Homeಕರ್ನಾಟಕಬೆಂಗಳೂರಿನಲ್ಲಿ 42 ಕ್ಕೂ ಹೆಚ್ಚು ಕೆರೆಗಳು ಮಾಯವಾಗಿವೆ: ಸದನದಲ್ಲಿ ಕಂದಾಯ ಸಚಿವ ಆರ್‌‌. ಅಶೋಕ್‌ ಮಾಹಿತಿ

ಬೆಂಗಳೂರಿನಲ್ಲಿ 42 ಕ್ಕೂ ಹೆಚ್ಚು ಕೆರೆಗಳು ಮಾಯವಾಗಿವೆ: ಸದನದಲ್ಲಿ ಕಂದಾಯ ಸಚಿವ ಆರ್‌‌. ಅಶೋಕ್‌ ಮಾಹಿತಿ

- Advertisement -
- Advertisement -

ಬೆಂಗಳೂರಿನಲ್ಲಿ ಇದುವರೆಗೆ 42 ಕೆರೆಗಳು ಕಣ್ಮರೆಯಾಗಿದ್ದು, ಇವುಗಳಲ್ಲಿ ಹೆಚ್ಚಿನ ಕೆರೆಗಳನ್ನು ಕ್ಯಾಬಿನೆಟ್ ಅನುಮೋದನೆಯಿಲ್ಲದೆ ತುಂಬಿಸಲಾಗಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್. ಅಶೋಕ್‌. ಸೋಮವಾರ ನಡೆದ ರಾಜ್ಯ ವಿಧಾನಸಭೆಯ ಅಧಿವೇಶನದ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹೆಚ್ಚಿನ ಕೆರೆಗಳ ಅತಿಕ್ರಮಣ ನಡೆದಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಹಲವೆಡೆ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಅವಾಂತರಗಳ ಕುರಿತು ವಿಧಾನಸಭೆಯಲ್ಲಿ 12 ಗಂಟೆಗಳ ಕಾಲ ನಡೆದ ಚರ್ಚೆಗೆ ಉತ್ತರಿಸಿದ ಅಶೋಕ್ ಅವರು, “1963 ರಿಂದ ಹಲವಾರು ಕಟ್ಟಡಗಳು ಮತ್ತು ಲೇಔಟ್‌ಗಳನ್ನು ಕೆರೆಗಳನ್ನು ಸಮತಟ್ಟು ಮಾಡಿ ಅವುಗಳ ಮೇಲೆ ನಿರ್ಮಿಸಲಾಗಿದ್ದು, ಹೀಗಾಗಿ ಅವು ಕಣ್ಮರೆಯಾಗುತ್ತಿವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2 ರಿಂದ 4 ಸಾವಿರ ಮಿಲಿಯನ್ ಕ್ಯೂಬಿಕ್ ಅಡಿ (ಟಿಎಂಸಿಎಫ್‌ಟಿ) ನೀರು ಸಂಗ್ರಹವಾಗುತ್ತಿದ್ದ ಕೆರೆಗಳ ಮೇಲೆ ಲೇಔಟ್‌ಗಳನ್ನು ನಿರ್ಮಿಸಿರುವ ಪ್ರದೇಶಗಳ ಬಗ್ಗೆಯೂ ಕಂದಾಯ ಸಚಿವರು ತಿಳಿಸಿದ್ದಾರೆ. “ಕೆರೆ ಸಮತಟ್ಟು ಮಾಡಿರುವ ಈ ಪ್ರದೇಶಗಳಲ್ಲಿ ರಾಜಾಜಿನಗರ (1963), ಕೋರಮಂಗಲ (1965), ಡಾಲರ್ಸ್ ಕಾಲೋನಿ (1973), ದೊಮ್ಮಲೂರು (1977), HAL-I ಮತ್ತು HAL-II (1978), HSR I ಮತ್ತು II (1986) ಮತ್ತು ಇತರವುಗಳು ಸೇರಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

“ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ಪ್ರತಿಪಕ್ಷ ನಾಯಕರಿಂದ ಬಂದಿರುವ ಹೇಳಿಕೆಗಳನ್ನು ನೋಡಿದರೆ ಬೊಮ್ಮಾಯಿ ಅಧಿಕಾರಕ್ಕೆ ಬಂದ ನಂತರ ಬೆಂಗಳೂರು ಸರ್ವನಾಶವಾಯಿತು ಎಂಬಂತೆ ಹೇಳುತ್ತಿದ್ದಾರೆ” ಎಂದು ಅಶೋಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದೆ ರಾಜ್ಯವನ್ನು ಆಳಿದ ಕಾಂಗ್ರೆಸ್ ಸರ್ಕಾರಗಳನ್ನು ಅವರು ದೂಷಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷದ ನಾಯಕರಾದ ಕೃಷ್ಟ ಬೈರೇಗೌಡ, ಕೆ.ಜೆ.ಜಾರ್ಜ್ ಮತ್ತು ರಾಮಲಿಂಗಾರೆಡ್ಡಿ, “ಇತಿಹಾಸವನ್ನು ನೆನಪಿಸಿಕೊಳ್ಳುವ ಮೂಲಕ ಆಡಳಿತಾರೂಢ ಸರ್ಕಾರ ತಮ್ಮ ವೈಫಲ್ಯಗಳನ್ನು ಮರೆಮಾಚಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಈ ಮಧ್ಯೆ, ಬೆಂಗಳೂರಿನಲ್ಲಿ ಕೆರೆಗಳನ್ನು ಒತ್ತುವರಿ ಮಾಡಿಕೊಂಡಿರುವ ಕುರಿತು ಸಮಗ್ರ ತನಿಖೆಗೆ ಆದೇಶಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. “ಅಭಿವೃದ್ಧಿಯ ಹೆಸರಿನಲ್ಲಿ ಹಿಂದೆ ಮಾಡಿದ ತಪ್ಪುಗಳು ಮರುಕಳಿಸಬಾರದು. ಇದಕ್ಕಾಗಿ, ಈ ಭೂಮಿಯನ್ನು ಯಾವಾಗ ಮತ್ತು ಏಕೆ ಬಳಸಲಾಯಿತು ಎಂಬುದನ್ನು ತನಿಖೆ ಮಾಡುವುದು ಅವಶ್ಯಕ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

“ಯಾವ ರಾಜಕೀಯ ಶಕ್ತಿಗಳು ಕೆರೆಗಳ ಅತಿಕ್ರಮಣವನ್ನು ಖಚಿತಪಡಿಸಿದವು; ಯಾವ ಅಧಿಕಾರಿಗಳು ಕಾರ್ಯವನ್ನು ನಿರ್ವಹಿಸಿದರು; ಇತರರ ಹೆಸರಿನಲ್ಲಿ ಸಂಪತ್ತನ್ನು ಕೂಡಿಟ್ಟವರು ಯಾರು; 2007 ರ ನಂತರ ಯಾರು ಸಂಪತ್ತನ್ನು ಸಂಗ್ರಹಿಸಿದರು ಎಂಬುವುದನ್ನು ತನಿಖೆ ನಡೆಸುತ್ತೇವೆ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...