Homeಕರ್ನಾಟಕಹಿಜಾಬ್ ಇತರರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದಿಲ್ಲ: ಸುಪ್ರೀಂನಲ್ಲಿ ದುಶ್ಯಂತ್ ದವೆ ವಾದ

ಹಿಜಾಬ್ ಇತರರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದಿಲ್ಲ: ಸುಪ್ರೀಂನಲ್ಲಿ ದುಶ್ಯಂತ್ ದವೆ ವಾದ

- Advertisement -
- Advertisement -

ಹಿಜಾಬ್‌ ಧರಿಸುವುದರಿಮದ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವುದಿಲ್ಲ ಅಥವಾ ಇತರರ ಧಾರ್ಮಿಕ ಭಾವನೆಗಳನ್ನು ನೋಯಿಸುವುದಿಲ್ಲ ಎಂದು ಹಿರಿಯ ವಕೀಲ ದುಶ್ಯಂತ್ ದವೆ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ಅರ್ಜಿದಾರರ ಪರವಾಗಿ ಅವರು ವಾದ ಪೂರ್ಣಗೊಳಿಸಿದ್ದಾರೆ.

ಹಿಜಾಬ್ ಮುಸ್ಲಿಂ ಮಹಿಳೆಯರ ಘನತೆಯನ್ನು ಹೆಚ್ಚಿಸುತ್ತದೆ, ಸಂವಿಧಾನದ 19 ಮತ್ತು 21 ನೇ ಪರಿಚ್ಛೇದದ ಅಡಿಯಲ್ಲಿ ಸಂರಕ್ಷಿತ ಹಕ್ಕನ್ನು ಹೊಂದಿದೆ. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್ ಧರಿಸುವುದರ ಕಾನೂನುಬದ್ಧತೆಯನ್ನು ಪರೀಕ್ಷಿಸುವಲ್ಲಿ ಹೈಕೋರ್ಟ್ ತಪ್ಪಾಗಿ ಗ್ರಹಿಸಿದೆ ಎಂದು ಅವರು ವಾದಿಸಿದ್ದಾರೆ.

ಕರ್ನಾಟಕ ಹೈಕೋರ್ಟ್‌ನ ತೀರ್ಪು ಸಂಪೂರ್ಣವಾಗಿ ಸಮರ್ಥನೀಯವಲ್ಲ. ಏಕೆಂದರೆ ದೋಷಾರೋಪಣೆ ಮಾಡಲಾದ ಸರ್ಕಾರದ ಸುತ್ತೋಲೆಯು ಅಸಾಂವಿಧಾನಿಕ, ಕಾನೂನುಬಾಹಿರ ಮತ್ತು ಕಾನೂನು ದುರುದ್ದೇಶದಿಂದ ಕೂಡಿದೆ ಮತ್ತು ಸಂವಿಧಾನದ 14, 19, 21 ಮತ್ತು 25 ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ದವೆ ವಾದಿಸಿದರು.

ಧಾರ್ಮಿಕ ಆಚರಣೆಯನ್ನು ಮುಸ್ಲಿಂ ಸಮುದಾಯವು ತನ್ನ ಧಾರ್ಮಿಕ ನಂಬಿಕೆಯ ಭಾಗವಾಗಿ ಆಚರಿಸುತ್ತದೆ. ಸಾಂಪ್ರದಾಯಿಕವಾಗಿ ಒಬ್ಬ ವ್ಯಕ್ತಿಯು ಗೌರವಾನ್ವಿತ ಸ್ಥಳಕ್ಕೆ ಹೋದಾಗ, ಅವನು ಅಥವಾ ಅವಳು ತಮ್ಮ ತಲೆಯನ್ನು ಮುಚ್ಚಿಕೊಳ್ಳುತ್ತಾರೆ. ನಮ್ಮ ಪ್ರಧಾನ ಮಂತ್ರಿಗಳು ಸಹ ಆಗಸ್ಟ್ 15 ರಂದು ತಮ್ಮ ತಲೆಗೆ ಪೇಟ ಧರಿಸುತ್ತಾರೆ. ಶಾಲೆಯು ಅತ್ಯಂತ ಗೌರವಾನ್ವಿತ ಸ್ಥಳವಾಗಿದೆ ಮತ್ತು ಪೂಜಾ ಸ್ಥಳವಾಗಿದೆ ಎಂಬುದನ್ನು ಪೀಠ ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್‌ಗೆ ಅವಕಾಶವಿಲ್ಲದೆ ಮಂಗಳೂರು ವಿವಿಯ ಶೇ.16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಡ್ರಾಪ್‌ಔಟ್

ಕರ್ನಾಟಕ ರಾಜ್ಯದ ಅಧಿಕಾರಿಗಳ ಲೋಪದಿಂದಾಗಿ ಅಲ್ಪಸಂಖ್ಯಾತ ಸಮುದಾಯವನ್ನು ಕಡೆಗಣಿಸುವ ಮಾದರಿಯನ್ನು ತೋರಿಸಿವೆ. ಹಿಜಾಬ್ ಮುಸ್ಲಿಮರ ಅಸ್ಮಿತೆಯ ಸಂಕೇತವಾಗಿದೆ. ಅದನ್ನು ನಿಷೇಧಿಸುವ ಮೂಲಕ ಅವರನ್ನು ಮತ್ತೆ ಕಡೆಗಣಿಸಲಾಗುತ್ತಿದೆ ಎಂದು ದುಶ್ಯಂತ್ ದವೆಯವರು ತಮ್ಮ ವಾದವನ್ನು ಪೂರ್ಣಗೊಳಿಸಿದ್ದಾರೆ.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಎಂಟು ದಿನಗಳ ಕಾಲ ಅರ್ಜಿದಾರರ ವಾದ ಆಲಿಸಿದೆ. ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮುಂದುವರೆಸಿದ್ದಾರೆ.

ಇದನ್ನೂ ಓದಿ; ಹಿಜಾಬ್ ವಿವಾದದ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಸಾಮಾಜಿಕ ಪ್ರತ್ಯೇಕತೆ ಅನುಭವಿಸುತ್ತಿದ್ದಾರೆ: ಪಿಯುಸಿಎಲ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...