Homeಕರ್ನಾಟಕಬೆಂಗಳೂರು ವಿ.ವಿ ಕ್ಯಾಂಪಸ್‌ನೊಳಗೆ ದೇವಸ್ಥಾನ ನಿರ್ಮಾಣದ ವಿರುದ್ಧ ಭಾರಿ ಪ್ರತಿಭಟನೆ

ಬೆಂಗಳೂರು ವಿ.ವಿ ಕ್ಯಾಂಪಸ್‌ನೊಳಗೆ ದೇವಸ್ಥಾನ ನಿರ್ಮಾಣದ ವಿರುದ್ಧ ಭಾರಿ ಪ್ರತಿಭಟನೆ

ಪ್ರತಿಭಟಿಸಿದ ವಿದ್ಯಾರ್ಥಿ ಮತ್ತು ಅಧ್ಯಾಪಕರುಗಳನ್ನು ಕಿಡಿಗೇಡಿ ಎಂದ ಬಿಬಿಎಂಪಿ ಆಯುಕ್ತರನ್ನು ಅಮಾನತು ಮಾಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ದೇವಸ್ಥಾನವನ್ನು ನಿಲ್ಲಿಸಬೇಕು ಮತ್ತು ವಿದ್ಯಾರ್ಥಿಗಳು ಹಾಗೂ ಅದ್ಯಾಪಕರುಗಳನ್ನು ‘ಕಿಡಿಗೇಡಿಗಳು’ ಎಂದು ಕರೆದ ಬಿಬಿಎಂಪಿ ಆಯುಕ್ತರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗುರುವಾರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ದೇವಸ್ಥಾನ ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಅಲ್ಲಿನ ಪ್ರಾಧ್ಯಾಪಕರುಗಳು ಬುಧವಾರ ಪ್ರತಿಭಟನೆ ನಡೆಸಿದ್ದರು. ಈ ನಡುವೆ, ಪ್ರತಿಭಟನೆ ನಡೆಸಿದ ಅಧ್ಯಾಪಕರುಗಳು ಮತ್ತು ವಿದ್ಯಾರ್ಥಿಗಳನ್ನು ಬಿಬಿಎಂಪಿ ಆಯುಕ್ತರು ‘ಕಿಡಿಗೇಡಿಗಳು’ ಎಂದು ಕರೆದಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಹೀಗಾಗಿ ಅಕ್ರಮ ದೇವಸ್ಥಾನ ನಿರ್ಮಾಣವನ್ನು ನಿಲ್ಲಿಸಬೇಕು ಮತ್ತು ವಿದ್ಯಾರ್ಥಿಗಳು ಮತ್ತು ಅದ್ಯಾಪಕರುಗಳನ್ನು ಕಿಡಿಗೇಡಿಗಳು ಎಂದು ಕರೆದ ಬಿಬಿಎಂಪಿ ಆಯುಕ್ತರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಇಂದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮನೋಜ್ ಅವರು, “ವಿಶ್ವ ವಿದ್ಯಾಲಯ ಕ್ಯಾಂಪಸ್ಸಿನೊಳಗೆ ಅಕ್ರಮವಾಗಿ ನಿರ್ಮಿಸುತ್ತಿರುವ ದೇವಸ್ಥಾನದ ವಿರುದ್ಧ ನಡೆಸಿದ ಪ್ರತಿಭಟನೆಯ ಬಗ್ಗೆ ಹೇಳುತ್ತಾ ಪ್ರತಿಭಟನೆ ನಡೆಸಿದವರು ‘ಕಿಡಿಗೇಡಿಗಳು’ ಎಂದು ಬಿಬಿಎಂಪಿ ಆಯುಕ್ತರು ಉಲ್ಲೇಖಿಸಿದ್ದಾರೆ. ಆದರೆ ನಿನ್ನೆ ಪ್ರತಿಭಟನೆ ನಡೆಸಿದ್ದು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರುಗಳು”

“ಸರ್ಕಾರಿ ನೌಕರರಾದ ಅಧ್ಯಾಪಕರುಗಳನ್ನು ಬಿಬಿಎಂಪಿ ಆಯುಕ್ತರು ಹೇಗೆ ‘ಕಿಡಿಗೇಡಿಗಳು’ ಎಂದು ಉಲ್ಲೇಖಿಸುತ್ತಾರೆ?. ಈ ರೀತಿಯ ವಾಕ್ಯವನ್ನು ಯಾರು ಬಳಸಿದ್ದಾರೆಯೊ ಅವರನ್ನೆಲ್ಲಾ ಅಮಾನತು ಮಾಡಬೇಕು ಮತ್ತು ಅಕ್ರಮ ದೇವಸ್ಥಾನ ನಿರ್ಮಣವನ್ನು ನಿಲ್ಲಿಸಬೇಕು ಎಂದು ನಾವು ಹೋರಾಟ ಮಾಡುತ್ತಿದ್ದೇವೆ” ಎಂದು ಮನೋಜ್‌ ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ  ಓದಿ: ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗಡೆ ಅನಧೀಕೃತ ದೇವಸ್ಥಾನ ನಿರ್ಮಾಣ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಘಟನೆ ಏನು? 

