Homeದಲಿತ್ ಫೈಲ್ಸ್ಉತ್ತರ ಪ್ರದೇಶ: ದಲಿತ ಕುಟುಂಬದ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ 35 ಪೊಲೀಸರ ವಿರುದ್ಧ ಸಿಬಿಐ...

ಉತ್ತರ ಪ್ರದೇಶ: ದಲಿತ ಕುಟುಂಬದ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ 35 ಪೊಲೀಸರ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

- Advertisement -
- Advertisement -

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ದಲಿತ ಕುಟುಂಬದ ಸದಸ್ಯರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿದ ಆರೋಪದ ಮೇಲೆ 35 ಪೊಲೀಸ್ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆಗೆ ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ. ಬೇರೆ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತೆ ಒತ್ತಡ ಹೇರಲು ಬೇಕಾಗಿ ಪೊಲೀಸರು ಈ ಕೃತ್ಯ ನಡೆಸಿದ್ದರು ಎಂದು ದಲಿತ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ಸುಮಿತ್ ಕುಮಾರ್ ಮತ್ತು ಅವರ ಸಹೋದರ ಪುನೀತ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. “ಮಥುರಾದ ಕೆಲವು ಪೊಲೀಸ್ ಅಧಿಕಾರಿಗಳು ಇತರ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತೆ ಒತ್ತಡ ಹೇರಲು ಬೇಕಾಗಿ, ನಮ್ಮ ವಿರುದ್ಧ ದೊಡ್ಡ ಸಂಖ್ಯೆಯ ಮೋಸದ ಮತ್ತು ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ” ಎಂದು ಸಹೋದರರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೆಪ್ಟೆಂಬರ್ 6 ರ ಆದೇಶದಲ್ಲಿ ಅಲಹಾಬಾದ್ ಹೈಕೋರ್ಟ್‌‌ ನ್ಯಾಯಮೂರ್ತಿ ಸುನೀತ್ ಕುಮಾರ್ ಮತ್ತು ನ್ಯಾಯಮೂರ್ತಿ ಸೈಯದ್ ವೈಜ್ ಮಿಯಾನ್ ಅವರು, “…ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಎಸ್‌ಸಿ ಆಯೋಗದ ನೋಟಿಸ್‌ನಲ್ಲಿ ಅರ್ಜಿದಾರರ ಕುಟುಂಬದ ವಿರುದ್ಧ ಮಥುರಾ ಜಿಲ್ಲೆಯ ಪೊಲೀಸ್ ಸಿಬ್ಬಂದಿಗಳು ಸುಳ್ಳು ಪ್ರಕರಣಗಳನ್ನು ದಾಖಲಿಸುವ ಹಂತವನ್ನು ನಿರ್ವಹಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿ ಮೇಲೆ ದೌರ್ಜನ್ಯ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ಈ ವರ್ಷ ಮಾರ್ಚ್ 24 ರಂದು ಅಪಹರಣಕ್ಕೆ ಸಂಬಂಧಿಸಿದಂತೆ ದಾಖಲಿಸಲಾದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ  ಮತ್ತು ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ದಲಿತ ಕುಟುಂಬವು ಅಲಹಬಾದ್ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಕೋರಿದ್ದರು.

“ಪ್ರೇಮ್ ಸಿಂಗ್ ಎಂಬಾತ ಪುನೀತ್ ಕುಮಾರ್ ಅವರನ್ನು ಅಕ್ಟೋಬರ್ 4, 2013 ರಂದು ಕೊಲ್ಲಲು ಪ್ರಯತ್ನಿಸಿದ್ದನು. ಹೀಗಾಗಿ ಪುನೀತ್ ಅವರ ತಾಯಿ ಮಾಯಾ ದೇವಿ ಅವರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಬೇಕಿತ್ತು. ಆದರೆ ಪೊಲೀಸರು ಅದರ ಬದಲು ಪುನೀತ್ ಸಹೋದರ ಸುಮಿತ್ ವಿರುದ್ಧ ಸಿಆರ್‌ಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ” ಎಂದು ದಲಿತ ಕುಟುಂಬವೂ ಅರ್ಜಿಯಲ್ಲಿ ಆರೋಪಿಸಿದೆ.

ಪೊಲೀಸರು ತಮ್ಮ ಮಗನ ಮೇಲೆಯೆ ಪ್ರಕರಣ ದಾಖಲಿಸಿದ ನಂತರ ಮಾಯಾ ದೇವಿ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇದರ ನಂತರ ನ್ಯಾಯಾಲಯವು ಅವರ ದೂರಿನ ಆಧಾರದ ಮೇಲೆ ಅಕ್ಟೋಬರ್ 4, 2013 ರ ಘಟನೆಯಲ್ಲಿ ಕೊಲೆಯ ಪ್ರಯತ್ನ, ಗಲಭೆ ಮತ್ತು ಕ್ರಿಮಿನಲ್ ಪಿತೂರಿಗಾಗಿ ಎಫ್‌ಐಆರ್ ದಾಖಲಿಸಲು ಆದೇಶಿಸಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

ನ್ಯಾಯಾಲಯದ ಆದೇಶದ ಮೇರೆಗೆ ಮಥುರಾದ ಹೈವೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಗಳ ಸಹಕಾರದಿಂದ ಪೊಲೀಸ್ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಮಾಯಾದೇವಿಯ ಘನತೆಗೆ ದಕ್ಕೆ ತಂದು, ಅವರ ಮೇಲೆ ಹಲ್ಲೆ ನಡೆಸಿ ಮಾಯಾದೇವಿ ಮತ್ತು ತಮ್ಮ ವಿರುದ್ಧ ಅದೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅರ್ಜಿದಾರರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....