Homeಚಳವಳಿನಿಷೇಧದ ನಡುವೆಯೂ ಬೆಂಗಳೂರಿನಲ್ಲಿ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣ: ದೂರು ದಾಖಲು

ನಿಷೇಧದ ನಡುವೆಯೂ ಬೆಂಗಳೂರಿನಲ್ಲಿ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣ: ದೂರು ದಾಖಲು

- Advertisement -
- Advertisement -

ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಸಫಾಯಿಗಳ ಪುನರ್ವಸತಿ ಅಧಿನಿಯಮ 2013ರನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಸ್ವಚ್ಛತಾ ಕಾರ್ಯದಲ್ಲಿ ಕಡ್ಡಾಯವಾಗಿ ಯಂತ್ರೋಪಕರಣ ಬಳಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಪದೇ ಪದೇ ಹೇಳಿದರೂ ಅದು ಪಾಲನೆಯಾಗದಿರುವುದು ದುರಂತದ ಸಂಗತಿಯಾಗಿದೆ. ಇಂದು ಬೆಳಿಗ್ಗೆ ಬೆಂಗಳೂರಿನ ಇನ್‌ಫ್ಯಾಂಟ್ರಿ ರಸ್ತೆಯಲ್ಲಿ ಪೌರ ಕಾರ್ಮಿಕರು ಯಾವುದೇ ಸುರಕ್ಷತಾ ವಸ್ತುಗಳನ್ನು ಬಳಸದೆ ಕೈಯಿಂದಲೇ ಶೌಚ ಗುಂಡಿ ಸ್ವಚ್ಛ ಮಾಡಿದ್ದು, ಈ ಕೆಲಸಕ್ಕೆ ನಿಯೋಜಿಸಿದ ಸೂಪರ್‌ವೈಸರ್ ವಿರುದ್ಧ ದೂರು ನೀಡಲಾಗಿದೆ.

ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರಾದ ವಿನಯ್‌ ಶ್ರೀನಿವಾಸ್‌ರವರು ಈ ಘಟನೆಯನ್ನು ಗಮನಿಸಿ ಕಾರ್ಮಿಕರಿಗೆ ಕೆಲಸ ನಿಲ್ಲಿಸಲು ತಿಳಿಸಿದ್ದಾರೆ. ನಿಮ್ಮನ್ನು ಈ ಕೆಲಸಕ್ಕೆ ನಿಯೋಜಿಸಿದ ಸೂಪರ್‌ ವೈಸರ್‌ರವನ್ನು ಕರೆದುಕೊಂಡು ಬನ್ನಿ ಎಂದು ತಿಳಿಸಿ ಹತ್ತಿರದ ಪೊಲೀಸ್ ಠಾಣೆಯಲ್ಲಿ ಸೂಪರ್‌ ವೈಸರ್ ವಿರುದ್ಧ ದೂರು ನೀಡಿದ್ದಾರೆ. ಜೊತೆಗೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮುಂದೆ ಜರುಗದಂತೆ ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ನಿಲ್ಲದ ಕ್ರೂರ ಪದ್ದತಿ