ರಸ್ತೆಯೊಂದರ ವಿಸ್ತರಣೆ ನಡೆಯುತ್ತಿರುವುದರಿಂದ ಅಲ್ಲಿದ್ದ ಗಣೇಶ ದೇವಸ್ಥಾನ ತೆರವು ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅಲ್ಲಿದ್ದ ದೇವಸ್ಥಾನವನ್ನು ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಬೇಡಿಕೆ ಇಟ್ಟಿದ್ದರು. ಅವರಿಗೆ ಬಿಬಿಎಂಪಿ ಕೂಡಾ ಅನುಮತಿ ನೀಡಿತ್ತು ಎಂದು ತಿಳಿದು ಬಂದಿದೆ. ಹೀಗಾಗಿ ಅಲ್ಲಿರುವ ದೇವಸ್ಥಾನವನ್ನು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಇರುವ ಬಳಿಯಲ್ಲಿ ಉಪ ಕುಲಪತಿಯ ಅನುಮತಿಯಿಲ್ಲದೆ ಅಕ್ರಮವಾಗಿ ನಿರ್ಮಾಣ ಮಾಡಲಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಅದರ ನಿರ್ಮಾಣಕ್ಕೆ ವಿರೋಧ ಮಾಡಿದ್ದರು.

‘‘2000-ಯುಜಿಸಿ ಕಾಯ್ದೆ ಪ್ರಕಾರ, ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಸಂಸ್ಥೆ ಮತ್ತು ಕಟ್ಟಡಗಳಿಗೆ ಅವಕಾಶವಿಲ್ಲ. ಈ ನಿಯಮ ಇದ್ದರು ಕೂಡಾ ಅತಿಕ್ರಮಣ ಮಾಡಿ ದೇವಸ್ಥಾನವನ್ನು ಕಟ್ಟುತ್ತಿದ್ದಾರೆ. ಎರಡು ತಿಂಗಳ ಹಿಂದೆಯೆ ವಿದ್ಯಾರ್ಥಿಗಳು ಸೇರಿ ಪ್ರತಿಭಟನೆ ನಡೆಸಿದ್ದೆವು. ಆ ವೇಳೆ ಉಪ ಕುಲಪತಿ ಅದರ ಕಾಮಗಾರಿಯನ್ನು ನಿಲ್ಲಿಸಿದ್ದರು. ಆದರೆ ಇಂದು ಏಕಾಏಕಿ ತೀರ್ಮಾನಗಳನ್ನು ತೆಗೆದುಕೊಂಡು, ಪೊಲೀಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ರಕ್ಷಣೆಯೊಂದಿಗೆ ಕಟ್ಟಡವನ್ನು ಕಟ್ಟುತ್ತಿದ್ದಾರೆ” ಎಂದು ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮನೋಜ್ ಆಝಾದ್ ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಬಿಬಿಎಂಪಿಯಿಂದ ನಮಗೆ ಆದೇಶ ಬಂದಿದೆ, ಹಾಗಾಗಿ ನಾವು ರಕ್ಷಣೆ ಕೊಡುತ್ತಿದ್ದೇವೆ ಎಂದು ಪೊಲೀಸರು ಹೇಳುತ್ತಿದ್ದಾರೆ. ವಿದ್ಯಾರ್ಥಿಗಳು ಇಲ್ಲಿ ಹೋರಾಟ ಮಾಡುವ ಹಾಗಿಲ್ಲ ಎಂದು ತಿಳಿಸಿದ್ದಾರೆ. ಆದರೆ ಅವರಿಗೆ ವಿದ್ಯಾಲಯದ ಆವರಣದಲ್ಲಿ ದೇವಸ್ಥಾನ ಕಟ್ಟಲು ಅನುಮತಿ ಕೊಟ್ಟವರು ಯಾರು? ಹೇಗೆ ಕೊಟ್ಟಿದ್ದಾರೆ?. ಒಂದು ವೇಳೆ ಇದು ಸರಿಯಾಗಿ ಇತ್ಯರ್ಥವಾಗಿಲ್ಲ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಯುತ್ತದೆ” ಎಂದು ಮನೋಜ್ ಎಚ್ಚರಿಸಿದ್ದಾರೆ.

