Homeಮುಖಪುಟಬಿಜೆಪಿ ಸರ್ಕಾರದ ಜನಸ್ಪಂದನದ ವಿರುದ್ಧ ಕರಾಳೋತ್ಸವ ಪ್ರತಿಭಟನೆ: 100ಕ್ಕೂ ಅಧಿಕ ಜನರ ಬಂಧನ

ಬಿಜೆಪಿ ಸರ್ಕಾರದ ಜನಸ್ಪಂದನದ ವಿರುದ್ಧ ಕರಾಳೋತ್ಸವ ಪ್ರತಿಭಟನೆ: 100ಕ್ಕೂ ಅಧಿಕ ಜನರ ಬಂಧನ

- Advertisement -
- Advertisement -

ದೊಡ್ಡಬಳ್ಳಾಪುರದಲ್ಲಿ ಇಂದು ನಡೆಯುತ್ತಿರುವ ಬಿಜೆಪಿ ರಾಜ್ಯ ಸರ್ಕಾರದ ಜನಸ್ಪಂದನ ಕಾರ್ಯಕ್ರಮದ ವಿರುದ್ಧ ಕರಾಳೋತ್ಸವ ಪ್ರತಿಭಟನೆ ನಡೆಸಿದ 100 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಹಲವಾರು ವರ್ಷಗಳಿಂದ ಹೋರಾಡುತ್ತಿದೆ. ಅದನ್ನು ಕಡೆಗಣಿಸಿ ಬಿಜೆಪಿ ಸರ್ಕಾರವು ಸಾಧನಾ ಸಮಾವೇಶವನ್ನು ದೊಡ್ಡಬಳ್ಳಾಪುರದಲ್ಲಿ ಹೊರಟಿರುವುದನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳು ಕರಾಳೋತ್ಸವ ಆಚರಣೆಗೆ ಕರೆ ನೀಡಿದ್ದರು.

ಆಗಸ್ಟ್ 15 ರಂದು ದೇವನಹಳ್ಳಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ಒಂದು ತಿಂಗಳ ಒಳಗಾಗಿ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡುತ್ತೇವೆ ಎಂದು ಹೇಳಿದ್ದರು. ಅಂದಿನಿಂದ ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ವತಿಯಿಂದ ಹಂತ ಹಂತವಾಗಿ ಹೋರಾಟಗಳನ್ನು ರೂಪಿಸುತ್ತಿದ್ದಾರೆ. ಒಂದು ಕಾರ್ಖಾನೆಗೆ ಮುಖ್ಯಮಂತ್ರಿ ಬಂದಾಗ ಅವರನ್ನು ಬೇಟಿ ಮಾಡಿ ಮನವಿ ಕೊಟ್ಟಿದ್ದರು, ಮುಖ್ಯಮಂತ್ರಿ ಎರಡೂ ತಾಲ್ಲೂಕಿನ ವರದಿ ತರಿಸಿಕೊಂಡು ತೀರ್ಮಾನಿಸುವುದಾಗಿ ಹೇಳಿದ್ದರು. ಆದರೆ ಸುಧಾಕರ್ ಹೋದಲ್ಲಿ ಬಂದಲ್ಲಿ ದೇವನಹಳ್ಳಿ ಜಿಲ್ಲಾ ಕೇಂದ್ರ ಮಾಡ್ತೀವಿ ಎಂಬ ಹೇಳಿಕೆಗಳನ್ನ ಕೊಡುತ್ತಾ ಬರುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಎಲ್ಲಾ ಮಾನದಂಡಗಳ ಅನ್ವಯ ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವಾಗಿ ಮಾಡಲು ಅರ್ಹತೆ ಹೊಂದಿದೆ.  ಈ ಕುರಿತು ನಾವು ಮುಖ್ಯಮಂತ್ರಿಗಳಿಗೆ ಮನವಿ ಕೊಡಲು ನಿರ್ಧರಿಸಿದ್ದೆವು. ಆದರೆ ಉಸ್ತುವಾರಿ ಸಚಿವರಾದ ಸುಧಾಕರ್‌ರವರು ಪೂರ್ವಗ್ರಹ ಪೀಡಿತರಾಗಿದ್ದಾರೆ. ಅವರು ಸರ್ಕಾರದ ಪ್ರತಿನಿಧಿಯಾಗಿ ವರ್ತಿಸುತ್ತಿಲ್ಲ. ಹಾಗಾಗಿ ನಮಗೆ ಸಿಎಂರನ್ನು ಭೇಟಿ ಮಾಡಲು ಅನುಮತಿ ನೀಡುತ್ತಿಲ್ಲ. ನಮ್ಮ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿದೆ” ಎಂದು ಹೋರಾಟಗಾರರಾದ ಪ್ರಮೀಳಾ ಮಹಾದೇವ್ ಕಿಡಿಕಾರಿದ್ದಾರೆ.

