Homeಕರ್ನಾಟಕಭ್ರಷ್ಟಾಚಾರ ಪ್ರಕರಣ: ಯಡಿಯೂರಪ್ಪ ವಿರುದ್ಧದ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ

ಭ್ರಷ್ಟಾಚಾರ ಪ್ರಕರಣ: ಯಡಿಯೂರಪ್ಪ ವಿರುದ್ಧದ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ

- Advertisement -
- Advertisement -

ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ಯಡಿಯೂರಪ್ಪ ಮತ್ತು ಇತರರ ವಿರುದ್ಧದ ದೂರನ್ನು ಮರುಸ್ಥಾಪಿಸಿದ ರಾಜ್ಯ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಮೇಲೆ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಖಾಸಗಿ ದೂರುದಾರರಿಗೆ ನೋಟಿಸ್ ಜಾರಿ ಮಾಡಿದೆ.

ಯಡಿಯೂರಪ್ಪ ಅವರ ಪರವಾಗಿ ಹಾಜರಾದ ಹಿರಿಯ ವಕೀಲರಾದ ಸಿದ್ಧಾರ್ಥ್ ದವೆ ಮತ್ತು ಮುಕುಲ್ ರೋಹಟಗಿ ಅವರು “ಸಾರ್ವಜನಿಕ ಸೇವಕನ ನಿರ್ಧಾರಗಳು ಅಥವಾ ಕ್ರಮಗಳಿಗೆ ಸಂಬಂಧಿಸಿದಂತೆ ಮಾಡಿದ ಅಪರಾಧಗಳ ಬಗ್ಗೆ ಯಾವುದೇ ರೀತಿಯ ವಿಚಾರಣೆ ಅಥವಾ ತನಿಖೆ ನಡೆಸುವ ಮೊದಲು ಭ್ರಷ್ಟಾಚಾರ ತಡೆ ಕಾಯಿದೆ (ಪಿಸಿ ಆಕ್ಟ್) ಪೂರ್ವ ಮಂಜೂರಾತಿ ಅಗತ್ಯವಿದೆ” ಎಂದು ಪ್ರತಿಪಾದಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 7 ರಂದು ಮರುಸ್ಥಾಪಿಸಿತು. ಸರ್ಕಾರಿ ಗುತ್ತಿಗೆ ನೀಡಲು ಲಂಚ ಪಡೆದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು.

ಇದನ್ನೂ ಓದಿ: ಬಿಜೆಪಿ ಸಂಸದೀಯ ಮಂಡಳಿ: ಬಿ.ಎಸ್.ಯಡಿಯೂರಪ್ಪ ಒಳಗೆ, ನಿತಿನ್ ಗಡ್ಕರಿ ಔಟ್; ಆದಿತ್ಯನಾಥ್‌ಗೆ ಸ್ಥಾನವಿಲ್ಲ!

ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯವು ಈ ಹಿಂದೆ ವಜಾಗೊಳಿಸಿತ್ತು. ಆ ಸಮಯದಲ್ಲಿ ಆಗಿನ ರಾಜ್ಯಪಾಲರು ಅದಕ್ಕೆ ಅನುಮತಿ ನೀಡಲು ನಿರಾಕರಿಸಿದ್ದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಗುತ್ತಿಗೆ ನೀಡುವುದಕ್ಕೆ ಪ್ರತಿಯಾಗಿ ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪನಿ ಮತ್ತು ಇತರ ಶೆಲ್ ಕಂಪನಿಗಳಿಂದ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರು ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ದೂರು ದಾಖಲಿಸಿದ್ದಾರೆ. ಅಬ್ರಹಾಂ ಅವರು ಕಳೆದ ವರ್ಷವೂ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಆದರೆ ಯಡಿಯೂರಪ್ಪ ಆಗ ಮುಖ್ಯಮಂತ್ರಿಯಾಗಿದ್ದ ಕಾರಣ ಅನುಮೋದನೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅದು ವಜಾಗೊಳಿಸಿತ್ತು.

ಸೆಪ್ಟೆಂಬರ್ 16 ರಂದು ಕರ್ನಾಟಕ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ಪ್ರಕರಣದಲ್ಲಿ ಯಡಿಯೂರಪ್ಪ, ಅವರ ಮಗ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಅವರ ಕುಟುಂಬದ ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಶಿಕಾರಿಪುರ: ಯಡಿಯೂರಪ್ಪ ಸಂಸ್ಥಾನದಲ್ಲಿ ಬಿಜೆಪಿಯೇ ಕಾಣೆ!!

ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ (ಪಿಸಿಎ) ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕ ಲೋಕಾಯುಕ್ತ ಪೊಲೀಸರು ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದ ನಂತರ, ಸೆಪ್ಟೆಂಬರ್ 19 ರಂದು ಯಡಿಯೂರಪ್ಪ ಅವರು ಪ್ರಕರಣವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...