ವಿಜ್ಞಾನ, ನಾಗರಿಕತೆ ಎಷ್ಟೆಲ್ಲಾ ಅಭಿವೃದ್ದಿ ಹೊಂದಿದ್ದರೂ ಕೆಲ ಸಾಮಾಜಿಕ ಅನಿಷ್ಟ ಪದ್ಧತಿಗಳು ಇಂದಿಗೂ ಜಾರಿಯಲ್ಲಿರುವುದು ಇಡೀ ಭಾರತೀಯರು ತಲೆತಗ್ಗಿಸಬೇಕಾದ ವಿಚಾರ. ತಳಸಮುದಾಯದ ಜನರ ಮೇಲೆ ಮೇಲ್ಜಾತಿ, ಮೇಲ್ವರ್ಗದ ಜನರು ಹೇರಿದ ಮಲ ಹೊರುವ, ಮಲ ಬಾಚುವ (ಮ್ಯಾನುವಲ್ ಸ್ಕ್ಯಾವೆಜಿಂಗ್) ಕೆಲಸಗಳು 21ನೇ ಶತಮಾನದಲ್ಲಿಯೂ ಮುಂದುವರೆಯುತ್ತಿದ್ದರೂ ಜಡಗಟ್ಟಿದ ಸಮಾಜಕ್ಕೆ ಏನೇನು ಅನ್ನಿಸುತ್ತಿಲ್ಲ. ಈ ಕುರಿತು ಸಾವಿರಾರು ಚರ್ಚೆಗಳು ನಡೆದರೂ ಫಲಿತಾಂಶ ಮಾತ್ರ ತೀರಾ ಕಡಿಮೆ. ಇದಕ್ಕೆ ಕಾರಣ ಈ ಅನಿಷ್ಠ ಕೆಲಸವನ್ನು ಮಾಡುತ್ತಿರುವವರು ತಳಸಮುದಾಯದವರು. ಅವರ ಬಗ್ಗೆ ಯಾವ ಸರ್ಕಾರಗಳಿಗೂ, ಯಾವ ಪಕ್ಷಗಳಿಗೂ ಕಾಳಜಿಯಿಲ್ಲ ಮಾತ್ರವಲ್ಲ ಅವರಿರುವುದೇ ತಮ್ಮ ಸೇವೆ ಮಾಡುವುದಕ್ಕಾಗಿ ಎಂಬ ಫ್ಯೂಡಲ್ ಮನಸ್ಥಿತಿ. ಅಸಮಾನತೆ, ಅನ್ಯಾಯದ ತಳಹದಿಯ ಮೇಲಿರುವ ಈ ಸಮಾಜ ವ್ಯವಸ್ಥೆ ಇಂತಹ ಅನಿಷ್ಠ ಪದ್ಧತಿಗಳನ್ನು ಪೋಷಿಸುತ್ತಾ ಬರುತ್ತಿವೆ ಎನ್ನುವುದು ಚಾರಿತ್ರಿಕ ಸತ್ಯ.

ಕಳೆದ ಹಲವಾರು ದಶಕಗಳಿಂದ ಮಲಬಾಚುವ ಪದ್ದತಿಯನ್ನು ನಿರ್ಮೂಲನೆ ಮಾಡಬೇಕು, ಸಂಪೂರ್ಣ ಆಧುನಿಕ ಯಾಂತ್ರಿಕೃತ ವ್ಯವಸ್ಥೆ ಜಾರಿಗೊಳಿಸಬೇಕೆಂದು ಸಾವಿರಾರು ಹೋರಾಟಗಳು ನಡೆದಿವೆ. ಆದರೆ ಈ ಪದ್ದತಿ ಮಾತ್ರ ಕೊನೆಗೊಂಡಿಲ್ಲ.

ಕಾನೂನು ಏನು ಹೇಳುತ್ತದೆ?

ಮ್ಯಾನುವಲ್ ಸ್ಕ್ಯಾವೆಂಜಿಂಗ್ ಅನ್ನು ಸರ್ಕಾರ ಕಾನೂನುಗಳ ಮೂಲಕ ನಿಷೇಧಿಸಿದೆ. ಏಕೆಂದರೆ ಈ ಕೆಲಸ ಮಾಡುವಾಗ ಉಸಿರುಗಟ್ಟಿ, ಆಮ್ಲಜನಕದ ಕೊರತೆಯಿಂದ ಸಾವಿರಾರು ಪೌರಕಾರ್ಮಿಕರು ಪ್ರಾಣ ತೆತ್ತಿದ್ದಾರೆ. ಅದನ್ನು ತಡೆಯುವುದಕ್ಕಾಗಿ ಯಾರೇ ಅಧಿಕಾರಗಳು, ಸೂಪರ್‌ವೈಸರ್‌ಗಳು, ಮೇಸ್ತ್ರಿಗಳು ಪೌರಕಾರ್ಮಿಕರಿಂದ ಈ ಕೆಲಸ ಮಾಡಿಸಬಾರದೆಂದು ಕಟ್ಟು ನಿಟ್ಟಿನ ನಿಯಮಗಳನ್ನು ಹೇರಲಾಗಿದೆ. ಹಾಗಿದ್ದರೂ ಬಡವರ ಜೀವವನ್ನು ಲೆಕ್ಕಿಸದೆ ದುಷ್ಟ ಅಧಿಕಾರಿಗಳು ಪೌರ ಕಾರ್ಮಿಕರಿಂದ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಮಾಡಿಸಿತ್ತಿರುವುದು ಅಲ್ಲಲ್ಲಿ ವರದಿಯಾಗುತ್ತಲೇ ಇದೆ.

