Homeಕರ್ನಾಟಕ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

- Advertisement -
- Advertisement -

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್‌, ವಿವಿಧ ರೀತಿಯಲ್ಲಿ ಜನರನ್ನು ತಲುಪುವ ಪ್ರಯತ್ನ ಮಾಡುತ್ತಿದೆ. ಅದರ ಮುಂದುವರಿದ ಭಾಗವಾಗಿ, ‘ಪೇಸಿಎಂ’ (PAYCM) ಪೋಸ್ಟರ್‌ಗಳು ವೈರಲ್ ಆಗಿವೆ.

“ನಲವತ್ತು ಪರ್ಸೆಂಟ್‌ ಇಲ್ಲಿ ಸ್ವೀಕರಿಸಲಾಗುತ್ತದೆ”, “ಮುಖ್ಯಮಂತ್ರಿಗಳ ಭ್ರಷ್ಟಾಚಾರಕ್ಕೆ ಸಂದಾಯ ಮಾಡಲು ನೀವು ಇಲ್ಲಿ ಕ್ಯೂ‌ಆರ್‌ ಕೋಡ್‌ ಸ್ಕ್ಯಾನ್‌” ಮಾಡಿ ಎಂಬ ಸಂದೇಶವನ್ನು ಇಂಗ್ಲಿಷ್‌ನಲ್ಲಿ ಬರೆದಿರುವ ಪೋಸ್ಟರ್‌ಗಳು ಹರಿದಾಡುತ್ತಿವೆ. ‘ಪೇಟಿಎಂ’ ಜಾಹೀರಾತಿನಂತೆ ಈ ಪೋಸ್ಟರ್‌‌ಗಳು ಗಮನ ಸೆಳೆಯುತ್ತಿವೆ. ಕ್ಯೂಆರ್‌ ಕೋಡ್‌ನೊಳಗೆ ಬೊಮ್ಮಾಯಿಯವರ ರೇಖಾಚಿತ್ರವನ್ನು ಬಳಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿವಿಧೆಡೆ ಅಂಟಿಸಲಾಗಿರುವ ಈ ಪೋಸ್ಟರ್‌ಗಳು ಈಗ ಚರ್ಚೆಗೆ ಕಾರಣವಾಗಿದ್ದು, ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇಲ್ಲಿನ ಕ್ಯೂ.ಆರ್‌.ಕೋಡ್ ಸ್ಕ್ಯಾನ್‌ ಮಾಡಿದರೆ, ಕಾಂಗ್ರೆಸ್‌ ಆರಂಭಿಸಿರುವ ‘www.40percentsarkara.com’ ಜಾಲತಾಣ ಓಪನ್‌ ಆಗುತ್ತದೆ.

ಅನೇಕರು ಈ PayCM ಪೋಸ್ಟರ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

‘40ಪರ್ಸೆಂಟ್‌ಸರ್ಕಾರ.ಕಾಂ’ ವಿಶೇಷತೆ ಏನು?

‘40 ಪರ್ಸೆಂಟ್‌ ಕಮಿಷನ್‌ ಭ್ರಷ್ಟ ಸರ್ಕಾರ’ ಎಂಬ ಆರೋಪ ರಾಜ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿರುವ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್‌, ಸರ್ಕಾರವನ್ನು ಟೀಕಿಸಲು ಹೊಸಹೊಸ ಪ್ರಯೋಗಗಳಿಗೆ ಕೈಹಾಕಿದೆ. ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನು ಕಾಂಗ್ರೆಸ್ ತೆರೆದಿದೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ರಾಜ್ಯದ ವಿವಿಧ ಪತ್ರಿಕೆಗಳಿಗೆ, ಸುದ್ದಿಮಾಧ್ಯಮಗಳಿಗೆ ಅಪಾರ ಜಾಹೀರಾತನ್ನು ನೀಡಿತ್ತು. ಅಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿತ್ತು. ‘ಇದು ಹತ್ತು ಪರ್ಸೆಂಟ್ ಸರ್ಕಾರ’ ಎಂದು ಮೂದಲಿಸಿತ್ತು. ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಕೂಡ ತಮ್ಮ ಪ್ರಚಾರ ಭಾಷಣಗಳಲ್ಲಿ ಇದನ್ನೇ ಪುನರುಚ್ಚರಿಸಿದ್ದರು.

