Homeಮುಖಪುಟನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ: VHP ಗೆ ಕುನಾಲ್ ಕಮ್ರಾ ಸವಾಲು

ನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ: VHP ಗೆ ಕುನಾಲ್ ಕಮ್ರಾ ಸವಾಲು

ನಾನು ಹೆಮ್ಮಯಿಂದ ಜೈ ಶ್ರೀ ಸೀತಾ-ರಾಮ್, ಜೈ ರಾಧ ಕೃಷ್ಣ ಎಂದು ಘೋಷಣೆ ಕೂಗುತ್ತೇನೆ. ನೀವು ನಿಜವಾದ ಭಾರತದ ಮಕ್ಕಳೆ ಆಗಿದ್ದರೆ ಗೋಡ್ಸೆ ಮುರ್ದಾಬಾದ್ ಎಂದು ಘೋಷಣೆ ಕೂಗುವಿರಾ?

- Advertisement -
- Advertisement -

ಹರಿಯಾಣದಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾರವರ ಪ್ರದರ್ಶನ ರದ್ದುಗೊಳಿಸಿದ VHP ವಿರುದ್ಧ ಕಡಿಕಾರಿರುವ ಅವರು ‘ನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ’ ಎಂದು ಸವಾಲು ಹಾಕಿದ್ದಾರೆ.

ಸೆಪ್ಟಂಬರ್ 17 ಮತ್ತು 18 ರಂದು ಗುರ್ಗಾವ್‌ನ ಸೆಕ್ಟರ್‌ 29ರಲ್ಲಿನ ಸ್ಟುಡಿಯೊ ಎಕ್ಸ್‌ಒ ಬಾರ್‌ನಲ್ಲಿ ಕುನಾಲ್ ಕಮ್ರಾರವರ ಪ್ರದರ್ಶನ ಏರ್ಪಡಿಸಲಾಗಿತ್ತು. ಆದರೆ ಬಜರಂಗದಳ ಮತ್ತು VHP ಕುನಾಲ್ ಕಮ್ರಾರನ್ನು ಹಿಂದೂ ದೇವತೆಗಳನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ತಹಶೀಲ್ದಾರ್‌ ಮೂಲಕ ಒತ್ತಡ ತಂದಿದ್ದರೆ ಪರಿಣಾಮವಾಗಿ ಪ್ರದರ್ಶನ ರದ್ದಾಗಿದೆ.

ಈ ಕುರಿತು VHPಗೆ ಬಹಿರಂಗ ಪತ್ರ ಬರೆದಿರುವ ಕುನಾಲ್ ಕಮ್ರಾ, “ನಾನುಗಿಂತ VHPಗಿಂತ ದೊಡ್ಡ ಹಿಂದೂ. ಏಕೆಂದರೆ ನಿಮ್ಮ ರೀತಿ ಜನರಲ್ಲಿ ಭಯ ಹುಟ್ಟಿಸಿ, ಬೆದರಿಕೆ ಹಾಕಿ ಗಳಿಸಿದ ಹಣದಿಂದ ಜೀವನ ನಡೆಸುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.

