Homeಮುಖಪುಟಯುಪಿ: ಶಿಕ್ಷಕನಿಗೆ ಮೂರು ಬಾರಿ ಗುಂಡು ಹಾರಿಸಿದ 10ನೇ ತರಗತಿ ವಿದ್ಯಾರ್ಥಿ

ಯುಪಿ: ಶಿಕ್ಷಕನಿಗೆ ಮೂರು ಬಾರಿ ಗುಂಡು ಹಾರಿಸಿದ 10ನೇ ತರಗತಿ ವಿದ್ಯಾರ್ಥಿ

- Advertisement -
- Advertisement -

ಉತ್ತರ ಪ್ರದೇಶದ ಸೀತಾಪುರದಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕರ ಮೇಲೆ ಸ್ವದೇಶಿ ದೇಶ ನಿರ್ಮಿತ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ. ಬಾಲಕನೂ 10ನೇ ತರಗತಿಯಲ್ಲಿ ಕಲಿಯುತ್ತಿದ್ದು, ಸಹಪಾಠಿಯೊಂದಿಗೆ ಜಗಲವಾಡಿದ್ದಕ್ಕೆ ಶಿಕ್ಷಕನೂ ಆತನಿಗೆ ಗದರಿಸಿದ್ದರು ಎನ್ನಲಾಗಿದೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಆರೋಪಿ ವಿದ್ಯಾರ್ಥಿ ಶಿಕ್ಷಕರ ಮೇಲೆ ಮೂರು ಸುತ್ತು ಗುಂಡು ಹಾರಿಸಿ ಬಂದೂಕಿನೊಂದಿಗೆ ಪರಾರಿಯಾಗಿದ್ದಾನೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಂಡೇಟಿನಿಂದಾಗಿ ಶಿಕ್ಷಕ ಗಂಭೀರವಾಗಿ ಗಾಯಗೊಂಡಿದ್ದರೂ, ಪ್ರಸ್ತುತ ಅಪಾಯದಿಂದ ಪಾರಾಗಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ದೀಕ್ಷಿತ್ ತಿಳಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಲಕ್ನೋಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದರಲ್ಲಿ ವಿದ್ಯಾರ್ಥಿಯು ಕೈಯಲ್ಲಿ ಗನ್ ಹಿಡಿದು ಶಿಕ್ಷಕನನ್ನು ಹಿಂಬಾಲಿಸುತ್ತಿರುವುದನ್ನು ಕಾಣುತ್ತದೆ. ಆದರೆ ಕೆಲವೇ ಕ್ಷಣಗಳಲ್ಲಿ ಅವನ ಕೈಯಿಂದ ಬಂದೂಕನ್ನು ಕಸಿದುಕೊಳ್ಳಲು ಶಿಕ್ಷಕನು ಪ್ರಯತ್ನಿಸುತ್ತಾರೆ.

ಈ ವೇಳೆ ವಿದ್ಯಾರ್ಥಿಯು ತನ್ನ ಪಿಸ್ತೂಲಿನಿಂದ ಶಿಕ್ಷಕನ ಮೇಲೆ ಹಲ್ಲೆ ನಡೆಸುತ್ತಾನೆ. ಅಷ್ಟರಲ್ಲಿ ಪ್ರತ್ಯಕ್ಷದರ್ಶಿ ಕೂಡಾ ವಿದ್ಯಾರ್ಥಿಯ ಕೈಯಿಂದ ಬಂದೂಕು ಕಸಿದುಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ನಂತರ ಇನ್ನೂ ಕೆಲವರು ಧಾವಿಸಿ ಬಂದು ವಿದ್ಯಾರ್ಥಿಯನ್ನು ಹಿಡಿದುಕೊಳ್ಳುತ್ತಾರೆ. ಒಬ್ಬರು ಕೋಲಿನಿಂದ ಅವನನ್ನು ಬೆದರಿಸುವುದು ವಿಡಿಯೊದಲ್ಲಿ ಕಾಣಬಹುದು.

ಇದನ್ನೂ ಓದಿ: ಯಾದಗಿರಿ | ‘ತನ್ನ ಸಾವಿಗೆ ಶಿಕ್ಷಕರೇ ಕಾರಣ’; ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಲಿತ ವಿದ್ಯಾರ್ಥಿ

ತನ್ನ ವಾಗ್ದಂಡನೆಗೆ ಒಳಗಾಗಿದ್ದ ವಿದ್ಯಾರ್ಥಿಗೆ ಇಷ್ಟೊಂದು ಬೇಸರವಾಗಿದೆ ಎಂದು ತನಗೆ ತಿಳಿದಿರಲಿಲ್ಲ ಎಂದು ಶಿಕ್ಷಕರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...