾಸಕ ಎ.ಮಂಜುನಾಥ್ ಆರೋಪ

ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯಲ್ಲಿ 800 ಕೋಟಿ ಹಗರಣ: ಮಾಗಡಿ ಶಾಸಕ ಎ.ಮಂಜುನಾಥ್ ಆರೋಪ

- Advertisement -
- Advertisement -

ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯಲ್ಲಿ ಭೂಸ್ವಾಧೀನ ಮಾಡಿಕೊಳ್ಳುವ ವೇಳೆ ಯೋಜನಾ ನಿರ್ದೇಶಕರು 800 ಕೋಟಿ ರೂ ಹಗರಣ ನಡೆಸಿದ್ದು, ಈ ಕುರಿತು ಸಿಬಿಐ ತನಿಖೆ ಮಾಡಬೇಕೆಂದು ಮಾಗಡಿ ಜೆಡಿಎಸ್ ಶಾಸಕ ಎ.ಮಂಜುನಾಥ್ ಒತ್ತಾಯಿಸಿದ್ದಾರೆ.

ಆರಂಭದಲ್ಲಿ ಭೂ ಸ್ವಾಧೀನಕ್ಕಾಗಿ 8,060 ಕೋಟಿ ರೂಗೆ ಡಿಪಿಆರ್ ಆಗಿತ್ತು. ಈಗ 10,600 ಕೋಟಿ ರೂವರೆಗೂ ಬಂದು ನಿಂತಿದೆ. ಪ್ರಾಥಮಿಕ ಭೂ ಸ್ವಾಧೀನ ನಡೆದಾಗ ಇದ್ದ ಹಣಕ್ಕೂ, ಸದ್ಯ ಅವರು ನೀಡಿರುವ ಹಣಕ್ಕೂ 800-900 ಕೋಟಿ ರೂ ಹೆಚ್ಚು ತೋರಿಸುತ್ತಿದ್ದಾರೆ. ಆ ಮೂಲಕ ಪ್ರಾಜೆಕ್ಟ್ ಡೈರೆಕ್ಟರ್ ಡಿ.ಬಿ ಶ್ರೀಧರ್ ಭಾರೀ ಅವ್ಯವಹಾರ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಶಾಸಕರು, “ಬೆಂಗಳೂರು ಮೈಸೂರು ರಸ್ತೆಗಾಗಿ ನಾವು ಜನರನ್ನು ಒಪ್ಪಿಸಿ ಭೂಮಿ ಬಿಟ್ಟುಕೊಡುವಂತೆ ಮನವಿ ಮಾಡಿದ್ದೆವು. ಆದರೆ ಆ ಸಮಯದಲ್ಲಿ ಜನರಿಂದ ಭೂಮಿ ತೆಗೆದುಕೊಂಡು ಕೆಲವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಆನಂತರ ಸರ್ಕಾರಕ್ಕೆ ಬಿಟ್ಟುಕೊಟ್ಟಿದ್ದಾರೆ. ಯಾರದೋ ಭೂಮಿಗೆ ಇನ್ಯಾರೊ ಪರಿಹಾರ ಪಡೆಯುತ್ತಿದ್ದಾರೆ. ಆ ಮೂಲಕ ಯೋಜನಾ ನಿರ್ದೇಶಕರು ಹಣ ಹೊಡೆದಿದ್ದಾರೆ. ಇದರಿಂದ ನಿಜವಾದ ರೈತರಿಗೆ ಅನ್ಯಾಯವಾಗಿದೆ” ಎಂದು ದೂರಿದರು.

ಇದನ್ನೂ ಓದಿ: 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಸಮೀಕ್ಷೆ; ಮಾಗಡಿಯಲ್ಲಿ ಗೆಲ್ಲುವವರು ಯಾರು?

ರಸ್ತೆ ಮಾಡುವಾಗ ಕೆರೆಗಳನ್ನು ಇಭ್ಭಾಗ ಮಾಡಲಾಗಿದೆ. ಕೆರೆಯ ಮಧ್ಯದಲ್ಲಿ ರಸ್ತೆ ಮಾಡಲಾಗಿದೆ. ರಾಜಕಾಲುವೆ ಮತ್ತು ಸ್ವಾಭಾವಿಕ ಹಳ್ಳಗಳನ್ನು ಬೇರೆ ದಿಕ್ಕಿಗೆ ತಿರುಗಿಸಲಾಗಿದೆ. ಈ ಕಾರಣದಿಂದ ಕಳೆದ ವಾರದಿಂದ ರಸ್ತೆಯಲ್ಲಿ ನೀರು ತುಂಬಿಕೊಂಡು ಪರದಾಡುವ ಸ್ಥಿತಿ ಬಂದಿದೆ ಎಂದ ಅವರು ಶನಿವಾರದ ಪತ್ರಿಕಾಗೋಷ್ಟಿಯಲ್ಲಿ ಜಲಾವೃತಗೊಂಡ ರಸ್ತೆಯ ಫೋಟೊಗಳನ್ನು ಬಿಡುಗಡೆ ಮಾಡಿದ್ದಾರೆ.

ಒಂದು ಕಿ.ಮೀ ರಸ್ತೆ ನಿರ್ಮಾಣಕ್ಕೆ 80 ಕೋಟಿ ರೂ ಖರ್ಚು ಮಾಡುತ್ತಿದ್ದಾರೆ. ಅವರು ನಿರ್ಮಿಸಿದ ಹಲವು ಕಿ.ಮೀ ನಷ್ಟು ರಸ್ತೆ ಹಾಳಾಗಿದ್ದು ಅದರಿಂದ 1,300 ಕೋಟಿ ರೂ ನಷ್ಟವಾಗಿದೆ. ಜನರ ತೆರಿಗೆ ಹಣವನ್ನು ಈ ರೀತಿ ವ್ಯಯ ಮಾಡುವುದು ಸರಿಯೇ? ಈ ರಸ್ತೆಗೆ ಪ್ರತಾಪ್ ಸಿಂಹರವರು ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆಯೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಮಸ್ಯೆಗಳಿಗೆಲ್ಲ ಪ್ರಾಜೆಕ್ಟ್ ಡೈರೆಕ್ಟರ್ ಡಿ.ಬಿ ಶ್ರೀಧರ್ ನೇರ ಹೊಣೆಯಾಗಿದ್ದಾರೆ. ಅವರಿಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹರವರ ಬೆಂಬಲವಿದೆ. ಹಾಗಾಗಿ ಈ ಹಗರಣದ ಕುರಿತು ಸಿಬಿಐ ತನಿಖೆ ನಡೆಯಬೇಕು ಎಂದು ಮನವಿ ಸಲ್ಲಿಸಲು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿಯಾಗುತ್ತೇವೆ ಮತ್ತು ಪ್ರಧಾನಿಯವರ ಗಮನಕ್ಕೆ ತರುತ್ತೇವೆ ಎಂದರು.


ಇದನ್ನೂ ಓದಿ: ಏರ್‌ಪೋರ್ಟ್ ವಿವಾದದಲ್ಲಿ ಬಿಜೆಪಿ ಸಂಸದ; ದಿಯೋಘರ್‌ ಡಿಸಿ ವಿರುದ್ಧ ದೆಹಲಿಯಲ್ಲಿ ದೇಶದ್ರೋಹ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...