Homeಕರ್ನಾಟಕನ್ಯಾಯಾಂಗವಾದರೂ ಮಕ್ಕಳ ನೋವು ಕೇಳಲಿ, ನ್ಯಾಯ ನೀಡಲಿ: ಒಡನಾಡಿ ಸ್ಟ್ಯಾನ್ಲಿ ಒತ್ತಾಯ

ನ್ಯಾಯಾಂಗವಾದರೂ ಮಕ್ಕಳ ನೋವು ಕೇಳಲಿ, ನ್ಯಾಯ ನೀಡಲಿ: ಒಡನಾಡಿ ಸ್ಟ್ಯಾನ್ಲಿ ಒತ್ತಾಯ

- Advertisement -
- Advertisement -

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಕ್ಕಳಿಗೆ ನ್ಯಾಯ ಕೊಡಿಸುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ, ಹಾಗಾಗಿ ನ್ಯಾಯಾಂಗವಾದರೂ ಮಕ್ಕಳ ನೋವು ಕೇಳಲಿ, ಸಾಂತ್ವಾನ ಹೇಳಿ ನ್ಯಾಯ ನೀಡಬೇಕು ಎಂದು ಒಡನಾಡಿ ಸಂಸ್ಥೆಯ ಮುಖ್ಯಸ್ಥ ಕೆ.ವಿ ಸ್ಟ್ಯಾನ್ಲಿ ಒತ್ತಾಯಿಸಿದರು.

ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು ಮತ್ತು ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಇಂದು ಚಿತ್ರದುರ್ಗದಲ್ಲಿ ನಡೆದ  ‘ಮಕ್ಕಳೊಡನೆ ನಾವು’ ಬೃಹತ್ ಬೈಕ್ ಜಾಥಾ ಉದ್ದೇಶಿಸಿ ಅವರು ಮಾತನಾಡಿದರು.

ಬಾಬಾಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನ, ಸಮಾನತೆಯ ಹಕ್ಕುಗಳನ್ನು ಇಂದು ಕಿತ್ತುಕೊಳ್ಳಲಾಗುತ್ತಿದೆ. ತುಳಿತಕ್ಕೊಳಗಾದ ನಮ್ಮ ಮಕ್ಕಳು ಲೈಂಗಿಕ ದೌರ್ಜನ್ಯಗಳಂತಹ ಕ್ರೌರ್ಯಗಳಿಗೆ ಒಳಗಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಂವಿಧಾನ ಮತ್ತು ಕಾನೂನುಗಳನ್ನು ಪಾಲಿಸಬೇಕಾದ ಸರ್ಕಾರಗಳು ಉಳ್ಳವರನ್ನು ರಕ್ಷಿಸುವ ನಿಟ್ಟಿನಲ್ಲಿ ಮಕ್ಕಳ ಹಕ್ಕುಗಳಿಗೆ ಚ್ಯುತಿ ತರುತ್ತಿದೆ. ಹಾಗಾಗಿ ಚಿತ್ರದುರ್ಗದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ಆದರೆ ಈ ವ್ಯವಸ್ಥೆ ಮಕ್ಕಳ ವಿರುದ್ಧ ನಡೆದುಕೊಳ್ಳುತ್ತಿರುವುದನ್ನು ನೋಡಿ ರೋಸಿಹೋಗಿ ನಾವಿಲ್ಲಿ ಸೇರಿದ್ದೇವೆ. ಇಲ್ಲಿ ನಡೆಯುತ್ತಿರುವುದು ಬಡವರ, ದಲಿತರ, ಕಾರ್ಮಿಕರ ಮತ್ತು ನಿಜವಾದ ಧಾರ್ಮಿಕರ ಮೆರವಣಿಗೆಯಾಗಿದೆ. ಈ ಸರ್ಕಾರಕ್ಕಂತೂ ಮಕ್ಕಳಿಗೆ ನ್ಯಾಯ ಕೊಡುವ ಯೋಗ್ಯತೆ ಇಲ್ಲ. ಹಾಗಾಗಿ ಇಲ್ಲಿನ ಮಕ್ಕಳ ನೋವು ನ್ಯಾಯಾಂಗಕ್ಕೆ ಕೇಳಲಿ, ನ್ಯಾಯಮೂರ್ತಿಗಳು ಇದೇ ರೀತಿ ಅನ್ಯಾಯಕ್ಕೊಳಗಾದ ನೂರಾರು ಮಕ್ಕಳಿಗೆ ಸಾಂತ್ವಾನ ಹೇಳಿ, ತನಿಖೆ ನಡೆಸಿ ನ್ಯಾಯ ಕೊಡಿಸಲಿ ಎಂಬುದಕ್ಕಾಗಿ ಪ್ರತಿಭಟಿಸುತ್ತಿದ್ದೇವೆ ಎಂದರು.

