Homeಕರ್ನಾಟಕಮುಖ್ಯಮಂತ್ರಿಯ ನೆರೆ ಪರಿಶೀಲನೆ ಸಭೆಯಲ್ಲಿ ನಿದ್ದೆ ಹೊಡೆದ ಸಚಿವ ಆರ್‌. ಅಶೋಕ್‌: ಕಾಂಗ್ರೆಸ್‌‌ ಆಕ್ರೋಶ

ಮುಖ್ಯಮಂತ್ರಿಯ ನೆರೆ ಪರಿಶೀಲನೆ ಸಭೆಯಲ್ಲಿ ನಿದ್ದೆ ಹೊಡೆದ ಸಚಿವ ಆರ್‌. ಅಶೋಕ್‌: ಕಾಂಗ್ರೆಸ್‌‌ ಆಕ್ರೋಶ

- Advertisement -
- Advertisement -

ರಾಜ್ಯದಾದ್ಯಂತ ಅದರಲ್ಲೂ ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಹಲವು ಪ್ರದೇಶಗಳು ಮುಳುಗಡೆಯಾಗಿವೆ. ಈ ನಡುವೆ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಪ್ರವಾಹ ಪರಿಶೀಲನೆಯ ವಿಡಿಯೊ ಕಾನ್ಫರೆನ್ಸ್‌‌ ಸಭೆಯಲ್ಲಿ ಸಚಿವ ಅಶೋಕ್‌ ಅವರು ನಿದ್ದೆಗೆ ಜಾರಿದ್ದಾರೆ ಎಂದು ಆರೋಪಿಸಲಾಗಿದೆ.

ನೆರೆ ನಿರ್ವಹಣೆಯ ಕುರಿತು ರಾಜ್ಯ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಈ ನಡುವೆ ಮುಖ್ಯಮಂತ್ರಿ ನಡೆಸುತ್ತಿರುವ ಸಭೆಯೊಂದರಲ್ಲಿ ಅಶೋಕ್‌ ನಿದ್ದೆಗೆ ಜಾರಿರುವ ಫೋಟೊ‌ಗಳು ವೈರಲ್ ಆಗಿದೆ. ಈ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್‌,‌ ‘ಚಿಂತೆ ಇಲ್ಲದವನಿಗೆ ಸಂತೆಯಲ್ಲಿ ನಿದ್ದೆ’ ಎಂದು ವಾಗ್ದಾಳಿ ನಡೆಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಳುಗುವುದರಲ್ಲಿ ಹಲವು ವಿಧಗಳಿವೆ! ರಾಜ್ಯದ ಜನ ಮಳೆಯಲ್ಲಿ ಮುಳುಗಿದ್ದಾರೆ, ಸಚಿವರು ನಿದ್ದೆಯಲ್ಲಿ ಮುಳುಗಿದ್ದಾರೆ!” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

“ಪ್ರವಾಹ ಪರಿಶೀಲನೆಯ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸಚಿವ ಆರ್‌‌. ಅಶೋಕ್‌‌ ಅವರ ಭರ್ಜರಿ ನಿದ್ದೆ. ‘ಹಲಾಲ್ ಕಟ್’ ಎಂದರೆ ಥಟ್‌ನೆ ಎಚ್ಚರಾಗುತ್ತಾರೆ! ‘ಚಿಂತೆ ಇಲ್ಲದವಗೆ ಸಂತೆಲೂ ನಿದ್ದೆ’ ಎಂಬ ಮಾತು ಸಚಿವರಿಗೇ ಹೇಳಿದ್ದೇನೋ!” ಎಂದು ವ್ಯಂಗ್ಯವಾಡಿದೆ.

ಇಷ್ಟೆ ಅಲ್ಲದೆ ಸಂಸದ ತೇಜಸ್ವಿ ಸೂರ್ಯ ಅವರ ಮೇಲೆ ಕೂಡಾ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, “ಮತಿ ‘ದೋಷ’ ಇರುವವರನ್ನು ಆಯ್ಕೆ ಮಾಡಿದರೆ, ಜನ ಮುಳುಗುವಾಗ ‘ದೋಸೆ’ ತಿನ್ನಲು ಹೋಗುತ್ತಾರೆ!” ಎಂದು ಹೇಳಿದೆ. ಜನರು ಮಳೆಯ ಸಂಕಷ್ಟಗಳ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಮಾಡಿ ಹರಿ ಬಿಡುತ್ತಿರುವಾಗ, ಸಂಸದ ತೇಜಸ್ವಿ ಸೂರ್ಯ ಅವರು ಇನ್ಸ್‌‌ಟಾಗ್ರಾಂನಲ್ಲಿ ದೋಸೆಯ ಚಿತ್ರವನ್ನು ನೋಡಿ ಅದನ್ನು ಸವಿಯಲು ಹೋಗಿದ್ದಾಗಿ ಎಂದು ಹೇಳುತ್ತಿರುವ ವಿಡಿಯೊ ವೈರಲ್ ಆಗಿತ್ತು.

ಇದನ್ನೂ ಓದಿ: ಕ್ರಿಕೆಟಿಗ ಅರ್ಷದೀಪ್‌‌ರನ್ನು ಖಾಲಿಸ್ತಾನಿ ಎಂದವರ ಟ್ವೀಟ್‌ ಪತ್ತೆ ಹಚ್ಚಿದ್ದಕ್ಕೆ ಜುಬೇರ್‌ ವಿರುದ್ಧ ದೂರು ದಾಖಲು!

“ಬೆಂಗಳೂರು ಮುಳುಗಿದೆ, ಜನತೆ ಪರದಾಡುತ್ತಿದ್ದಾರೆ, ಆದರೆ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಅವರು ದೋಸೆ ತಿನ್ನುವ ಟೆಂಪ್ಟ್ ಆಗಿದ್ಯಂತೆ! ಮಕ್ಕಳಾಟ ಆಡಿಕೊಂಡಿದ್ದ ಅಪ್ರಬುದ್ಧರನ್ನು ಸಂಸದರನ್ನಾಗಿಸಿದರೆ ಇನ್ನೇನು ನಿರೀಕ್ಷಿಸಲು ಸಾಧ್ಯ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಲಾಪಗಳಲ್ಲಿ ನಿದ್ದೆ ಮಾಡದೆ ಇನ್ನೇನು …….ಅವರ ಮನೆಯೊಳಗೆ ಐದು ಆರು ಅಡಿ ನೀರು ಹೋಗುತ್ತಿದ್ದರೆ ಅವರಿಗೂ ನಿದ್ದೆ ಬರುತ್ತಿರಲಿಲ್ಲ …….ಬೇರೆಯವರ ಮನೆಗೆ ನೀರು ಹೋಗಿದ್ದು ತಾನೇ……

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...