Homeಚಳವಳಿ‘ನ್ಯಾಯಾಂಗ ನಿಂದನೆ’: ಹೋರಾಟಗಾರ ಸವುಕ್ಕು ಶಂಕರ್‌‌ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್‌

‘ನ್ಯಾಯಾಂಗ ನಿಂದನೆ’: ಹೋರಾಟಗಾರ ಸವುಕ್ಕು ಶಂಕರ್‌‌ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್‌

- Advertisement -
- Advertisement -

ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠ ಗುರುವಾರ ಹೋರಾಟಗಾರ ಸವುಕ್ಕು ಶಂಕರ್‌ ಅವರಿಗೆ ನ್ಯಾಯಾಂಗ ನಿಂದನೆ ಪ್ರಕಣದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿಗಳಾದ ಜಿ.ಆರ್.ಸ್ವಾಮಿನಾಥನ್ ಮತ್ತು ಬಿ.ಪುಗಳೇಂತಿ ಅವರ ಪೀಠವು ಈ ಆದೇಶಕ್ಕೆ ತಡೆ ನೀಡಲು ಅಥವಾ ಸವುಕ್ಕು ಶಂಕರ್ ಅವರಿಗೆ ವಿಧಿಸಲಾದ ಶಿಕ್ಷೆಯನ್ನು ಅಮಾನತುಗೊಳಿಸಲು ನಿರಾಕರಿಸಿತು.

ತಮ್ಮ ಹೇಳಿಕೆಗಳನ್ನು ಸಂದರ್ಭಕ್ಕೆ ಹೊರತಾಗಿ ಅರ್ಥೈಸಲಾಗಿದೆ ಮತ್ತು ತಾನು ಮಾತನಾಡಿದ್ದು ನ್ಯಾಯಾಂಗದ ಕಾಳಜಿಯಿಂದ ಎಂದು ಶಂಕರ್ ಅವರು ವಾದಿಸಿದ್ದರು. “ಅವರು ತಮ್ಮ ಹೇಳಿಕೆಯ ಬಗ್ಗೆ ಎಲ್ಲಿಯೂ ತಮ್ಮ ವಿಷಾದ ಅಥವಾ ಪಶ್ಚಾತ್ತಾಪವನ್ನು ವ್ಯಕ್ತಪಡಿಸಿಲ್ಲ ಮತ್ತು ಕ್ಷಮೆಯಾಚಿಸಲಿಲ್ಲ” ಎಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಷ್ಟೆ ಅಲ್ಲದೆ, ಅವರು ತಮ್ಮ ಹೇಳಿಕೆಗಳನ್ನು ಸಮರ್ಥನೆ ಮಾಡಿದ್ದಾರೆ. ಅವರ ಹೇಳಿಕೆಯು ನ್ಯಾಯಾಲಯಗಳು ಮತ್ತು ನ್ಯಾಯಾಧೀಶರ ಪ್ರತಿಷ್ಠೆ ಮತ್ತು ಘನತೆಯನ್ನು ಕಡಿಮೆ ಮಾಡುವ ಸಾಧ್ಯತೆಯಿದೆ. ಆದ್ದರಿಂದ ಅವರು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ನಾವು ಭಾವಿಸುತ್ತೇವೆ” ಎಂದು ಹೈಕೋರ್ಟ್ ತೀರ್ಪಿನಲ್ಲಿ ಹೇಳಿದೆ.

ಇದನ್ನೂ ಓದಿ: ನೂಪುರ್‌‌‌ ಶರ್ಮಾ ಬೆಂಬಲಿಸಿ ಕೋರ್ಟ್ ವಿರುದ್ಧ ಹೇಳಿಕೆ: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ನಿರಾಕರಿಸಿದ ಅಟಾರ್ನಿ ಜನರಲ್

ಸವಕ್ಕು ಶಂಕರ್ ಅವರು ತಮ್ಮ ಯೂಟ್ಯೂಬ್ ಸಂದರ್ಶನದಲ್ಲಿ, “ಇಡೀ ಉನ್ನತ ನ್ಯಾಯಾಂಗವು ಭ್ರಷ್ಟಾಚಾರದಿಂದ ಕೂಡಿದೆ” ಎಂಬ ಎಂದು ಆರೋಪಿಸಿದ್ದರು. ಜೊತೆಗೆ ತಮ್ಮ ಹೇಳಿಕೆಯನ್ನು ಅವರು ಸಮರ್ಥಿಸಿಕೊಂಡಿದ್ದರು.

