Homeಮುಖಪುಟಉತ್ತರ ಪ್ರದೇಶದಲ್ಲಿ ಉಚಿತ ಪಡಿತರ ಯೋಜನೆ ಹಿಂತೆಗೆತ: 15 ಕೋಟಿ ಜನರ ಮೇಲೆ ಪರಿಣಾಮ

ಉತ್ತರ ಪ್ರದೇಶದಲ್ಲಿ ಉಚಿತ ಪಡಿತರ ಯೋಜನೆ ಹಿಂತೆಗೆತ: 15 ಕೋಟಿ ಜನರ ಮೇಲೆ ಪರಿಣಾಮ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆಯ ಅಡಿಯಲ್ಲಿ ಉಚಿತವಾಗಿ ಅಕ್ಕಿ ಮತ್ತು ಗೋಧಿಯನ್ನು ವಿತರಿಸುವುದನ್ನು ನಿಲ್ಲಿಸಲು ತೀರ್ಮಾನಿಸಿದೆ. ಈ ಪಡಿತರ ಹಿಂತೆಗೆತದಿಂದ ಕನಿಷ್ಠ 3.6 ಕೋಟಿ ಪಡಿತರ ಚೀಟಿದಾರರು- 15 ಕೋಟಿ ಫಲಾನುಭವಿಗಳು- ಸಂಕಷ್ಠಕ್ಕಿಡಗಲಿದ್ದಾರೆ ಎಂದು ಅಂದಾಜಿಸಲಾಗಿದೆ.

ಕೋವಿಡ್-19 ಸಾಂಕ್ರಾಮಿಕ ರೋಗದ ಪ್ರಾರಂಭದಲ್ಲಿ ರಾಜ್ಯ ಸರ್ಕಾರವು ಉಚಿತ ಆಹಾರ ಧಾನ್ಯ ವಿತರಣೆ ಯೋಜನೆಯನ್ನು ಪ್ರಾರಂಭಿಸಿತು. ಇಲ್ಲಿಯವರೆಗೆ, ಸುಮಾರು 15ಕೋಟಿ ಜನರು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದರು. ಅವರು ತಿಂಗಳಿಗೆ ಎರಡು ಬಾರಿ ಉಚಿತ ಪಡಿತರವನ್ನು ಪಡೆಯುತ್ತಿದ್ದರು. ಅಲ್ಲದೆ ಈ ಯೋಜನೆಯು ರಾಜ್ಯ ಬಿಜೆಪಿ ಸರ್ಕಾರಕ್ಕೆ ಖ್ಯಾತಿಯನ್ನು ತಂದುಕೊಟ್ಟಿದ್ದಲ್ಲದೆ 2022ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಮತ ಹಾಕುವಂತೆ ಕೆಲಸ ಮಾಡಿದೆ ಎಂದು ಹಲವರು ವಿಶ್ಲೇಷಿಸಿದ್ದಾರೆ.

ಉತ್ತರ ಪ್ರದೇಶ ರಾಜ್ಯವು ದೇಶದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ (22 ಕೋಟಿ) ರಾಜ್ಯವಾಗಿದೆ.
ರಾಜ್ಯ ಆಹಾರ ಹಾಗೂ ನಾಗರೀಕ ಸರಬರಾಜು ಇಲಾಖೆಯ ಪ್ರಕಾರ, ಪಡಿತರ ಚೀಟಿದಾರರು ಜುಲೈನಲ್ಲಿ ಪಡಿತರ ತೆಗೆದುಕೊಳ್ಳುವಾಗ ಒಂದು ಕೆಜಿ ಅಕ್ಕಿಗೆ 3ರೂ ಮತ್ತು ಒಂದು ಕೆಜಿ ಗೋಧಿಗೆ 2ರೂ ಪಾವತಿಸಬೇಕಿದೆ. ಆದರೆ ಜುಲೈ ತಿಂಗಳ ಪಡಿತರ ವಿತರಣೆ ಆಗಸ್ಟ್ 25ರಂದು ಪ್ರಾರಂಭವಾಗಿದೆ ಎನ್ನಲಾಗಿದೆ.

ಲಕ್ನೋದ ಜಿಲ್ಲಾ ವಿತರಣಾ ಅಧಿಕಾರಿ ಸುನೀಲ್ ಕುಮಾರ್ ಸಿಂಗ್ ಅವರನ್ನು ದಿವೈರ್ ಮಾತನಾಡಿಸಿದಾಗ, “ಪಡಿತರ ಚೀಟಿದಾರರು ಆಹಾರ ಧಾನ್ಯಗಳಿಗೆ ಹಣ ಪಾವತಿಸಬೇಕು (ಅಕ್ಕಿ & ಗೋಧಿ). ಆದಾಗ್ಯೂ, ಸರ್ಕಾರವು ಒಂದು ಲೀಟರ್ ಅಡುಗೆ ಎಣ್ಣೆ ಮತ್ತು 1ಕೆಜಿ ಉಪ್ಪು, 1ಕೆಜಿ ಕಡ್ಲೆ ಬೇಳೆಯನ್ನು ಉಚಿತವಾಗಿ ನೀಡುವುದನ್ನು ಮುಂದುವರೆಸುತ್ತದೆ” ಎಂದು ಹೇಳಿದ್ದಾರೆ.

ರಾಜ್ಯದ 3.6 ಕೋಟಿ ಪಡಿತರ ಚೀಟಿದಾರರಲ್ಲಿ ಸುಮಾರು 3.19 ಕೋಟಿ ಫಲಾನುಭವಿಗಳು ಹಕ್ಕುಪತ್ರ ಹೊಂದಿದ್ದ ಕುಟುಂಬದ (ಪಿಹೆಚ್‌ಹೆಚ್) ಕೆಟಗರಿಯ ಅಡಿಯಲ್ಲಿ ಬಂದರು, 40 ಲಕ್ಷ ಫಲಾನುಭವಿಗಳು ಅಂತ್ಯೋದಯ ಕೆಟಗರಿಯ ಅಡಿಯಲ್ಲಿ ಬರುತ್ತಾರೆ.

ಅಂತ್ಯೋದಯ ರೇಷನ್ ಕಾರ್ಡ್ಅನ್ನು ಉತ್ತಮ ಆದಾಯ ಹೊಂದಿರದ ವ್ಯಕ್ತಿಗಳಿಗೆ ಅಥವಾ ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬಗಳಿಗೆ ನೀಡಲಾಗುತ್ತಿದೆ.

ಪಿಹೆಚ್‌ಹೆಚ್ ರೇಷನ್ ಕಾರ್ಡ್‌ಗಳನ್ನು ವಿಶೇಷವಾಗಿ ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ನೀಡಲಾಗಿದೆ. ರಾಜ್ಯ ಸರ್ಕಾರ ನಿಗದಿಪಡಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸಿರುವ ಗ್ರಾಮೀಣ ಪ್ರದೇಶದ ಕುಟುಂಬಗಳು ಇದರ ಫಲಾನುಭವಿಗಳಾಗಿವೆ.

ಕೃಪೆ: ದಿ ವೈರ್
ಅನುವಾದ: ಸಂಜಯ್, ಚಿಕ್ಕಬಳ್ಳಾಪುರ

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ; ಬೋಣಿ ಅಂತೂ ಚೆನ್ನಾಗಾಯ್ತು, ಆದರೆ ಮುಂದಿನ ದಾರಿ ದೊಡ್ಡದಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...