Homeಕರ್ನಾಟಕಮರುಘಾ ಶರಣರು ಪೀಠ ತೊರೆಯುವಂತೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಯತ್ನಾಳ್ ಪತ್ರ

ಮರುಘಾ ಶರಣರು ಪೀಠ ತೊರೆಯುವಂತೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಯತ್ನಾಳ್ ಪತ್ರ

- Advertisement -
- Advertisement -

ಲೈಂಗಿಕ ಕಿರುಕುಳ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಪೀಠತ್ಯಾಗ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿಗಳಿಗೆ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪತ್ರ ಬರೆದಿದ್ದಾರೆ.

ಮಠದ ಸಾವಿರಾರು ನೌಕರರು ಸಂಬಳ, ಸಾರಿಗೆಯ ಖರ್ಚಿಗಾಗಿ ಮತ್ತು ಜೀವನ ನಿರ್ವಹಣೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್‌ ಕಾಲೇಜು, ಬ್ಯಾಂಕ್‌ಗಳು ಸೇರಿದಂತೆ ಎಸ್‌ಜೆಎಂ ವಿದ್ಯಾಸಂಸ್ಥೆಯ ಅಧೀನದಲ್ಲಿ ರಾಜ್ಯದ ವಿವಿಧೆಡೆ ಇರುವ ನೂರಾರು ಘಟಕಗಳ ನಿತ್ಯದ ಆಡಳಿತಕ್ಕೆ ಪಾರ್ಶ್ವವಾಯು ಹೊಡೆದಂತಾಗುತ್ತದೆ ಎಂದು ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಮೂರ್ತಿ ಮುರುಘಾ ಶರಣರು ಪೀಠದಲ್ಲಿ ಮುಂದುವರಿಯುವುದು ಶ್ರೀಮಠದ ಘನ ಪರಂಪರೆಯಗೆ ಕಳಂಕ ತರುವಂತಹ ಸಂಗತಿಯಾಗಿರುತ್ತದೆ. ಆದ್ದರಿಂದ ಶಿವಮೂರ್ತಿ ಶರಣರು ಈ ಕೂಡಲೇ ಸ್ವಇಚ್ಛೆಯಿಂದ ಪೀಠತ್ಯಾಗ ಮಾಡಬೇಕು. ಇಲ್ಲವಾದಲ್ಲಿ ಅವರನ್ನು ಪದಚ್ಯುತಗೊಳಿಸುವ ಕಾನೂನುಬದ್ಧ ಪ್ರಕ್ರಿಯೆಗೆ ನಾಡಿನ ಭಕ್ತ ಸಮೂಹ ಮುಂದಾಗಲು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

‘ಜಗದ್ಗುರು ಮುರುಘರಾಜೇಂದ್ರ ವಿದ್ಯಾಪೀಠದ ಹಾಲಿ ಕಾರ್ಯದರ್ಶಿ ಶ್ರೀ ವಸ್ತ್ರದಮಠ ಅವರು ಶಿವಮೂರ್ತಿ ಮುರುಘಾ ಶರಣರ ಏಕಪಕ್ಷೀಯ ನೇಮಕವಾಗಿರುತ್ತದೆ. ಇವರ ನೇಮಕದಿಂದ ಸ್ಥಳೀಯ ಭಕ್ತ ಸಮೂಹ ಅಸಮಾಧಾನಗೊಂಡಿದ್ದಾರೆ. ಈಗಿನ ಸಂದಿಗ್ಧ ಸಮಯದಲ್ಲಿ ಮಠದ ಸಾವಿರಾರು ನೌಕರರು ಸಂಬಳ, ಸಾರಿಗೆಯ ಖರ್ಚಿಗಾಗಿ ಮತ್ತು ಜೀವನ ನಿರ್ವಹಣೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜು, ಬ್ಯಾಂಕ್‌ಗಳು ಸೇರಿದಂತೆ ಎಸ್‌ಜೆಎಂ ವಿದ್ಯಾಸಂಸ್ಥೆಯ ಅಧೀನದಲ್ಲಿ ರಾಜ್ಯದ ವಿವಿಧೆಡೆ ಇರುವ ನೂರಾರು ಘಟಕಗಳ ನಿತ್ಯದ ಆಡಳಿತಕ್ಕೆ ಪಾರ್ಶ್ವವಾಯು ಹೊಡೆದಂತಾಗುತ್ತದೆ. ಮಠದ ಸಾವಿರಾರು ಕೋಟಿ ರೂ. ಮೊತ್ತದ ಚರ ಮತ್ತು ಸ್ಥಿರಾಸ್ತಿ ದುರುಪಯೋಗವಾಗುವ ಸಾಧ್ಯತೆ ಇದೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಮರುಘರಾಜೇಂದ್ರ ಬೃಹನ್ಮಠದ ಸಮಸ್ತ ವ್ಯವಹಾರದ ಸುಗಮ ಆಡಳಿತ ನಿರ್ವಹಣೆಗಾಗಿ ವೀರಶೈವ ಲಿಂಗಾಯತ ಸಮಾಜಕ್ಕೆ ಸೇರಿದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಥವಾ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ವೀರ ಶೈವ ಲಿಂಗಾಯತ ಸಮಜಾದ ಐವರು ಪ್ರಮುಖರ ಉನ್ನತ ಮಟ್ಟದ ಮೇಲುಸ್ತುವಾರಿ ಸಮಿತಿ ಕೂಡಲೇ ನೇಮಿಸಬೇಕು” ಎಂದು ಮನವಿ ಮಾಡಿದ್ದಾರೆ.