ಯಾವುದೇ ವ್ಯಕ್ತಿಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ನ ಅಪಾಯಕಾರಿ ಶುಚಿಗೊಳಿಸುವಿಕೆಗಾಗಿ ಬಳಸಿಕೊಳ್ಳಬಾರದು ಎಂದು 2013 ರ ಕಾನೂನು ಸ್ಪಷ್ಟಪಡಿಸಿದೆ. ಇದಕ್ಕಾಗಿ ಯಂತ್ರಗಳನ್ನು ಮಾತ್ರವೇ ಬಳಸಬೇಕೆಂದು ಸೂಚಿಸಿದೆ.

ಇದುವರೆಗೂ ಸಫಾಯಿ ಕರ್ಮಚಾರಿಗಳಾಗಿದ್ದವರಿಗೆ ಪರ್ಯಾಯ ಪುನರ್‌ವಸತಿ ಕಲ್ಪಿಸುವುದು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕರ್ತವ್ಯವಾಗಿರುತ್ತದೆ.

2013 ರ ಕಾಯಿದೆ ಮತ್ತು 2013 ರ ನಿಯಮಗಳ ಅಡಿಯಲ್ಲಿ ಒಳಗೊಂಡಿರುವ ಶಾಸನಬದ್ಧ ನಿಬಂಧನೆಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಸಂಸ್ಥೆಗಳ ಎಲ್ಲಾ ಅಧಿಕಾರಿಗಳಿಗೆ ಜಾಗೃತಿ ಮೂಡಿಸುವುದು ಜಿಲ್ಲಾಧಿಕಾರಿಗಳ ಕರ್ತವ್ಯವಾಗಿರುತ್ತದೆ.

ಒಂದು ವೇಳೆ ಶಾಸನಬದ್ಧ ನಿಬಂಧನೆಗಳನ್ನು ಅನುಸರಿಸದಿದ್ದಲ್ಲಿ ಮತ್ತು ಈ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ, ಜಿಲ್ಲಾಧಿಕಾರಿಗಳನ್ನು ಜಿಲ್ಲಾ ಮ್ಯಾಜಿಸ್ಟ್ರೇಟರು ಕಾಯಿದೆಯ ಅಡಿಯಲ್ಲಿ ವಿಚಾರಣೆ ನಡೆಸುವ, ಶಿಕ್ಷಿಸುವ ಅಧಿಕಾರವಿದೆ.

ಕೊಳಚೆ ತೆಗೆಯುವ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40 ಕ್ಕೂ ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ ಸಲಕರಣೆಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ. ಈ ಕೆಲಸಕ್ಕಾಗಿ ಸ್ಥಳೀಯ ಸಂಸ್ಥೆಗಳಲ್ಲಿ 14 ಯಂತ್ರೋಪಕರಣಗಳಾದರೂ ಇರಬೇಕು ಎಂದು ಕಾನೂನು ಹೇಳುತ್ತದೆ. ಈ ಸಂಬಂಧ 2013ರ ಡಿಸೆಂಬರ್‌ ನಲ್ಲಿ ಹೈಕೋರ್ಟ್‌ ಎಚ್ಚರಿಸಿತ್ತು. ಆದರೂ ಮಲದಗುಂಡಿಗೆ ಇಳಿದಿದ್ದ ಇಬ್ಬರು ಸಫಾಯಿ ಕರ್ಮಚಾರಿಗಳು ಸಾವನ್ನಪ್ಪಿದ್ದ ಪ್ರಕರಣಗಳು ಘಟಿಸಿದ್ದವು. 2021ರ ಜನವರಿಯಲ್ಲಿ ಕಲುಬುರಗಿ ಜಿಲ್ಲೆಯಲ್ಲಿ ಒಬ್ಬರು, ಜೂನ್‌ನಲ್ಲಿ ರಾಮನಗರ ಜಿಲ್ಲೆಯ ಒಬ್ಬರು ಸಾವನ್ನಪ್ಪಿದ್ದರು. ಇದನ್ನು ಪ್ರಸ್ತಾಪಿಸಿರುವ ಹೈಕೋರ್ಟ್‌, ಕಾನೂನು ಪಾಲನೆಯಲ್ಲಿ ಲೋಪವಾಗಿದ್ದಲ್ಲಿ ಮುಂದಿನ ವಿಚಾರಣೆಯಲ್ಲಿ ಈ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಸೂಚಿಸಿತ್ತು.

