Homeಮುಖಪುಟದೆಹಲಿ ಬೀದಿಯಲ್ಲಿ ಮಹಿಳೆಯ ಕೂದಲು ಹಿಡಿದು ಹೊಟ್ಟೆಗೆ ಒದ್ದ ದುಷ್ಕರ್ಮಿ: FIR ದಾಖಲಿಸುವಂತೆ ಒತ್ತಾಯಿಸಿದ ಮಹಿಳಾ...

ದೆಹಲಿ ಬೀದಿಯಲ್ಲಿ ಮಹಿಳೆಯ ಕೂದಲು ಹಿಡಿದು ಹೊಟ್ಟೆಗೆ ಒದ್ದ ದುಷ್ಕರ್ಮಿ: FIR ದಾಖಲಿಸುವಂತೆ ಒತ್ತಾಯಿಸಿದ ಮಹಿಳಾ ಆಯೋಗದ ಅಧ್ಯಕ್ಷೆ

- Advertisement -
- Advertisement -

ಚಾಕು ಹಿಡಿದಿರುವ ದುಷ್ಕರ್ಮಿ ಮಹಿಳೆಯೊಬ್ಬರ ಕೂದಲನ್ನು ಹಿಡಿದು ನಿಂದಿಸುತ್ತಾ ಥಳಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಈ ವಿಡಿಯೊ ದೆಹಲಿಯದ್ದು ಎಂದು ಪ್ರತಿಪಾದಿಸಿದ್ದು, ದುಷ್ಕರ್ಮಿಯ ವಿರುದ್ಧ ಎಫ್‌ಐಆರ್‌‌ ದಾಖಲಿಸುವಂತೆ ಬುಧವಾರ ರಾಜ್ಯದ ಪೊಲೀಸರನ್ನು ಒತ್ತಾಯಿಸಿದ್ದಾರೆ.

ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಮಲಿವಾಲ್, ರಾಜಧಾನಿಯ ನಾಸಿರ್‌ಪುರ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಈ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರನ್ನು ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವೈರಲ್ ಆಗಿರುವ ವೀಡಿಯೋದಲ್ಲಿ ದುಷ್ಕರ್ಮಿ ಕೈಯಲ್ಲಿ ಚಾ ಹಿಡಿದಿದ್ದು ಕಾಣಿಸುತ್ತಿದೆ. ಮಹಿಳೆಗೆ ಅಶ್ಲೀಲ ಶಬ್ದಗಳಿಂದ ಬೈಯ್ಯುತ್ತಾ, ಕೂದಲು ಹಿಡಿದು ಎಳೆದು ಅವರ ಹೊಟ್ಟೆಗೆ ಒದೆಯುತ್ತಾನೆ.

ಜುಲೈ ತಿಂಗಳಲ್ಲಿ ದೆಹಲಿಯ ನೆರೆಯ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಇದೇ ರೀತಿಯ ಮತ್ತೊಂದು ಮನಕಲಕುವ ಘಟನೆ ನಡೆದಿತ್ತು. ಆಗ್ರಾ ಸಮೀಪದ ಸಿಕಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಅರ್ಸೇನಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಘಟನೆಯ ಬಳಿಕ ಮಹಿಳೆಯ ಪತಿ ಮತ್ತು ಆತನ ತಾಯಿ ನಾಪತ್ತೆಯಾಗಿರುವುದರಿಂದ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: 53 ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸಿ ಮಹಾರಾಷ್ಟ್ರ ಡಿಸಿಎಂ ಪತ್ನಿ ಅಮೃತಾ ಫಡ್ನವಿಸ್ ಅವರ ನಿಂದನೆ: 50 ವರ್ಷದ ಮಹಿಳೆ ಬಂಧನ

ಅವರಿಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 504 (ಉದ್ದೇಶಪೂರ್ವಕವಾಗಿ ಅವಮಾನಿಸುವುದು), 342 (ಅಕ್ರಮ ಬಂಧನ) ಮತ್ತು 354 (ಮಹಿಳೆಯರ ಘನೆತೆಗೆ ಧಕ್ಕೆ ತರುವುದು) ಅಡಿಯಲ್ಲಿ ದಾಖಲಿಸಲಾಗಿದೆ.

ಪತಿ ಮತ್ತು ಅತ್ತೆ ತನಗೆ ಥಳಿಸಿ ಪೊಲೀಸರಿಗೆ ದೂರು ನೀಡದಂತೆ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ಮಹಿಳೆ ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...