Homeಮುಖಪುಟ‘ಕಾಂಗ್ರೆಸ್ ಇನ್ನೂ ದೊಡ್ಡ ಪಕ್ಷ’: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌

‘ಕಾಂಗ್ರೆಸ್ ಇನ್ನೂ ದೊಡ್ಡ ಪಕ್ಷ’: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌

- Advertisement -
- Advertisement -

ಹಲವು ರಾಜ್ಯಗಳಲ್ಲಿ ಕಾಂಗ್ರೆಸ್‌ ಹಿನ್ನಡೆ ಅನುಭವಿಸುತ್ತಿದೆ ಎಂದು ಹೇಳುತ್ತಿರುವ ಪ್ರಾದೇಶಿಕ ಪಕ್ಷಗಳಿಗಿಂತ ಭಿನ್ನವಾಗಿ ಆರ್‌ಜೆಡಿ ನಾಯಕ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌‌ ಅವರು, “ವಿಪಕ್ಷಗಳ ಬಣದಲ್ಲಿ ಕಾಂಗ್ರೆಸ್ ಇನ್ನೂ ಅತೀ ದೊಡ್ಡ ಪಕ್ಷವಾಗಿದೆ” ಎಂದು  ಪ್ರತಿಪಾದಿಸಿದ್ದಾರೆ. ಇತರ ಪಕ್ಷಗಳು ಕಾಂಗ್ರೆಸ್‌ ಪ್ರಸ್ತುತತೆಯನ್ನು ಪ್ರಯೋಗಿಕವಾಗಿ ಯೋಚಿಸಬೇಕು ಎಂದು ಅವರು ಹೇಳಿದ್ದಾರೆ.

ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ತೇಜಸ್ವಿ ಯಾದವ್‌, “2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳ ನಡುವೆ ಒಗ್ಗಟ್ಟು ಮೂಡಿಸುವ ಪ್ರಯತ್ನಗಳ ಭಾಗವಾಗಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿದೇಶದಿಂದ ಹಿಂದಿರುಗಿದ ನಂತರ ಅವರನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಭೇಟಿಯಾಗಲಿದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯನ್ನು ಸೋಲಿಸುವುದು ವಿರೋಧ ಪಕ್ಷದ ನಾಯಕರ ಏಕೈಕ “ವೈಯಕ್ತಿಕ ಮಹತ್ವಾಕಾಂಕ್ಷೆ” ಆಗಿರಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಎಲ್ಲಾ ಪ್ರಮುಖ ವಿಪಕ್ಷಗಳ ನಾಯಕರ ಭೇಟಿಯಾದ ಬಿಹಾರ ಸಿಎಂ ನಿತೀಶ್ ಕುಮಾರ್‌‌

“ಒಳ್ಳೆಯ ಆರಂಭವನ್ನು ಮಾಡಲಾಗಿದೆ. ಬಿಹಾರ ಉತ್ತಮ ಮಾದರಿಯನ್ನು ಒದಗಿಸಿದ್ದು, ಅದನ್ನು ಬೇರೆಡೆ ಪುನರಾವರ್ತಿಸಬೇಕು. ನಿತೀಶ್ ಅವರು ಅನೇಕ ನಾಯಕರನ್ನು ಭೇಟಿ ಮಾಡಿದ್ದಾರೆ, ಲಾಲೂ ಅವರು ಕೂಡ ಮಾತನಾಡಿದ್ದಾರೆ, ನಾನು ಕೂಡ ಭೇಟಿಯಾಗುತ್ತೇನೆ” ಎಂದು ತೇಜಸ್ವಿ ಹೇಳಿದ್ದಾರೆ.

“ಸೋನಿಯಾ ಗಾಂಧಿ ಹಿಂತಿರುಗಿದ ನಂತರ, ನಿತೀಶ್‌ ಮತ್ತು ಲಾಲೂ ಅವರು ಮುಂದಿನ ಮಾರ್ಗವನ್ನು ಚರ್ಚಿಸಲು ಅವರನ್ನು ಭೇಟಿ ಮಾಡುತ್ತಾರೆ. ಮುಂದಿನ ಲೋಕಸಭಾ ಚುನಾವಣೆಯ ಕುರಿತು ಸಂವಾದ ಕೊನೆಗೂ ಆರಂಭವಾಗಿದೆ. ಬಿಹಾರದ ಇತ್ತಿಚೆಗಿನ ಬೆಳವಣಿಗೆಗಳ ಮೊದಲು ಈ ವಿಚಾರ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

ಕಳೆದ ತಿಂಗಳು ಬಿಹಾರದಲ್ಲಿ ಬಿಜೆಪಿಯೊಂದಿಗಿನ ಜೆಡಿಯು ಮೈತ್ರಿಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್‌ ಕೊನೆಗೊಳಿಸಿದ್ದು, ಹೊಸ ಸಮ್ಮಿಶ್ರ ಸರ್ಕಾರಕ್ಕಾಗಿ ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡ ಪಕ್ಷಗಳೊಂದಿಗೆ ಕೈಜೋಡಿಸಿದ್ದಾರೆ. ಈ ಬೆಳವಣಿಗೆಯು ಪ್ರತಿಪಕ್ಷಗಲ್ಲಿ ‘ಭರವಸೆ’ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ರಾಷ್ಟ್ರವ್ಯಾಪಿ ಇದೆ ಭಾವನೆ ಮೂಡಿಸುವ ಮಂಥನವನ್ನು ಹುಟ್ಟುಹಾಕಿದೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ಲಾಲು ಯಾದವ್‌ ಹಾಗೂ ರಾಹುಲ್ ಗಾಂಧಿ ಭೇಟಿ ಮಾಡಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌‌

