Homeಮುಖಪುಟಇಸ್ಲಾಂ ವಿರುದ್ಧ ಬರೆದಿದ್ದಕ್ಕೆ ಆರ್‌ಎಸ್‌ಎಸ್‌ನ ಆರ್ಗನೈಸರ್‌ ವರದಿಗಾರನಿಗೆ ಬೆದರಿಕೆ; ಪತ್ರಕರ್ತನ ಪರಿಚಯಸ್ಥನೇ ಆರೋಪಿ

ಇಸ್ಲಾಂ ವಿರುದ್ಧ ಬರೆದಿದ್ದಕ್ಕೆ ಆರ್‌ಎಸ್‌ಎಸ್‌ನ ಆರ್ಗನೈಸರ್‌ ವರದಿಗಾರನಿಗೆ ಬೆದರಿಕೆ; ಪತ್ರಕರ್ತನ ಪರಿಚಯಸ್ಥನೇ ಆರೋಪಿ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಪ್ರಕಟಿಸುವ ಆರ್ಗನೈಸರ್ ವೀಕ್ಲಿ ವರದಿಗಾರನಿಗೆ ಕೆಲವು ದಿನಗಳ ಹಿಂದೆ ಬೆದರಿಕೆ ನೀಡಿದ್ದ ವ್ಯಕ್ತಿಯನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ.

ಇಸ್ಲಾಂ ಧರ್ಮದ ವಿರುದ್ಧ ಬರೆದಿದ್ದಕ್ಕಾಗಿ ಆರ್ಗನೈಸರ್‌ ಪತ್ರಿಕೆ ವರದಿಗಾರನಿಗೆ ಬೆದರಿಕೆ ಒಡ್ಡಲಾಗಿದೆ ಎಂದು ಮುಖ್ಯವಾಹಿನಿ ಮಾಧ್ಯಮಗಳು ವರದಿ ಮಾಡಿದ್ದವು. ಈಗ ಆರೋಪಿಯನ್ನು ಬಂಧಿಸಲಾಗಿದ್ದು, ಆತ ವರದಿಗಾರನ ಪರಿಚಯಸ್ಥ ಎಂದು ತಿಳಿದುಬಂದಿದೆ.

ಆರ್ಗನೈಸರ್‌ ವರದಿಗಾರ ನಿಶಾಂತ್ ಆಜಾದ್ ಅವರು ಸೆಪ್ಟೆಂಬರ್ 10 ರಂದು ಉತ್ತರ ಪ್ರದೇಶದ ಗಾಜಿಯಾಬಾದ್‌ನ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. “ನಾನು ಮಾಡುತ್ತಿರುವ ಕೆಲಸದ ಕಾರಣಕ್ಕಾಗಿ ಅಮೆರಿಕ ಮೂಲದ ಅಪರಿಚಿತ ಸಂಖ್ಯೆಯಿಂದ ಬೆದರಿಕೆ ಸಂದೇಶಗಳು ಮತ್ತು ವಾಟ್ಸಾಪ್ ಕರೆಗಳು ಬರುತ್ತಿವೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ನಿಶಾಂತ್‌ಗೆ ವಾಟ್ಸ್‌ಅಪ್‌ನಲ್ಲಿ ಬಂದಿದ್ದ ಸಂದೇಶದ ಸ್ಕ್ರೀನ್‌ಶಾಟ್‌ಗಳನ್ನು ಆರ್ಗನೈಸರ್‌ ವೀಕ್ಲಿ ಟ್ವೀಟ್ ಮಾಡಿತ್ತು. “ಇಸ್ಲಾಂ ವಿರುದ್ಧ ಅಜೆಂಡಾವನ್ನು ಪ್ರಚಾರ ಮಾಡುವುದನ್ನು ನಿಲ್ಲಿಸಿ. ಇದಕ್ಕೆ ದಂಡ ತೆರಬೇಕಾದೀತು. ನಿನ್ನ ಶಿರಚ್ಛೇದ ಮಾಡಲಾಗುವುದು” ಎಂದು ಆ ಸಂದೇಶದಲ್ಲಿತ್ತು.

ಗಾಜಿಯಾಬಾದ್ ಪೊಲೀಸ್ ಅಧಿಕಾರಿಯೊಬ್ಬರು, ಮಂಗಳವಾರ, ಸೆಪ್ಟೆಂಬರ್ 20 ರಂದು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, “ಪ್ರಕರಣದಲ್ಲಿ ಆರೋಪಿ ಪ್ರಾಣಪ್ರಿಯಾ ವತ್ಸ್ ಅವರನ್ನು ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಇಂದಿರಾಪುರಂ ಠಾಣೆಯ ಸೈಬರ್ ಸೆಲ್ ಮೂಲಕ ಡೇಟಾವನ್ನು ವಿಶ್ಲೇಷಿಸಿದಾಗ, ಬೆದರಿಕೆ ಕರೆ ಹಿಂದೆ ಪ್ರಾಣಪ್ರಿಯಾ ವತ್ಸ್ ಇದ್ದಾರೆ ಎಂಬುದು ಗೋಚರಿಸಿದೆ. ಆಜಾದ್‌ಗೆ ಬೆದರಿಕೆ ಹಾಕಿದ್ದಾರೆ ಎಂಬುದು ತಿಳಿದುಬಂದಿದೆ. ಪ್ರಕರಣದಲ್ಲಿ ಪ್ರಾಣಪ್ರಿಯಾ ವತ್ಸ್ ಅವರನ್ನು ಬಂಧಿಸಲಾಗಿದೆ” ಎಂದು ಪೊಲೀ‌ಸ್‌ ಅಧಿಕಾರಿ ತಿಳಿಸಿದ್ದಾರೆ. ವತ್ಸ್ ಆಜಾದ್‌ಗೆ ಪರಿಚಯವಿರಬಹುದು ಎಂದು ವರದಿಯಾಗಿದೆ.

ಆಲ್ಟ್ ನ್ಯೂಸ್‌ನ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, ಈ ಮೊದಲಿಗೆ ಆರೋಪಗಳು ಬಂದಾಗ ಮುಖ್ಯವಾಹಿನಿಯ ಮಾಧ್ಯಮಗಳು ಹೇಗೆ ವರ್ಣರಂಜಿತ ವರದಿಗಳನ್ನು ಮಾಡಿವೆ ಎಂಬುದರತ್ತ ಅವರು ಗಮನ ಸೆಳೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...