ಜಾತಿ ವಿನಾಶವೇ ಪರಿಹಾರ – ಎಸ್ ಬಾಲನ್

ಬೆಂಗಳೂರಿನಲ್ಲಿ ಹತ್ತಾರು ವರ್ಷಗಳಿಂದ ಪೌರಕಾರ್ಮಿಕರನ್ನು ಸಂಘಟಿಸಿ ಹೋರಾಟ ನಡೆಸುತ್ತಿರುವ ಹಿರಿಯ ಕಾರ್ಮಿಕ ಮುಖಂಡರಾದ ಎಸ್.ಬಾಲನ್‌ ರವರು ಈ ಕುರಿತು ಹೇಳುವುದು ಹೀಗೆ.. “ಮಲ ಬಾಚುವ ಪದ್ದತಿಯು ಆದಿ ಆಂಧ್ರ, ಅರುಂಧತಿಯಾರ್, ಚಕ್ಲಿಯರ್, ಮಾದಿಗರು ಜಾತಿಗೆ ಸಂಬಂಧಿಸಿದೆ. ಈ ಜಾತಿಗಳು ಮಾತ್ರ ಈ ಕೆಲಸ ಮಾಡುತ್ತಿವೆ. ಬ್ರಿಟೀಷರ ಕಾಲದ ಹಾಗೂ ಈಗಲೂ ಸಹ ಇವರು ಮೋರಿಗಳು ಎಲ್ಲಿವೆಯೋ ಅಲ್ಲಿಯೇ  ವಾಸಿಸುತ್ತಿದ್ದಾರೆ. ಸಂವಿಧಾನದ 17ನೇ ಆರ್ಟಿಕಲ್ ಇದೆ, 1993ರಲ್ಲಿ ಮಲಹೊರುವ ಪದ್ದತಿ ನಿಷೇಧ ಕಾಯ್ದೆ ಬಂತು. ಎಷ್ಟೇ ಕಾನೂನುಗಳು ಬಂದರೂ ಈ ಅನಿಷ್ಠ ಪದ್ದತಿಯನ್ನು ತಡೆಗಟ್ಟಲು ಸಾಧ್ಯವಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ನಿಜವಾಗಿಯೂ ಇದು ಪರಿಹಾರವಾಗಬೇಕಾದರೆ ಜಾತಿ ವ್ಯವಸ್ಥೆ ನಾಶವಾಗಬೇಕು. ಆದರೆ ಇಂದು ಜಾತಿಗಳು ಮತ್ತಷ್ಟು ಸಂಘಟಿತವಾಗುತ್ತಿವೆ. ಹಿಂದೂ ಧರ್ಮ ಜಾತಿಪದ್ದತಿಯನ್ನು ಪೋಷಿಸುತ್ತಿದೆ. ಕಾರ್ಪೋರೇಟ್ ಕಂಪನಿಗಳು, ದೊಡ್ಡ ದೊಡ್ಡ ಮಾಲ್‌ಗಳಲ್ಲಿ ಈ ಜನರನ್ನು ಶೌಚಾಲಯಗಳ ಒಳಗಡೆಯೆ ಬಂಧಿಸಲಾಗಿದೆ. ಹಾಗಾಗಿ ಈ ಕಾನೂನುಗಳನ್ನು ನಾನು ನಂಬುವುದಿಲ್ಲ. ಜಾತಿ ನಾಶವಾಗದೆ ಇದು ನಿರ್ಮೂಲನೆಯಾಗುವುದಿಲ್ಲ. ಮೋದಿಯವರು ಪೌರ ಕಾರ್ಮಿಕರ ಕಾಲು ತೊಳೆದು ನಾಟಕ ಮಾಡುತ್ತಾರೆ ಆದರೆ ಪೌರ ಕಾರ್ಮಿಕರ ನೌಕರಿಯನ್ನು ಕಾಯಂ ಮಾಡುವುದಿಲ್ಲ ಏಕೆ” ಎಂದು ಬಾಲನ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ; ಮಲ ಬಳಿಸುವ ಕ್ರೌರ್ಯಕ್ಕೆ ಕೊನೆಯೆಂದು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...