ಶಂಕರ್‌ ಅವರ ನಡೆಯು ಗಮನಿಸಲು ಅರ್ಹವಾಗಿದೆ ಎಂದು ಪೀಠ ಹೇಳಿದೆ. “ಶಂಕರ್ ಅವರು ತಮ್ಮ ತಪ್ಪನ್ನು ಅರಿತು ಪ್ರಾಮಾಣಿಕವಾಗಿ ಕ್ಷಮೆಯಾಚಿಸಿದ್ದರೆ ನ್ಯಾಯಾಲಯವು ಅವರ ವಿರುದ್ಧದ ವಿಚಾರಣೆಯನ್ನು ಮುಕ್ತಾಯಗೊಳಿಸುತ್ತದೆ” ಎಂದು ಹೈಕೋರ್ಟ್‌ ಹೇಳಿದೆ. ಆದರೆ ಅವರು ಈವರೆಗೆ ಕ್ಷಮೆ ಯಾಚಿಸದೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ ಹೈಕೋರ್ಟ್ ಹೇಳಿದೆ.

ಸವಕ್ಕು ಶಂಕರ್ ಅವರು ಯೂಟ್ಯೂಬ್ ಚಾನೆಲ್ ‘ರೆಡ್‌ಪಿಕ್ಸ್’ನಲ್ಲಿ ಮಾತನಾಡುತ್ತಾ, “ಇಡೀ ನ್ಯಾಯಾಂಗ ವ್ಯವಸ್ಥೆ ಭ್ರಷ್ಟಾಚಾರದಿಂದ ಕೂಡಿದೆ” ಎಂದು ಹೇಳಿದ್ದರು. ಈ ಹೇಳಿಕೆಯ ಆಧಾರದಲ್ಲಿ ಜುಲೈ 22 ರಂದು ಶಂಕರ್ ಅವರ ವಿರುದ್ಧ ಮಧುರೈ ಪೀಠವು ಸ್ವಯಂ ಪ್ರೇರಿತವಾಗಿ ನ್ಯಾಯಾಂಗ ನಿಂದನೆಯ ಮೊಕದ್ದಮೆಯನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ಆಗಸ್ಟ್ 4 ರಂದು ಹೈಕೋರ್ಟ್ ಶಂಕರ್ ವಿರುದ್ಧ ಎರಡನೇ ಬಾರಿಗೆ ನೊಟೀಸ್ ಜಾರಿ ಮಾಡಿ, ತಮ್ಮ ಹೇಳಿಕೆಯ ವಿರುದ್ಧ ಏಕೆ ಯಾಕೆ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಪ್ರಾರಂಭಿಸಬಾರದು ಎಂದು ಕೇಳಿತ್ತು. ಇದರ ನಂತರ ಅವರು ನ್ಯಾಯಾಂಗದ ಬಗ್ಗೆ ತಾನು ನೀಡಿದ ಹೇಳಿಕೆಯನ್ನು ಸಮರ್ಥಿಸುವುದಾಗಿ ಮಧುರೈ ಪೀಠಕ್ಕೆ ತಿಳಿಸಿದ್ದರು.

ಗುರುವಾರ ನಡೆದ ವಿಚಾರಣೆಯಲ್ಲಿ ಪ್ರಕರಣಕ್ಕೆ ನೇಮಕಗೊಂಡಿರುವ ಅಮಿಕಸ್ ಕ್ಯೂರಿ ವಕೀಲ ಎ.ಎಲ್.ಸೋಮಯಾಜಿ ಅವರು, “ಶಂಕರ್ ಅವರ ಹೇಳಿಕೆಯು ನ್ಯಾಯಾಲಯವನ್ನು ದೂಷಿಸುವ ಉದ್ದೇಶದಿಂದ ಮಾಡಲಾಗಿದೆ” ಎಂದು ಪೀಠಕ್ಕೆ ತಿಳಿಸಿದ್ದಾರೆ.