ಚುನಾವಣೆ ಮುಗಿದು ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಏರ್ಪಟ್ಟು ಸರ್ಕಾರ ರಚನೆಯಾಯಿತು. ನಂತರ ಆಪರೇಷನ್‌ ಕಮಲವೂ ಆಗಿ, ಸಮ್ಮಿಶ್ರ ಸರ್ಕಾರ ಬಿದ್ದು ಹೋಯಿತು. ನಂತರ ಅಧಿಕಾರಕ್ಕೇರಿದ ಬಿ.ಎಸ್.ಯಡಿಯೂರಪ್ಪನವರು ಕೆಲಕಾಲ ಆಡಳಿತ ನಡೆಸಿದರು. ಅವರನ್ನೂ ಸಿಎಂ ಕುರ್ಚಿಯಿಂದ ಕೆಳಗಿಳಿಸಿದ ಬಳಿಕ ಬಸವರಾಜ ಬೊಮ್ಮಾಯಿಯವರು ಅಧಿಕಾರಕ್ಕೇರಿದರು.

ಅಧಿಕಾರ ಹಿಡಿದಾಗಿನಿಂದ ಭ್ರಷ್ಟಾಚಾರ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ವಿರುದ್ಧ ಗುತ್ತಿಗೆದಾರರು ಸಿಡಿದೆದ್ದಿದ್ದಾರೆ. ನಲವತ್ತು ಪರ್ಸೆಂಟ್‌ ಕಮಿಷನ್‌ ನೀಡಬೇಕಾಗಿದೆ ಎಂದು ದೂರುತ್ತಿದ್ದಾರೆ.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಕೆ.ಎಸ್.ಈಶ್ವರಪ್ಪನವರ ವಿರುದ್ಧ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಚುರುಕಾಗಿದ್ದು, ಭ್ರಷ್ಟಾಚಾರ ವಿಚಾರವನ್ನೇ ಮುನ್ನೆಲೆಗೆ ತಂದು ಪ್ರಚಾರ ಮಾಡುವ ಸೂಚನೆಯನ್ನು ನೀಡುತ್ತಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಯಾವ ತಂತ್ರವನ್ನು ರೂಪಿಸಿತ್ತೋ ಅದೇ ತಂತ್ರವನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಿಸುತ್ತಿರುವಂತೆ ಕಾಣುತ್ತಿದೆ.

‘ಭ್ರಷ್ಟ ಸರ್ಕಾರ’ ಎಂಬ ಆರೋಪ ಹೊರಿಸಿ ಹಾಡನ್ನೂ ಕಾಂಗ್ರೆಸ್ ಬಿಡುಗಡೆ ಮಾಡಿದೆ. ‘ನಲವತ್ತು ಪರ್ಸೆಂಟ್ ಸರ್ಕಾರ’ ಎಂಬ ಫೇಸ್‌ಬುಕ್‌ ಪೇಜ್‌ ತೆರೆಯಲಾಗಿದೆ. ಈಗ ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನೂ ತೆರೆದು ಬಿಜೆಪಿಗೆ ತಿರುಗೇಟು ನೀಡಲಾಗುತ್ತಿದೆ.

‘40ಪರ್ಸೆಂಟ್‌ಸರ್ಕಾರ.ಕಾಂ’ನಲ್ಲಿ ಏನೇನಿದೆ?

‘ಇಂಗ್ಲಿಷ್ ಹಾಗೂ ಕನ್ನಡ’ ಎರಡು ಭಾಷೆಯಲ್ಲೂ ಓದಲು ಲಭ್ಯವಿರುವ ಈ ವೆಬ್‌ಸೈಟ್‌ನಲ್ಲಿ ‘40% ಸರ್ಕಾರ, ಬಿಜೆಪಿ ಎಂದರೆ ಭ್ರಷ್ಟಾಚಾರ’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಕರ್ನಾಟಕದ ಚಿತ್ರವಿರುವ ಲೋಗೋವನ್ನು ಡಿಸೈನ್ ಮಾಡಲಾಗಿದೆ. ಎಷ್ಟು ಜನ ದನಿ ಎತ್ತಿದ್ದಾರೆಂಬ ಲೆಕ್ಕವನ್ನು ಪ್ರದರ್ಶಿಸಲಾಗುತ್ತಿದೆ. ತಮ್ಮ ಆಕ್ಷೇಪಗಳನ್ನು ದಾಖಲಿಸಲು ‘8447704040′ ನಂಬರ್‌ ನೀಡಲಾಗಿದೆ.

