Homeಮುಖಪುಟ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಪ್ರಯತ್ನ’: ಪ್ರಕರಣ ದಾಖಲಿಸಿದ ಪಂಜಾಬ್ ಪೊಲೀಸರು

‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಪ್ರಯತ್ನ’: ಪ್ರಕರಣ ದಾಖಲಿಸಿದ ಪಂಜಾಬ್ ಪೊಲೀಸರು

- Advertisement -
- Advertisement -

ಬಿಜೆಪಿ ತನ್ನ ಶಾಸಕರಿಗೆ ಲಂಚ ನೀಡಲು ಯತ್ನಿಸುತ್ತಿದೆ ಎಂಬ ಆಮ್ ಆದ್ಮಿ ಪಕ್ಷದ ದೂರಿನ ಮೇರೆಗೆ ಪಂಜಾಬ್ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ. ತನ್ನ ಸರ್ಕಾರವನ್ನು ಉರುಳಿಸಲು ಬಿಜೆಪಿಯ ಪ್ರಯತ್ನದ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಆಡಳಿತರೂಢ ಎಎಪಿ ಪೊಲೀಸರಿಗೆ ಕೋರಿದೆ. ಬಿಜೆಪಿ ಕನಿಷ್ಠ 10 ಶಾಸಕರಿಗೆ ತಲಾ 25 ಕೋಟಿ ರೂ. ಆಫರ್ ಮಾಡಿದೆ ಎಂದು ಎಎಪಿ ಹೇಳಿಕೊಂಡಿದೆ.

ದೆಹಲಿಯಲ್ಲಿ ಈ ಹಿಂದೆ ಬಿಜೆಪಿಯ ಆಪರೇಷನ್ ಕಮಲ ವಿಫಲವಾಗಿತ್ತು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ. ಎಎಪಿಯ ಆರೋಪವನ್ನು ರಾಜ್ಯ ಬಿಜೆಪಿ ನಿರಾಕರಿಸಿದ್ದು, “ಆಧಾರರಹಿತ ಮತ್ತು ಸುಳ್ಳಿನ ಕಂತೆ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜ್ಯ ಸರ್ಕಾರವನ್ನು ಉರುಳಿಸುತ್ತಿದೆ ಎಂದು ಬಿಜೆಪಿ ವಿರುದ್ಧ ಪಂಜಾಬ್ ಸಚಿವ ಹರ್ಪಾಲ್ ಚೀಮಾ ಮಾಡಿರುವ ಆಧಾರರಹಿತ ಆರೋಪವು ಪಂಜಾಬ್‌ನಲ್ಲಿ ಎಎಪಿ ದೊಡ್ಡ ವಿಭಜನೆಯತ್ತ ಹೋಗುತ್ತಿದೆ ಎಂಬುವುದನ್ನು ತೋರಿಸುತ್ತದೆ. ಕೇಜ್ರಿವಾಲ್ ಹಸ್ತಕ್ಷೇಪದಿಂದ ಪಕ್ಷವು ಛಿದ್ರವಾಗುವ ಹಂತದಲ್ಲಿದೆ” ಎಂದು ಬಿಜೆಪಿ ನಾಯಕ ಸುಭಾಷ್ ಶರ್ಮಾ ಹೇಳಿದ್ದಾರೆ.

“ಬಿಜೆಪಿಯು ಒಕ್ಕೂಟ ಸರ್ಕಾರದ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಂಡಿದ್ದು, ಬಿಜೆಪಿ ಪಕ್ಷ ಸೇರಿದರೆ ದೆಹಲಿ ಎಎಪಿ ಶಾಸಕರಿಗೆ ತಲಾ 20 ಕೋಟಿ ನೀಡುವುದಾಗಿ ಆಫರ್‌ ನೀಡಿದೆ” ಎಂದು ಈ ತಿಂಗಳ ಆರಂಭದಲ್ಲಿ ಎಎಪಿ ಆರೋಪಿಸಿತ್ತು.

ಇದನ್ನೂ ಓದಿ: ಡಿಸೆಂಬರ್ 2021 ರವರೆಗೆ ಬಾಕಿ ಉಳಿದ ವಿದ್ಯುತ್ ಬಿಲ್‌ಗಳನ್ನು ಮನ್ನಾ ಮಾಡಿದ ಪಂಜಾಬ್ ಸರ್ಕಾರ

“ಪಕ್ಷ ಬದಲಿಸಲು ಪ್ರತಿ ಶಾಸಕರಿಗೆ 25 ಕೋಟಿ ರೂ. ಬಿಜೆಪಿ ನೀಡುತ್ತಿದೆ. ಆಪರೇಷನ್ ಕಮಲವು ಕರ್ನಾಟಕದಲ್ಲಿ ಯಶಸ್ವಿಯಾಗಿರಬಹುದು, ಆದರೆ ದೆಹಲಿ ಶಾಸಕರು ದೃಢವಾಗಿ ಉಳಿದು ಬಿಜೆಪಿ ಕಾರ್ಯಾಚರಣೆಯನ್ನು ವಿಫಲಗೊಳಿಸಿದ್ದಾರೆ” ಎಂದು ಪಂಜಾಬ್ ಸಚಿವ ಚೀಮಾ ಹೇಳಿದ್ದಾರೆ.

“ಪಂಜಾಬ್‌ನಲ್ಲಿ ಸರ್ಕಾರ ಬದಲಾವಣೆಯಾದರೆ, ಶಾಸಕರಿಗೆ ದೊಡ್ಡ ಬಡ್ತಿಗಳು, ಹುದ್ದೆಗಳನ್ನು ನೀಡಲಾಗುವುದು ಬಿಜೆಪಿ ತನ್ನ ಶಾಸಕರಿಗೆ ಆಫರ್‌ ನೀಡಿರುವುದಾಗಿ” ಎಂದು ಸಚಿವ ಚೀಮಾ ಹೇಳಿದ್ದು, ಭಗವಂತ್ ಮಾನ್ ನೇತೃತ್ವದ ಸರ್ಕಾರವನ್ನು ಉರುಳಿಸಲು ಶಾಸಕರಿಗೆ ಹಲವಾರು ಕರೆಗಳು ಬಂದಿವೆ ಎಂದು ಪುನರುಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...