Homeಕರ್ನಾಟಕಹೊಸ ಸಂಸತ್‌ ಕಟ್ಟಡಕ್ಕೆ ‘ಅಂಬೇಡ್ಕರ್‌’ ಹೆಸರಿಡಿ: ಕೇಂದ್ರಕ್ಕೆ ತೆಲಂಗಾಣ ಸರ್ಕಾರ ಒತ್ತಾಯ

ಹೊಸ ಸಂಸತ್‌ ಕಟ್ಟಡಕ್ಕೆ ‘ಅಂಬೇಡ್ಕರ್‌’ ಹೆಸರಿಡಿ: ಕೇಂದ್ರಕ್ಕೆ ತೆಲಂಗಾಣ ಸರ್ಕಾರ ಒತ್ತಾಯ

- Advertisement -
- Advertisement -

ತೆಲಂಗಾಣ ವಿಧಾನಸಭೆಯು ಮಂಗಳವಾರ ಎರಡು ನಿರ್ಣಯಗಳನ್ನು ಅಂಗೀಕರಿಸಿದೆ. ದೆಹಲಿಯ ಹೊಸ ಸಂಸತ್‌ ಕಟ್ಟಡಕ್ಕೆ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಹೆಸರಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒಂದು ನಿರ್ಣಯ ಒತ್ತಾಯಿಸಿದರೆ, ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಹೊಸ ವಿದ್ಯುತ್ ತಿದ್ದುಪಡಿ ಮಸೂದೆಯನ್ನು ವಾಪಸ್‌ ಪಡೆಯುವಂತೆ ಮತ್ತೊಂದು ನಿರ್ಣಯ ಒತ್ತಾಯಿಸಿದೆ.

ಡಾ.ಅಂಬೇಡ್ಕರ್ ಕುರಿತು ನಿರ್ಣಯ ಮಂಡಿಸಿದ ಸಚಿವ ಕೆ.ಟಿ.ರಾಮರಾವ್, ಸಂವಿಧಾನ ರಚನೆಯಲ್ಲಿ ಅವರ ಕೊಡುಗೆಯನ್ನು ಶ್ಲಾಘಿಸಿದರು. ಹೊಸ ರಾಜ್ಯಗಳ ರಚನೆಗೆ ಸಂಬಂಧಿಸಿದ ಸಂವಿಧಾನದ 3 ನೇ ಪರಿಚ್ಛೇದದಿಂದಾಗಿ ತೆಲಂಗಾಣ ರಚನೆಯಾಗಿದೆ ಎಂದು ಬಣ್ಣಿಸಿದ್ದಾರೆ.

ಜೂನ್ 2, 2014ರಂದು ಆಂಧ್ರ ಪ್ರದೇಶವನ್ನು ಇಬ್ಬಾಗ ಮಾಡಿ ತೆಲಂಗಾಣ ರಾಜ್ಯವನ್ನು ರಚಿಸಲಾಯಿತು. “ಭಾರತವು ಪ್ರಜಾಸತ್ತಾತ್ಮಕ ಗಣರಾಜ್ಯವಾಗಲು ಅಂಬೇಡ್ಕರ್ ಕಾರಣ” ಎಂದು ಕೆ.ಟಿ.ಆರ್‌. ಬಣ್ಣಿಸಿದ್ದಾರೆ.

“ಹೊಸ ಸಂಸತ್ತಿನ ಕಟ್ಟಡಕ್ಕೆ ಅಂಬೇಡ್ಕರ್‌ರವರ ಹೆಸರನ್ನು ಇಡುವುದಕ್ಕಿಂತ ಉತ್ತಮವಾದ ಶ್ರದ್ಧಾಂಜಲಿ ಇನ್ನೊಂದಿಲ್ಲ” ಎಂದು ಅವರು ಹೇಳಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಕಾಂಗ್ರೆಸ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಈ ನಿರ್ಣಯವನ್ನು ಬೆಂಬಲಿಸಿವೆ. ಧ್ವನಿ ಮತದ ಮೂಲಕ ಸರ್ವಾನುಮತದಿಂದ ನಿರ್ಣಯ ಅಂಗೀಕಾರವಾಗಿದೆ.