ಕರಾಳೋತ್ಸವ ಅಂಗವಾಗಿ ಇಂದು ನಗರದ ಕನ್ನಡ ಜಾಗೃತ ಭವನದಿಂದ ಜಗದೀಶ್ ವೃತ್ತದವರೆಗೂ ಜಾಥಾ ನಡೆಸಲು ಪ್ರತಿಭಟನಾಕಾರರು ಮುಂದಾಗಿದ್ದರು. ಆದರೆ ಕಪ್ಪು ಪಟ್ಟಿ ಧರಿಸಿ ಕನ್ನಡ ಜಾಗೃತ ಭವನದ ಮುಂದೆ ಪ್ರತಿಭಟನೆ ಮಾಡುತ್ತಿದ್ದ 150 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಜೆಪಿಯದು ಜನೋತ್ಸವವಲ್ಲ ಭ್ರಷ್ಟಾಚಾರೋತ್ಸವ – ಸಿಪಿಐ(ಎಂ) ಟೀಕೆ

ರಾಜ್ಯದ ಬಿಜೆಪಿ ಸರ್ಕಾರದ ಮಂತ್ರಿಗಳು, ಶಾಸಕರು, ತೀವ್ರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ರಾಜ್ಯದಲ್ಲಿ ದುರಾಡಳಿತ ನಡೆಯುತ್ತಿದೆ. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುವುದನ್ನು ಸಿಪಿಐ(ಎಂ) ಪಕ್ಷ ತೀವ್ರವಾಗಿ ಖಂಡಿಸಿದೆ.

ಸರ್ಕಾರದ ಎಲ್ಲಾ ಇಲಾಖೆಗಳ ಕಾಮಗಾರಿಗಳಲ್ಲಿ ಶೇ.40 ಲಂಚ ಪಡೆಯುತ್ತಿದ್ದು, ಗುತ್ತಿಗೆದಾರರ ಸಂಘದ ಮುಖಂಡರು ಪ್ರಧಾನಿ ಸೇರಿದಂತೆ ರಾಜ್ಯದ ಮುಖ್ಯಮಂತ್ರಿಯವರಿಗೆ ದೂರು ನೀಡಿದ್ದರೂ ಸರ್ಕಾರ ಕ್ರಮ ವಹಿಸಿಲ್ಲ. ಖಾಸಗಿ ಶಾಲೆಗಳ ಆಡಳಿತ ವರ್ಗದವರಿಂದ, ಇಲಾಖೆಯ ಎಲ್ಲಾ ಕೆಲಸಗಳಿಗೆ, ಆದೇಶಗಳಿಗೆ ಹಣ ನೀಡದೆ ಕೆಲಸವಾಗುವುದಿಲ್ಲವೆಂದು ಪ್ರಧಾನಮಂತ್ರಿಗೆ ದೂರು ನೀಡಿದ್ದರೂ ಪ್ರಯೋಜನವಿಲ್ಲ. ರಾಜ್ಯದ ಬೊಕ್ಕಸವನ್ನು ಲೂಟಿಮಾಡುವ ಮೂಲಕ ಜನರ ತೆರಿಗೆ ಹಣವನ್ನು ಕೊಳ್ಳೆ ಹೊಡೆಯಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಯಾವ ಸಾಧನೆಗಳಿಗಾಗಿ ಜನೋತ್ಸವ ನಡೆಸಲಾಗುತ್ತಿದೆ ಎಂದು ಜನರಿಗೆ ಉತ್ತರಿಸಬೇಕು ಎಂದು ಸಿಪಿಎಂ ಆಗ್ರಹಿಸಿದೆ.

ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕೆಪಿಟಿಸಿಎಲ್ ಪ್ರವೇಶ ಪರೀಕ್ಷೆ ನಡೆಸುವಲ್ಲಿ ಮತ್ತು ನೇಮಕಾತಿಗಳಲ್ಲಿ ಲಕ್ಷಾಂತರ ರೂ ಲಂಚ ಹಗರಣ ನಡೆದಿದೆ. ಬಿಡಿಎ ನಿವೇಶನಗಳನ್ನು ಗೃಹ ಮಂತ್ರಿ ಮತ್ತಿತ್ತರರಿಂದ ಕಬಳಿಕೆ ಪ್ರಕರಣದಲ್ಲಿ ಸುಪ್ರಿಂ ಕೋರ್ಟ್‌ನಿಂದ ಛೀಮಾರಿ ಹಾಕಿದೆ. ಆರೋಗ್ಯ ಸಚಿವರು ಕಂದಾಯ ಸಚಿವ, ಕೈಗಾರಿಕಾ ಸಚಿವರ ಮೇಲಿನ ಭ್ರಷ್ಟಾಚಾರದ ಆರೋಪಗಳಿವೆ. ಚನ್ನರಾಯಪಟ್ಟಣ ಹೋಬಳಿಯ ಬಡ ರೈತರ ಕೃಷಿ ಯೋಗ್ಯ ಭೂಮಿಯನ್ನು ಬಲವಂತವಾಗಿ ವಶಕ್ಕೆ ಪಡೆದು, ಚಾಣಕ್ಯ ಖಾಸಗಿ ವಿವಿಗೆ ಕೆಐಎಡಿಬಿ ಸೇರಿದ 116 ಎಕರೆ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿರುವುದು, ರಾಜ್ಯದ ಬೊಕ್ಕಸಕ್ಕೆ ಸುಮಾರು 250 ಕೋಟಿ ರೂ ನಷ್ಟ ವಾಗಿದೆ. ಟ್ರಸ್ಟ್ ಮತ್ತು ಗೋಶಾಲೆಗಳ ಹೆಸರಿನಲ್ಲಿ ಸಾವಿರಾರು ಎಕರೆ ಭೂಮಿಯನ್ನು ರಾಜ್ಯದಲ್ಲಿ ಕಬಳಿಸಿರುವುದು ಮೊದಲಾಗಿ ಭ್ರಷ್ಟಾಚಾರಗಳು ನಡೆದಿವೆ ಎಂದು ಸಿಪಿಎಂ ಮುಖಂಡರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯಾ ಅವರಿಗೆ ‘ಉಚಿತ ದೋಸೆ’ ರವಾನೆ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...