ಗುರುವಾರದ ವಿಚಾರಣೆಯ ಸಮಯದಲ್ಲಿ, ಶಂಕರ್ ಅವರು, “ತಮ್ಮ ದೇಶವನ್ನು ತಾನು ತೀವ್ರವಾಗಿ ಪ್ರೀತಿಸುತ್ತೇನೆ ಮತ್ತು ರಾಷ್ಟ್ರದ ಸಂಸ್ಥೆಗಳನ್ನು ಬಲಪಡಿಸಬೇಕು. ಈ ಉದ್ದೇಶಕ್ಕಾಗಿಯೇ ತಾನು ಮಾತನಾಡುವುದು ಮತ್ತು ಬರೆಯುವುದು” ಎಂದು ಪೀಠದ ಮುಂದೆ ಲಿಖಿತ ಉತ್ತರವನ್ನು ನೀಡಿದ್ದಾರೆ.

ಇದನ್ನೂ ಓದಿ: ರಂಜನ್ ಗೊಗೊಯ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ: ಸಾಕೇತ್ ಗೋಖಲೆ ಆಗ್ರಹ

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮದ್ರಾಸ್ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಚಂದ್ರು, “ತಾನು ಇಂತಹ ಆದೇಶದ ಪರವಾಗಿಲ್ಲ. ಇಂತಹ ಸಮಸ್ಯೆಗಳನ್ನು ನಿಭಾಯಿಸುವಲ್ಲಿ ಸ್ವಲ್ಪ ಹೆಚ್ಚು ಉದಾರವಾಗಿರಬಹುದಿತ್ತು. ಬರೀ ಹೇಳಿಕೆಯೊಂದಕ್ಕೆ ಯಾರನ್ನೂ ಶಿಕ್ಷಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ಗುರುವಾರ ಸಂಜೆಯಿಂದ ಕನಿಷ್ಠ ಅರ್ಧ ಡಜನ್ ನ್ಯಾಯಾಧೀಶರು ನನಗೆ ಕರೆ ಮಾಡಿ ತಮ್ಮ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಿದ್ದು, ಶಿಕ್ಷೆಯ ವಿರುದ್ಧ ಅಸಮ್ಮತಿ ವ್ಯಕ್ತಪಡಿಸಿದರು. ನ್ಯಾಯಾಂಗ ನಿಂದನೆಯ ಅಧಿಕಾರವನ್ನು ತೆಗೆದುಹಾಕುವ ಪರವಾಗಿ ನಾನಿದ್ದೇನೆ. ನ್ಯಾಯಾಂಗ ನಿಂದನೆಯ ಶಿಕ್ಷೆಯು ನ್ಯಾಯಾಲಯದ ಘನತೆಯನ್ನು ಹೆಚ್ಚಿಸುವುದಿಲ್ಲ. ಈ ಸಂದರ್ಭದಲ್ಲಿ, ಅಳವಡಿಸಿಕೊಂಡ ವಿಧಾನವು ಸಂಪೂರ್ಣವಾಗಿ ದೋಷಪೂರಿತವಾಗಿದೆ. ನ್ಯಾಯಾಧೀಶರು ಮಾಡಬಹುದಾದ ಕನಿಷ್ಠ ಕೆಲಸವೆಂದರೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಬಾಕಿ ಇರುವ ಶಿಕ್ಷೆಯನ್ನು ಅಮಾನತುಗೊಳಿಸುವುದು, ಇದು ಶಾಸನಬದ್ಧ ಹಕ್ಕು” ಎಂದು ಜಸ್ಟಿಸ್ ಕೆ.ಚಂದ್ರು ಪ್ರತಿಪಾದಿಸಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವವರೆಗೆ ಅವರ ಶಿಕ್ಷೆಯನ್ನು ಅಮಾನತುಗೊಳಿಸಲು ಮಧುರೈ ಪೀಠವು ನಿರಾಕರಿಸಿತು. ಶಂಕರ್ ಅವರ ಆಕ್ಷೇಪಾರ್ಹ ಸಂದರ್ಶನಗಳು ಮತ್ತು ಲೇಖನವನ್ನು ತೆಗೆದುಹಾಕಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಐದನೇ ಪ್ರತಿವಾದಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಸರ್ಕಾರದ ಕಾರ್ಯದರ್ಶಿಗೆ ನ್ಯಾಯಾಲಯವು ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...