Homeಮುಖಪುಟಇರಾನ್‌: ಯುವತಿಯ ಸಾವು ಹಚ್ಚಿದ ಕಿಡಿ; ಹಿಜಾಬ್ ವಿರುದ್ಧ ಭುಗಿಲೆದ್ದ ಆಕ್ರೋಶ

ಇರಾನ್‌: ಯುವತಿಯ ಸಾವು ಹಚ್ಚಿದ ಕಿಡಿ; ಹಿಜಾಬ್ ವಿರುದ್ಧ ಭುಗಿಲೆದ್ದ ಆಕ್ರೋಶ

- Advertisement -
- Advertisement -

22 ವರ್ಷದ ಯುವತಿ ಮಹ್ಸಾ ಅಮಿನಿ ಸಾವಿನ ನಂತರ ಇರಾನ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇರಾನ್ ಮಹಿಳೆಯರು ಸಾರ್ವಜನಿಕವಾಗಿ ತಮ್ಮ ಹಿಜಾಬ್‌ಗಳನ್ನು ತೆಗೆದು ಸುಟ್ಟು ಹಾಕುತ್ತಿದ್ದಾರೆ.

ಇರಾನಿನ ಕುಖ್ಯಾತ ‘ಮೊರಾಲಿಟಿ ಪೊಲೀಸರು’ ಟೆಹ್ರಾನ್‌ನಲ್ಲಿ ಬಂಧಿಸಿದ ನಂತರ ಕೋಮಾಕ್ಕೆ ಹೋದ ಯುವತಿ ಶುಕ್ರವಾರ ಕೊನೆಯುಸಿರೆಳೆದಿದ್ದಳು. ಸರ್ಕಾರಿ ಮಾಧ್ಯಮ ಹಾಗೂ ಮತ್ತು ಯುವತಿಯ ಕುಟುಂಬವು ಸಾವಿನ ಕುರಿತು ಮಾಹಿತಿ ನೀಡಿದವು. ಯುವತಿಯ ಅನುಮಾನಾಸ್ಪದ ಸಾವಿಗೆ ಕಾರಣರಾದವರಿಗೆ ಶಿಕ್ಷೆ ವಿಧಿಸಬೇಕು ಎಂದು ಹೋರಾಟಗಾರರು ಆಗ್ರಹಿಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

22 ವರ್ಷದ ಮಹ್ಸಾ ಅಮಿನಿ ತನ್ನ ಕುಟುಂಬದೊಂದಿಗೆ ಇರಾನ್ ರಾಜಧಾನಿಗೆ ಭೇಟಿ ನೀಡುತ್ತಿದ್ದರು. ಇಸ್ಲಾಮಿಕ್ ಗಣರಾಜ್ಯದಲ್ಲಿ ಮಹಿಳೆಯರಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೊಳಿಸುವ ಹೊಣೆಗಾರಿಕೆಯನ್ನು ಹೊತ್ತಿರುವ ಪೊಲೀಸ್ ಘಟಕವು ಅಮಿನಿ ಅವರನ್ನು ಮಂಗಳವಾರ ಬಂಧಿಸಿತು. ಸಾರ್ವಜನಿಕವಾಗಿ ಹೆಡ್‌ಸ್ಕ್ರಾಪ್‌ (ಹಿಜಾಬ್‌) ಧರಿಸಬೇಕೆಂದು ಕಡ್ಡಾಯ ಮಾಡಲಾಗಿದ್ದು, ಯುವತಿ ಧರಿಸಿರಲಿಲ್ಲ ಎಂದು ದಾಳಿ ಮಾಡಲಾಗಿತ್ತು.

‘ಮೊರಲಿಟಿ ಪೊಲೀಸರು’ ಬಂಧಿಸಿದ ಬಳಿಕ ಯುವತಿ ಸಾವಿಗೀಡಾಗಿದ್ದು ಇರಾನ್‌ನಲ್ಲಿ ಹೋರಾಟದ ಕಿಡಿ ಹಚ್ಚಿದೆ.

ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವ ವಿಡಿಯೊಗಳು ವೈರಲ್‌ ಆಗುತ್ತಿವೆ. ಪ್ರತಿಭಟನೆಗಳ ಹಲವಾರು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. ಕೆಲವು ವೀಡಿಯೊಗಳಲ್ಲಿ, ಪ್ರತಿಭಟನಾಕಾರರನ್ನು ಚದುರಿಸಲು ಇರಾನ್ ಪಡೆಗಳು ಅಶ್ರುವಾಯು ಬಳಸುತ್ತಿರುವುದನ್ನು ಕಾಣಬಹುದು.

ಏಳು ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಹಿಜಾಬ್‌ ಧರಿಸಬೇಕೆಂಬ ಕಾನೂನಿನ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ. ಪ್ರತಿಭಟನೆಯ ಭಾಗವಾಗಿ ಸಾಂಕೇತಿಕವಾಗಿ ಕೆಲವು ಮಹಿಳಾ ಪ್ರತಿಭಟನಾಕಾರರು ತಮ್ಮ ಕೂದಲನ್ನು ಕತ್ತರಿಸಿ, ಹಿಜಾಬ್‌ಗಳನ್ನು ಸುಟ್ಟುಹಾಕಿದ್ದಾರೆ.