ಡಾ.ಶಿವಮೂರ್ತಿ ಶರಣರ ಮೇಲೆ ದೂರು ದಾಖಲಾಗಿ ಹಲವು ದಿವಸಗಳು ಕಳೆದಿವೆ. ಬಂಧನಕ್ಕೆ ವಿಳಂಬ ಮತ್ತು  ಸಾಕ್ಷಿ ನಾಶ ಮಾಡಲು ಆರೋಪಿಗೆ ಹಾಗೂ ಅವರ ಬೆಂಬಲಿಗರಿಗೆ ಅವಕಾಶ ನೀಡಲಾಗಿದೆ. ಆರೋಪಿಗಳ ಬಂಧನವಾದ ಮೇಲೂ ಸಹ ಆಸ್ಪತ್ರೆ ಹಾಗೂ ಜೈಲು ಸಿಬ್ಬಂದಿಗಳು ಆರೋಪಿಯನ್ನು ಬಚಾವ್ ಮಾಡಲು ನಡೆದುಕೊಂಡ ರೀತಿ ಹಲವು ಅನುಮಾನಗಳಿಗೆ ಅನುವು ಮಾಡಿಕೊಟ್ಟಿದೆ. ಹಾಗಾಗಿ ನ್ಯಾಯಾಂಗ ತನಿಖೆಯೊಂದೆ ನಮಗೆ ಭರವಸೆಯಾಗಿ ಕಾಣುತ್ತಿದೆ ಎಂದು ಸ್ಟ್ಯಾನ್ಲಿ ಹೇಳಿದ್ದಾರೆ.

ಇನ್ನೊಂದೆಡೆ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಆನೇಕ ಜನರು ಹಿಂದೆ ಘಟಿಸಿದ ಹಲವಾರು ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಅತ್ಯಾಚಾರ, ಗರ್ಭಪಾತ ತೆಗಿಸಿ ಹಾಕಿರುವ ಪ್ರಕರಣಗಳು, ಅಲ್ಲದೆ ಅಪಾರ ಪ್ರಮಾಣದ ಹಣಕಾಸು ಆಸ್ತಿ ನೀಡಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯವನ್ನು ಕಾನೂನಿನ ಕಣ್ಣಿನಿಂದ ತಪ್ಪಿಸಿದ್ದಾರೆ ಎನ್ನುವುದರ ಬಗ್ಗೆ ವಿವರಗಳು ಜನರಿಂದ, ಸಂತ್ರಸ್ತರಿಂದ, ಇತರೆ ಸ್ವಾಮೀಜಿಗಳಿಂದ, ಅಲ್ಲದೆ ಪತ್ರಕರ್ತರಿಂದ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಒಂದು ಪುರಾತನ ಪ್ರತಿಷ್ಠಿತ ಇತಿಹಾಸವುಳ್ಳ ಮುರುಘಾ ಮಠದ ಮೇಲೆ ನಮಗಿರುವ ಗೌರವದ ಹೊರತಾಗಿಯೂ ಸಮಾಜ ಹಾಗೂ ಸರ್ಕಾರಗಳ ಮೇಲೆ ಅದರ ಪ್ರಭಾವವನ್ನು ಹಲ್ಲೆಗಳೆಯುವಂತಿಲ್ಲ. ಆಡಳಿತ ರೂಢ ಸರ್ಕಾರದ ಅನೇಕ ನಾಯಕರು, ಮಂತ್ರಿಗಳು, ಸಚಿವರು, ಆರೋಪಿಯ ಪರ ನಿಂತು ಸಾಂತ್ವನ ಹೇಳಿರುವುದನ್ನು ಹಾಗೂ ಸ್ವಾಮೀಜಿ ತಪ್ಪು ಮಾಡಿಲ್ಲ ಎಂಬ ಹೇಳಿಕೆಯನ್ನು ಮಾಧ್ಯಮಗಳ ಮೂಲಕ ದೇಶವೇ ಗಮನಿಸಿದೆ. ಸಂತ್ರಸ್ಥ ಮಕ್ಕಳ ಪರವಾಗಿ ನಿಲ್ಲಬೇಕಾಗಿದ್ದ ಯಾರೊಬ್ಬ ಸಚಿವರು ಸಂತ್ರಸ್ತರಿಗೆ ಧೈರ್ಯ ಹೇಳದಿರುವುದು ವಿಷಾಧನೀಯ ಸಂಗತಿಯಾಗಿದೆ. ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಆರೋಪಿಗಳ ನಿಂತಿದೆಯೇನೋ ಎಂಬ ಆತಂಕ ಪ್ರತಿಯೊಬ್ಬರಲ್ಲೂ ಕಾಡುತ್ತಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿ ಮೇಲೆ ದೌರ್ಜನ್ಯ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...