ಬಿಟ್‌ಕಾಯಿನ್‌ ಸ್ಕ್ಯಾಮ್, ಪಿಎಸ್‌ಐ ಹಗರಣ, ರೋಡ್‌ ಸ್ಕ್ಯಾಮ್‌- ಮೊದಲಾದ ಪೋಸ್ಟರ್‌ಗಳ ಸ್ಲೈಡ್ ರಚಿಸಲಾಗಿದೆ. ಜೊತೆಗೆ ‘ನಿಮ್ಮ ಧ್ವನಿ ಏರಿಸಿ’ ಎಂಬ ಕೋರಿಕೆಯನ್ನು ಸಲ್ಲಿಸಲಾಗಿದೆ. “ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆಯಿರಿ. ನಿಮ್ಮ ಧ್ವನಿ ಏರಿಸಿ” ಎಂಬ ಕಾಲಂ ಮಾಡಲಾಗಿದ್ದು, ಹೆಸರು, ಕ್ಷೇತ್ರ, ಮೊಬೈಲ್‌ ನಂಬರ್‌ ಹಾಗೂ ಅಭಿಪ್ರಾಯನ್ನು ನಮೂದಿಸಿ ಸಬ್‌ಮಿಟ್ ಮಾಡಿದರೆ, ನಿಮ್ಮ ಮೊಬೈಲ್‌ ಸಂಖ್ಯೆಗೆ ಒಟಿಪಿ ಬರುತ್ತದೆ. ಆ ಒಟಿಪಿಯನ್ನು ನಮೂದಿಸಿದರೆ ನಿಮ್ಮ ಅಭಿಪ್ರಾಯ ಇಲ್ಲಿ ದಾಖಲಾಗುತ್ತದೆ.

‘ಜನರ ಧ್ವನಿಗಳು’ ಎಂಬ ಶೀರ್ಷಿಕೆಯಲ್ಲಿ ಸ್ಲೈಡ್ ರಚಿಸಲಾಗಿದ್ದು, ಅಲ್ಲಿ ಜನರ ಅಭಿಪ್ರಾಯಗಳನ್ನು ಪ್ರದರ್ಶಿಸಲಾಗುತ್ತಿದೆ.

ವೆಬ್‌ಸೈಟ್ ಸ್ಕ್ರಾಲ್‌ ಮಾಡಿದರೆ, ‘ಗುಳುಂ ಸ್ವಾಹಃ ರಿಪೋರ್ಟ್’ ಎಂಬ ಶೀರ್ಷಿಕೆಯಲ್ಲಿ ಭ್ರಷ್ಟಾಚಾರ ಹಗರಣಗಳನ್ನು ಪಟ್ಟಿ ಮಾಡಲಾಗಿದೆ.

`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ
`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ

‘ಬಿಜೆಪಿ ಬಂಪರ್‌ ಆಫರ್‌’ ಎಂಬ ಶೀರ್ಷಿಕೆಯಡಿ, ‘ಯಾವ ಹುದ್ದೆಗೆೆ ಎಷ್ಟು ಹಣ’ ಎಂದು ಗೇಲಿ ಮಾಡಲಾಗಿದೆ.

ಕೊನೆಯಲ್ಲಿ ವಿಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದೆ. ವಿವಿಧ ಹಗರಣಗಳ ಕುರಿತು ಮಾಧ್ಯಮದಲ್ಲಿ ಬಂದಿರುವ ವರದಿಗಳನ್ನು ಇಲ್ಲಿ ನೀಡಲಾಗಿದೆ. ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳಲ್ಲಿ ಆಗಿರುವ ವರದಿಗಳನ್ನು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...