ವಿದ್ಯುತ್ ತಿದ್ದುಪಡಿ ಮಸೂದೆಯನ್ನು ವಿರೋಧಿಸುವ ನಿರ್ಣಯವನ್ನು ಇಂಧನ ಸಚಿವ ಜಿ ಜಗದೀಶ್ ರೆಡ್ಡಿ ಮಂಗಳವಾರ ಮಂಡಿಸಿದರು. ಉದ್ದೇಶಿತ ಶಾಸನವು ರೈತರು, ಸಮಾಜದ ಬಡ ವರ್ಗದ ಜನರು ಮತ್ತು ವಿದ್ಯುತ್ ಕ್ಷೇತ್ರದ ನೌಕರರ ಹಿತಾಸಕ್ತಿಗಳಿಗೆ ಹಾನಿಕಾರಕವಾಗಿದೆ ಎಂದು ಎಚ್ಚರಿಸಿದರು.

ರಾಜ್ಯ ವಿಧಾನಸಭೆಯಲ್ಲೂ ಈ ಕುರಿತು ಚರ್ಚೆಯಾಗಿದ್ದು, ಮಸೂದೆಯನ್ನು ವಾಪಸ್‌ ಪಡೆಯಬೇಕು ಎಂದು ಕೋರಲಾಯಿತು.

ಮಸೂದೆಯನ್ನು ಆಗಸ್ಟ್ 8 ರಂದು ಲೋಕಸಭೆಯಲ್ಲಿ ಮಂಡಿಸಲಾಯಿತು. ವಿದ್ಯುತ್ ಕಾಯಿದೆ- 2003 ಅನ್ನು ತಿದ್ದುಪಡಿ ಮಾಡಲು ಉದ್ದೇಶಿಸಿರುವ ಈ ಮಸೂದೆಗೆ ವಿರೋಧ ಪಕ್ಷಗಳು ವ್ಯಾಪಕ ಟೀಕೆ ವ್ಯಕ್ತಪಡಿಸಿವೆ. ಬಳಿಕ ಮಸೂದೆಯನ್ನು ಪರಿಶೀಲನೆಗಾಗಿ ಇಂಧನ ಸಂಸದೀಯ ಸ್ಥಾಯಿ ಸಮಿತಿಗೆ ಕಳುಹಿಸಲಾಗಿದೆ.

ಇದನ್ನೂ ಓದಿರಿ: ಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

ವಿದ್ಯುತ್ ತಿದ್ದುಪಡಿ ಮಸೂದೆ 2022- ಒಂದು ಪ್ರದೇಶದಲ್ಲಿ ಬಹು ಸೇವಾ ಪೂರೈಕೆದಾರರಿಗೆ ಅವಕಾಶ ನೀಡುತ್ತದೆ. ಗ್ರಾಹಕರಿಗೆ ಆಯ್ಕೆಗಳನ್ನು ಒದಗಿಸುವ ಮೂಲಕ ವಿದ್ಯುತ್ ವಿತರಣಾ ವಲಯದಲ್ಲಿ ಸ್ಪರ್ಧೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತದೆ.

ಮಸೂದೆಯು ಖಾಸಗೀಕರಣವನ್ನು ಉತ್ತೇಜಿಸಬಹುದು. ಸಹಕಾರಿ ಒಕ್ಕೂಟ ವ್ಯವಸ್ಥೆಗೆ ತೊಂದರೆ ಉಂಟುಮಾಡಬಹುದು ಎಂದು ವಿರೋಧ ಪಕ್ಷಗಳು ಆತಂಕ ವ್ಯಕ್ತಪಡಿಸಿವೆ. ವಿದ್ಯುತ್‌ ಪೂರೈಕೆಯಲ್ಲಿ ರೈತರಿಗೆ ನೀಡುತ್ತಿದ್ದ ಸಬ್ಸಿಡಿಯನ್ನು ಕಿತ್ತುಕೊಳ್ಳುವ ಆತಂಕವೂ ಈ ಮಸೂದೆಯಿಂದ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...