Homeದಲಿತ್ ಫೈಲ್ಸ್ಯುಪಿ: ಅಪ್ರಾಪ್ತ ದಲಿತ ಬಾಲಕಿಯರಿಬ್ಬರ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಅತ್ಯಾಚಾರ, ಕೊಲೆ...

ಯುಪಿ: ಅಪ್ರಾಪ್ತ ದಲಿತ ಬಾಲಕಿಯರಿಬ್ಬರ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಅತ್ಯಾಚಾರ, ಕೊಲೆ ಎಂದ ಕುಟುಂಬ

ಬಾಲಕಿಯರಿಬ್ಬರು ಮನೆಯಲ್ಲಿ ಇರುವಾಗ ತನ್ನ ಕಣ್ಣ ಮುಂದೆಯೆ ಮೂವರು ದುಷ್ಕರ್ಮಿಗಳು ಅವರನ್ನು ಅಪಹರಿಸಿದ್ದಾಗಿ ಅವರ ತಾಯಿ ಹೇಳಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಬುಧವಾರ ಇಬ್ಬರು ದಲಿತ ಹದಿಹರೆಯದ ಸಹೋದರಿಯರ ಮೃತದೇಹಗಳು ಮರದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇಬ್ಬರು ಬಾಲಕಿಯರನ್ನು ಬೆಳಗ್ಗೆ ಮೋಟಾರ್‌ ಸೈಕಲ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ಲಾಲ್‌ಪುರ ಗ್ರಾಮದ ನಿವಾಸಿಯಾಗಿರುವ ಅವರ ತಾಯಿ ಆರೋಪಿಸಿದ್ದಾರೆ.

“ನಾನು ಇಬ್ಬರು ಹುಡುಗಿಯರೊಂದಿಗೆ ನನ್ನ ಮನೆಯ ಹೊರಗೆ ಇದ್ದೆ… ನಾನು ಒಳಗೆ ಹೋದ ತಕ್ಷಣ, ಬೈಕ್‌ನಲ್ಲಿ ಹಳದಿ ಮತ್ತು ಬಿಳಿ ಅಂಗಿ ಧರಿಸಿದ್ದ ಇಬ್ಬರು ಹುಡುಗರು ನನ್ನ ಹೆಣ್ಣುಮಕ್ಕಳನ್ನು ಎಳೆದುಕೊಂಡು ಹೋಗಲು ಪ್ರಾರಂಭಿಸಿದರು. ನೀಲಿ ಶರ್ಟ್‌ನ ಇನ್ನೊಬ್ಬ ಯುವಕ ಬೈಕ್‌ ಅನ್ನು ಸ್ಟಾರ್ಟ್ ಮಾಡಿ ಅವರನ್ನು ಕರೆದೊಯ್ದನು” ಎಂದು ಬಾಲಕಿಯರ ತಾಯಿ ಆಜ್‌ತಕ್‌ಗೆ ಹೇಳಿದ್ದಾರೆ. ಆಪಾದಿತ ಅಪಹರಣಕಾರರೆಲ್ಲರೂ ಲಾಲ್‌ಪುರದ ನಿವಾಸಿಗಳು ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಖಿಂಪುರ ಖೇರಿ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಸುಮನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಶವಗಳು ಪತ್ತೆಯಾದ ಸ್ಥಳಕ್ಕೆ ತಲುಪಿದ್ದಾರೆ. ಘಟನಾ ಸ್ಥಳವನ್ನು ತನಿಖೆ ನಡೆಸಲಾಗುತ್ತಿದ್ದು, ಇಬ್ಬರು ಬಾಲಕಿಯರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿ ಮೇಲೆ ದೌರ್ಜನ್ಯ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ಬಾಲಕಿಯರಿಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಉತ್ತರ ಪ್ರದೇಶದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ಘಟನೆ ನಂತರ ಸ್ಥಳೀಯರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಪಕ್ಷಗಳು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿವೆ.

ಇದನ್ನೂ ಓದಿ: ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಸುಮನ್, ಸ್ಥಳೀಯರು ರಸ್ತೆ ತಡೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಪೊಲೀಸರಿಗೆ ತನಿಖೆ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಮೃತ ದೇಹಗಳ ವೀಡಿಯೋವನ್ನು ಟ್ವೀಟ್ ಮಾಡಿರುವ ಸಮಾಜವಾದಿ ಪಕ್ಷವು, ಮುಖ್ಯಮಂತ್ರಿ ಆದಿತ್ಯನಾಥ್ ಅವರು ಮಹಿಳೆಯರ ಸುರಕ್ಷತೆಯ ಕುರಿತಾದ ಪೊಳ್ಳು ಹೇಳಿಕೆಗಳನ್ನು ಈ ಘಟನೆಯು ಸತ್ಯ ಏನೆಂದು ಬಹಿರಂಗಪಡಿಸಿದೆ ಎಂದು ಹೇಳಿದೆ.

“ಯೋಗಿ ಸರ್ಕಾರದ ಅಡಿಯಲ್ಲಿ, ಗೂಂಡಾಗಳು ಪ್ರತಿದಿನ ತಾಯಿ ಮತ್ತು ಸಹೋದರಿಯರಿಗೆ ಕಿರುಕುಳ ನೀಡುತ್ತಿದ್ದು, ಇದು ತುಂಬಾ ನಾಚಿಕೆಗೇಡಿನ ಸಂಗತಿ” ಎಂದು ಪಕ್ಷವು ಟ್ವೀಟ್‌ನಲ್ಲಿ ಬರೆದಿದೆ. ಸರ್ಕಾರ ಈ ಪ್ರಕರಣದ ತನಿಖೆ ನಡೆಸಬೇಕು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಕುಟುಂಬದ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ 35 ಪೊಲೀಸರ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಆಮ್ ಆದ್ಮಿ ಪಕ್ಷ ಕೂಡ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...