“ಈ ಬೆಳವಣಿಗೆ ಖಂಡಿತವಾಗಿಯೂ ವ್ಯತ್ಯಾಸವನ್ನುಂಟು ಮಾಡುತ್ತದೆ. ಜೆಡಿಯು ನಿರ್ಗಮನದ ನಂತರ ಬಿಜೆಪಿ ಬಲವು ಈಗಾಗಲೇ ಕುಸಿದಿದೆ. ಅಂಕಿ ಅಂಶದ ಪ್ರಕಾರ ಕಾಂಗ್ರೆಸ್, ಆರ್‌ಜೆಡಿ, ಜೆಡಿಯು, ಎಡಪಕ್ಷಗಳ ಒಟ್ಟು ಮತಗಳ ಪ್ರಮಾಣ 50% ಮೀರಿದೆ. ಬಿಹಾರದಲ್ಲಿ 40 ಸ್ಥಾನಗಳ ಪೈಕಿ 39 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಸಾಧನೆಯನ್ನು ಬಿಜೆಪಿ ಪುನರಾವರ್ತಿಸಲು ಸಾಧ್ಯವಿಲ್ಲ. ನಾವು ಕೈಜೋಡಿಸಿ ತಂತ್ರದೊಂದಿಗೆ ಹೋರಾಡಿದರೆ, ಬಿಜೆಪಿ ಖಂಡಿತವಾಗಿಯೂ ಅರ್ಧದಾರಿಯಲ್ಲೇ ನಿಲ್ಲುತ್ತದೆ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಅನ್ನು ಲೆಕ್ಕಾಚಾರದಿಂದ ಹೊರಗಿಡಲು ಸಾಧ್ಯವಿಲ್ಲ ಎಂದು ಹೇಳಿದ ಅವರು, “ಸಂಸತ್ತಿನಲ್ಲಿ ಅವರ ಸಂಖ್ಯೆ ನಮಗಿಂತ ಹೆಚ್ಚಿದೆ ಎಂಬ ನಿಜವನ್ನು ಒಪ್ಪದೆ ಇರಲು ಸಾಧ್ಯವಿಲ್ಲ. ಅಂತಿಮವಾಗಿ ಸಂಖ್ಯೆಗಳು ನಿರ್ಧಾರಕ ಅಂಶವಾಗಿರುತ್ತದೆ ಹೊರತು ಹೇಳಿಕೆಗಳಲ್ಲ. ಇತರ ಪಕ್ಷಗಳು ಹೆಚ್ಚಾಗಿ ತಮ್ಮ ಸ್ವಂತ ರಾಜ್ಯಗಳಿಗೆ ಸೀಮಿತವಾಗಿವೆ. ಆದ್ದರಿಂದ ಜನರು ಪ್ರಾಯೋಗಿಕವಾಗಿ ಯೋಚಿಸಬೇಕು ಮತ್ತು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರಕ್ಕೆ ಭೇಟಿ ನೀಡಿದ ತೆಲಂಗಾಣ ಸಿಎಂ ಕೆಸಿಆರ್‌‌: ‘ಬಿಜೆಪಿ ಮುಕ್ತ ಭಾರತ’ಕ್ಕೆ ಕರೆ

ಬಿಹಾರದ ಬದಲಾವಣೆಯ ನಂತರ ಬಿಜೆಪಿ ಬಿಸಿ ಅನುಭವಿಸುತ್ತಿದೆ ಎಂಬುದು ಅದರ ಸಾರ್ವಜನಿಕ ನಿಲುವುಗಳಲ್ಲಿಯೂ ಪ್ರತಿಫಲಿಸುತ್ತದೆ ಎಂದು ತೇಜಸ್ವಿ ಯಾದವ್ ಹೇಳಿದ್ದು, “ಬಿಹಾರದ ಬೆಳವಣಿಗೆ ಬಿಜೆಪಿಯನ್ನು ಅಭದ್ರಗೊಳಿಸಿದೆ. ತಮ್ಮ ಕಾರ್ಯಕರ್ತರ ನೈತಿಕತೆಯನ್ನು ಹೆಚ್ಚಿಸಲು, ಅವರು ಈಗ 350 ಸೀಟುಗಳ ಗುರಿಯ ಬಗ್ಗೆ ಮಾತನಾಡಲು ಪ್ರಾರಂಭಿಸಿದ್ದಾರೆ. ಅವರು ಸಮಾಜವಾದಿ ರಾಜಕೀಯವನ್ನು ನಾಶಮಾಡಲು ಬಯಸಿದ್ದರು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...