ಉನ್ನತ ಜೀವನ ಪ್ರವರ್ಧಕ (Higher Life Institute) ಸಂಸ್ಥೆಯ ವತಿಯಿಂದ ಸೆಪ್ಟಂಬರ್ 20ರ ಮಂಗಳವಾರ ಸಂಜೆ 6 ಘಂಟೆಗೆ ‘ಭಾರತೀಯ ನಾಗರಿಕತೆಯ ಪ್ರಮುಖ ಲಕ್ಷಣಗಳು’ (Essential Features of Indian Civilization) ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಭಾರತೀಯ ಭಾಷಾ ತಜ್ಞರು ಮತ್ತು ಸಂಸ್ಕೃತಿ ಚಿಂತಕರಾದ ಪ್ರೊ.ಗಣೇಶ್ ದೇವಿಯವರು ಉಪನ್ಯಾಸ ನೀಡಲಿದ್ದು, ಸಾಹಿತಿಗಳು ಮತ್ತು ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ರಾಜೇಂದ್ರ ಚೆನ್ನಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರಿನ ಎನ್.ಆರ್ ಕಾಲೋನಿಯಲ್ಲಿರುವ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಎಂ.ವಿ ಸೀತಾರಾಮಯ್ಯ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆಯುವ ಈ ಕಾರ್ಯಕ್ರಮವನ್ನು Higher Life Institute ಯುಟ್ಯೂಬ್ ಚಾನೆಲ್‌ನಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಸಂಸ್ಥೆಯ ರಾಮ್‌ಪ್ರಕಾಶ್‌ರವರು ತಿಳಿಸಿದ್ದಾರೆ.
ಇದನ್ನೂ ಓದಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?