ನಾನು ಹೆಮ್ಮಯಿಂದ, ಜೋರಾಗಿ ಜೈ ಶ್ರೀ ಸೀತಾ-ರಾಮ್, ಜೈ ರಾಧ ಕೃಷ್ಣ ಎಂದು ಘೋಷಣೆ ಕೂಗುತ್ತೇನೆ. ನೀವು ನಿಜವಾದ ಭಾರತದ ಮಕ್ಕಳೆ ಆಗಿದ್ದರೆ ಗೋಡ್ಸೆ ಮುರ್ದಾಬಾದ್ ಎಂದು ಘೋಷಣೆ ಕೂಗುವಿರಾ? ಕೂಗಿದಿದ್ದರೆ ನೀವು ದೊಡ್ಡ ಹಿಂದೂ ವಿರೋಧಿಗಳು ಮತ್ತು ಭಯೋತ್ಪಾದನೆ ಬೆಂಬಲಿಗರು ಎಂದು ಕುನಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಡ್ಸೆಯನ್ನು ದೇವರೆಂದು ಪರಿಗಣಿಸುತ್ತೀರೆಂದು ನನ್ನ ಬಳಿ ಹೇಳಬೇಡಿ. ಅದು ನಿಜವಾದರೆ ನೀವು ಮುಂದಕ್ಕೂ ನನ್ನ ಪ್ರದರ್ಶನಗಳನ್ನು ರದ್ದುಗೊಳಿಸಿ. ಈ ಪರೀಕ್ಷೆಯಲ್ಲಿ ನಾನು ಸಂತೋಷದಿಂದ ಗೆದ್ದುಬರುತ್ತೇನೆ ಮತ್ತು ನಿಮಗಿಂತ ದೊಡ್ಡ ಹಿಂದೂ ಎಂದು ನಿರೂಪಿಸುತ್ತೇನೆ. ನಾನು ಕಷ್ಟಪಟ್ಟು ಗಳಿಸಿದ ಹಣದಿಂದ ಜೀವನ ನಡೆಸುತ್ತಿದ್ದೇನೆ ಹೊರತು ನಿಮ್ಮ ರೀತಿ ಜನರನ್ನು ಹೆದರಿಸಿ, ಬೆದರಿಸಿ ಹಣ ವಸೂಲಿ ಮಾಡುತ್ತಿಲ್ಲ. ಇದೊಂದು ನಿಮ್ಮ ಕಾಯಿಲೆಯಾಗಿದೆ ಎಂದು ಅವರು ಬರೆದಿದ್ದಾರೆ.

ನನ್ನ ಇದುವರೆಗಿನ ಕಾಮಿಡಿ ಶೋಗಳಲ್ಲಿ ಹಿಂದೂ ದೇವರನ್ನು ನಿಂದಿಸಿರುವ, ಅವಹೇಳನ ಮಾಡಿರುವ ಪುರಾವೆಗಳಿದ್ದರೆ, ಆ ವಿಡಿಯೋಗಳಿದ್ದರೆ ನನಗೆ ತೋರಿಸಿ. ನಾನು ಸರ್ಕಾರಗಳನ್ನು ಅಣಕ ಮಾಡುತ್ತೇನೆ, ನೀವು ಸರ್ಕಾರದ ಚಮಚಗಳಾಗಿದ್ದರೆ ನಿಮಗೆ ನೋವಾಗುವುದಕ್ಕೆ ಅರ್ಥವಿದೆ. ಆದರೆ ಇದರಲ್ಲಿ ಹಿಂದೂ ಧರ್ಮವನ್ನು ಏಕೆ ಎಳೆದು ತರುತ್ತೀರಿ ಎಂದು ಕಮ್ರಾ ಪ್ರಶ್ನಿಸಿದ್ದಾರೆ.

ಬಾರ್ ಮಾಲೀಕರಿಗೆ ಬೆದರಿಕೆ ಹಾಕಿದ್ದಕ್ಕೆ ನನ್ನ ಪ್ರದರ್ಶನ ರದ್ದುಗೊಂಡಿದೆ. ಹಾಗಾಗಿ ನಾನು ಅವರನ್ನು ದೂಷಿಸುವುದಿಲ್ಲ. ಅವರು ತಮ್ಮ ವ್ಯವಹಾರ ಮಾಡುತ್ತಿದ್ದಾರೆ ಅಷ್ಟೆ. ಅವರು ಈ ಗೂಂಡಾಗಳೊಂದಿಗೆ ವ್ಯವಹರಿಸಲು ಸಾಧ್ಯವೇ? ಅವರು ಪೊಲೀಸರ ಬಳಿ ಸಹ ಹೋಗಲು ಸಾಧ್ಯವಿಲ್ಲ. ಒಂದು ವೇಳೆ ಹೋದರೂ ಸಹ ಪೊಲೀಸರು ದಯವಿಟ್ಟು ಪ್ರದರ್ಶನ ರದ್ದುಗೊಳಿಸಿ ಎಂದು ಮನವಿ ಮಾಡುತ್ತಾರೆ ಅಷ್ಟೆ. ಏಕೆಂದರೆ ಇಡೀ ವ್ಯವಸ್ಥೆಯ ನಿಮ್ಮ ಜೊತೆ ಇದೆ ಎಂದು VHP ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ‘ವಿಶ್ವಗುರು’ ನುಡಿಯಲ್ಲಿ ಆಗಿ ನಡೆಯಲ್ಲಿ ತಪ್ಪಬಹುದೆ?  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....