ಈ ಸಮಿತಿಯು ಮಠದ ದೈನಂದಿನ ಆಡಳಿತ, ಆರ್ಥಿಕ ವ್ಯವಹಾರಗಳು, ಧಾರ್ಮಿಕ ಚಟುವಟಿಕೆಗಳಿಗೆ ಅಗತ್ಯವಾದ ನಿರ್ಧಾರ ಕೈಗೊಳ್ಳಲು ತಾತ್ಕಾಲಿಕ ಅಧಿಕಾರ ಹೊಂದಿರಬೇಕು. ಮೂರು ತಿಂಗಳ ಒಳಗಾಗಿ ಮಠಕ್ಕೆ ಹೊಸ ಪೀಠಾಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಈ ಸಮಿತಿಯೇ ನೆರವೇರಿಸಬೇಕು. ಈ ಕುರಿತು ಸಮಿತಿ ಕೈಗೊಳ್ಳುವ ಎಲ್ಲಾ ಕಾನೂನು ರೀತಿಯ ತೀರ್ಮಾನಕ್ಕೆ ಮಠದ ಸಮಸ್ತ ಸಮೂಹ ಬದ್ಧವಾಗಿರಬೇಕು ಎಂದು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿರಿ: ಮತಾಂತರದ ಆರೋಪ ಅಲ್ಲಗಳೆದ ಒಡನಾಡಿ ವಿದ್ಯಾರ್ಥಿಗಳು

ಆದೇಶ ಕಾಯ್ದಿರಿಸಿದ ಕೋರ್ಟ್

ಪ್ರೌಢಶಾಲೆ ವಿದ್ಯಾರ್ಥಿನಿಯರ ಮೇಲೆ ನಡೆದ ಲೈಂಗಿಕ ಕಿರುಕುಳ ಪ್ರಕರಣ ಕುರಿತು ಬೆಂಗಳೂರಿನ ಕಾಟನ್‌ಪೇಟೆ ಹಾಗೂ ಮೈಸೂರಿನ ನಜರಬಾದ್‌ ಠಾಣೆಯಲ್ಲಿ ಲಭ್ಯವಿರುವ ದಾಖಲೆಗಳನ್ನು ಒದಗಿಸಲು ಕೋರಿ ಸಿಆರ್‌ ಪಿಸಿ ಸೆಕ್ಷನ್‌ 91ರ ಅಡಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿತ ಆದೇಶವನ್ನು ನ್ಯಾಯಾಲಯ ಸೆ.21ಕ್ಕೆ ಕಾಯ್ದಿರಿಸಿದೆ.

ಪ್ರಕರಣದ ನಾಲ್ಕನೇ ಆರೋಪಿ ಪರಮಶಿವಯ್ಯ ಹಾಗೂ ಐದನೇ ಆರೋಪಿ ಗಂಗಾಧರಯ್ಯ ಪರವಾಗಿ ಹಾಜರಾಗಿದ್ದ ಹೈಕೋರ್ಟ್‌ ವಕೀಲ ಸಿ.ಎಚ್‌.ಹನುಮಂತರಾಯ ಈ ಅರ್ಜಿ ಸಲ್ಲಿಸಿದ್ದರು. ‌ಸರ್ಕಾರಿ ವಕೀಲರಾದ ಕೆ.ಬಿ.ನಾಗವೇಣಿ ಶನಿವಾರ ತಕರಾರು ಸಲ್ಲಿಸಿದ್ದರು. ‌‌ವಾದ, ಪ್ರತಿವಾದ ಆಲಿಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರು ಆದೇಶವನ್ನು ಕಾಯ್ದಿರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...