ಇದನ್ನೂ  ಓದಿ: ಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

ವಿವಿಯ ಹಳೆಯ ಉಪ ಕುಲಪತಿ ವೇಣುಗೋಪಾಲ್ ಅವರು ಈ ಹಿಂದೆಯೆ ದೇವಸ್ಥಾನ ನಿರ್ಮಿಸಲು ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಆದರೆ ಅಧಿಕಾರಿಗಳು ಯಾವುದೆ ದಾಖಲಾತಿಯನ್ನು ತೋರಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಚಂದ್ರು ಪೆರಿಯಾರ್‌ ಅವರು, “ಈ ಗಣೇಶ ದೇವಸ್ಥಾನದ ಬಗ್ಗೆ ನಾವು ಹಿಂದೆಯೆ ಆರ್‌ಟಿಐ ಹಾಕಿ ಪ್ರಶ್ನಿಸಿದ್ದೆವು. ಅದರಂತೆ ಈ ದೇವಸ್ಥಾನವನ್ನು ವಿಶ್ವವಿದ್ಯಾಲಯ ಕಟ್ಟಿದ್ದಲ್ಲ. ಅದಕ್ಕೆ ಯಾವ ಅನುದಾನವನ್ನೂ ವಿವಿ ಕೊಡಲ್ಲ. ಅದನ್ನು ಸ್ಥಳೀಯರು ಪ್ರಾರಂಭಿಸಿದ್ದರು. ಕಳೆದ ಹತ್ತಿಪ್ಪತ್ತು ವರ್ಷಗಳಿಂದಲೂ ಅಲ್ಲಿ ಸಂಗ್ರಹವಾಗುವ  ಹಣವನ್ನು ದೇವಸ್ಥಾನದ ಟ್ರಸ್ಟ್‌ನವರೇ ಬಳಕೆ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ವಿಶ್ವವಿದ್ಯಾಲಯದೊಂದಿಗೆ ಸಾಮರಸ್ಯವನ್ನು ಸಾಧಿಸಿ ಕಟ್ಟಡವನ್ನು ಕಟ್ಟಿ ಎಂದು ಸರ್ಕಾರದ ಆದೇಶದಲ್ಲಿದೆ. ಆದರೆ ವಿಶ್ವವಿದ್ಯಾಲಯದ ಒಳಗಡೆ ಪ್ರವೇಶ ಮಾಡಬೇಕೆಂದರೆ ಈಗಿನ ಉಪ ಕುಲಪತಿಗಳ ಅನುಮತಿ ಪಡೆಯುವುದು ಬೇಡವೆ? ಈ ಹಿಂದಿನ ಉಪ ಕುಲಪತಿ ವೇಣುಗೋಪಾಲ್ ಅವರ ನಂತರ ಬಂದ ಉಪಕುಲಪತಿಗಳು ಈ ಕಾಮಗಾರಿಗೆ ತಡೆ ಒಡ್ಡಿದ್ದರು. ಆದರೂ ಈ ಹಿಂದಿನ ಉಪ ಕುಲಪತಿ ಆದೇಶ ನೀಡಿದ್ದಾರೆ ಎಂದು ಹೇಳಿ ಏಕಾಏಕಿ ಮುನ್ನುಗ್ಗುತ್ತಾರೆ ಎಂದರೆ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಯಾಕೆ? ಉಪ ಕುಲಪತಿ ಯಾಕೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ  ಓದಿ: ಬೆಂಗಳೂರು ಮಳೆ: ವಿದ್ಯುತ್‌ ಸ್ಪರ್ಶದಿಂದ ಯುವತಿ ಸಾವು; ಕಾಂಗ್ರೆಸ್ ಕಾರಣ ಎಂದ ಬೊಮ್ಮಯಿ

ಬೆಂಗಳೂರು ವಿಶ್ವವಿದ್ಯಾಲಯದ ಒಳಗೆಯಿದೆ 15 ಕ್ಕೂ ಹೆಚ್ಚು ದೇವಸ್ಥಾನಗಳು

ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸುಮಾರು 15 ದೇವಸ್ಥಾನಗಳು ಇವೆ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. “ಇಂದು ಹಿಂದೂಗಳು ಬಂದು ದೇವಸ್ಥಾನ ಕಟ್ಟುತ್ತೇವೆ ಅನ್ನುತ್ತಾರೆ. ನಾಳೆ ದಿನ ಚರ್ಚು ಮತ್ತು ಮಸೀದಿ ಕಟ್ಟುತ್ತೇವೆ ಎಂದು ಎನ್ನುತ್ತಾರೆ. ಹೀಗೆ ಆದರೆ ಇದು ವಿಶ್ವವಿದ್ಯಾಲಯ ಆಗಿ ಉಳಿಯುತ್ತದೆಯೆ” ಎಂದು ಅವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...