ಇರಾನಿನ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಮಾಸಿಹ್ ಅಲಿನೆಜಾದ್ ಅವರು ವೀಡಿಯೊಗಳನ್ನು ಟ್ವೀಟ್ ಮಾಡಿದ್ದಾರೆ.

“ಹಿಜಾಬ್ ಕಾರಣಕ್ಕೆ ಪೊಲೀಸರು ಮಹ್ಸಾ ಅಮಿನಿ ಅವರನ್ನು ಕೊಂದದ್ದನ್ನು ವಿರೋಧಿಸಿ ಇರಾನಿಯನ್ ಮಹಿಳೆಯರು ತಮ್ಮ ಕೂದಲನ್ನು ಕತ್ತರಿಸುವ ಮೂಲಕ ಮತ್ತು ಹಿಜಾಬ್ ಅನ್ನು ಸುಡುವ ಮೂಲಕ ಆಕ್ರೋಶವನ್ನು ಹೊರಹಾಕಿದ್ದಾರೆ. ನಾವು 7ನೇ ವಯಸ್ಸಿನ ನಂತರ ತಲೆಗೂದಲನ್ನು ಪ್ರದರ್ಶಿಸಿದರೆ ನಮಗೆ ಶಾಲೆಗೆ ಹೋಗಲು ಅಥವಾ ಉದ್ಯೋಗ ಪಡೆಯಲು ಅವಕಾಶವಿಲ್ಲ. ಈ ಲಿಂಗ ವರ್ಣಭೇದ ನೀತಿಯಿಂದ ನಾವು ಬೇಸತ್ತಿದ್ದೇವೆ” ಎಂದು ಮಹಿಳೆಯರು ಹೇಳಿದ್ದಾರೆ.

ಮಾಸಿಹ್ ಅಲಿನೆಜಾದ್ ಮಾಡಿರುವ ಮತ್ತೊಂದು ಟ್ವೀಟ್‌ನಲ್ಲಿ, “ಇದು ನಿಜವಾದ ಇರಾನ್. ಮಹ್ಸಾ ಅಮಿನಿಯ ಸಮಾಧಿ ಬಳಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಹಿಜಾಬ್ ಪೊಲೀಸರು 22 ವರ್ಷದ ಹುಡುಗಿಯನ್ನು ಕೊಂದರು ಮತ್ತು ಈಗ ಬಂದೂಕುಗಳನ್ನು ಬಳಸಿದ್ದಾರೆ” ಎಂದು ವಿಷಾದಿಸಿದ್ದಾರೆ.

ಇದನ್ನೂ ಓದಿರಿ: ಇರಾನ್‌: ಹಿಜಾಬ್ ಧರಿಸಲಿಲ್ಲವೆಂದು ಬಂಧನಕ್ಕೊಳಗಾದ ಯುವತಿ ಅನುಮಾನಾಸ್ಪದವಾಗಿ ನಿಧನ; ಜನಾಕ್ರೋಶ

ತಮ್ಮ ಹಿಜಾಬ್‌ಗಳನ್ನು ತೆಗೆದ ಮಹಿಳೆಯರಿಗೆ ಇರಾನಿನ ಮೊರಾಲಿಟಿ ಪೊಲೀಸರಿಂದ ತೊಂದರೆಯಾಗುವ ರೀತಿಯಲ್ಲಿ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ.

ಇಸ್ಲಾಮಿಕ್ ಕಾನೂನಿನ ಅಡಿಯಲ್ಲಿ ಮಹಿಳೆಯರ ಮೇಲೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ಇರಾನಿನಲ್ಲಿ ಮಹಿಳೆಯರು ಕಡ್ಡಾಯವಾಗಿ ತಮ್ಮ ಕೂದಲನ್ನು ಮುಚ್ಚಿಕೊಳ್ಳಬೇಕಿದೆ. ಉದ್ದವಾದ, ಸಡಿಲವಾದ ಬಟ್ಟೆಗಳನ್ನು ಧರಿಸುವಂತಿಲ್ಲ. ಉಲ್ಲಂಘನೆ ಮಾಡಿದರೆ ಸಾರ್ವಜನಿಕ ಖಂಡನೆ, ದಂಡ ಅಥವಾ ಬಂಧನವನ್ನು ಎದುರಿಸಬೇಕಾಗುತ್ತದೆ. ಆದರೆ ಇತ್ತೀಚಿನ ತಿಂಗಳುಗಳಲ್ಲಿ ಹೋರಾಟಗಾರರು ಈ “ಅನೈತಿಕ ನಡವಳಿಕೆ”ಯ ವಿರುದ್ಧ ಸಿಡಿದೆದ್ದಿದ್ದಾರೆ. ಹಿಜಾಬ್ ಹೇರಿಕೆಯ ವಿರುದ್ಧ ಹೋರಾಟಕ್ಕಿಳಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಪಂಚದಲ್ಲಿ ಇರುವ ಎಲ್ಲಾ ಪ್ರಜ್ಞಾವಂತರೂ ಇರಾನಿನ ಮಹಿಳೆಯರ ಪರವಾಗಿ ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....