Homeಕರ್ನಾಟಕಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐ ವಿರುದ್ಧ ಮತ್ತೆ ದಾಳಿ ನಡೆಸಿದ NIA; 50 ಜನರು...

ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐ ವಿರುದ್ಧ ಮತ್ತೆ ದಾಳಿ ನಡೆಸಿದ NIA; 50 ಜನರು ವಶಕ್ಕೆ

ಇದು ಪೂರ್ವಾಗ್ರಹ ಪೀಡಿತವಾದ ದಾಳಿ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ

- Advertisement -
- Advertisement -

ಕರ್ನಾಟಕ ಸೇರಿದಂತೆ ದೇಶದ ಎಂಟು ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ದಾಳಿ ನಡೆಸುತ್ತಿದೆ. 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಅವರ ವಿಚಾರಣೆಯನ್ನು ಆಧರಿಸಿ ಬಂಧಿಸಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಮಹಾರಾಷ್ಟ್ರದ ಔರಂಗಾಬಾದ್, ಜಲನಾ, ಪರ್ಭಾನಿ ಜಿಲ್ಲೆಗಳಲ್ಲಿ; ಕರ್ನಾಟಕದ ಶಿವಮೊಗ್ಗ, ಬೀದರ್, ಬಳ್ಳಾರಿ, ಹುಬ್ಬಳ್ಳಿ, ಕಲಬುರಗಿ ಜಿಲ್ಲೆಗಳು; ಅಸ್ಸಾಂನ ನಾಗರ್ಬೆರಾ; ಬುಲಂದ್‌ಶಹರ್‌ನ ಕಸ್ಬಾ ಸಯಾನ, ಸರೂರ್‌ಪುರ ಮತ್ತು ಪಶ್ಚಿಮ ಉತ್ತರ ಪ್ರದೇಶದ ಮೀರತ್‌ನ ಲಿಸಾರಿ ಗೇಟ್ ಪ್ರದೇಶ; ಮತ್ತು ದೆಹಲಿಯ ಹಲವಾರು ಸ್ಥಳಗಳಲ್ಲಿ ದಾಳಿಗಳು ನಡೆದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಮುಂಜಾನೆಯೇ ದಾಳಿ ಆರಂಭವಾಗಿದ್ದು, ಅದು ಮುಂದುವರಿದಿದೆ. ಕೆಲವು ರಾಜ್ಯಗಳಲ್ಲಿ ತಮ್ಮ ಸೂಚನೆಯ ಮೇರೆಗೆ ಸ್ಥಳೀಯ ಪೊಲೀಸರು ದಾಳಿ ನಡೆಸುತ್ತಿದ್ದಾರೆ ಎಂದು ಎನ್ಐಎ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಭಾರತದ ರಾಷ್ಟ್ರಪತಿ ‘ಸೆರಗು’ ಧರಿಸುತ್ತಾರೆ, ಅದು ಪಿಎಫ್‌ಐನ ಪಿತೂರಿಯೇ?: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

ಅಸ್ಸಾಂನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) (ವಿಶೇಷ ಶಾಖೆ) ಹಿರೇನ್ ನಾಥ್ ಅವರು ನಗರ್‌ಬೆರಾ ಪ್ರದೇಶದಿಂದ ಐವರು ಪಿಎಫ್‌ಐ ಸದಸ್ಯರನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. ಅಸ್ಸಾಂನ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಯುತ್ತಿದೆ ಎಂದು ಡಿಜಿಪಿ ತಿಳಿಸಿದ್ದಾರೆ. ಎನ್‌ಐಎ ಇತ್ತೀಚೆಗೆ ನಡೆಸಿದ ದಾಳಿಯಲ್ಲಿ 11 ಮಂದಿಯನ್ನು ಬಂಧಿಸಲಾಗಿತ್ತು.

ಪಶ್ಚಿಮ ಉತ್ತರ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ನಾಲ್ವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. “ನಾವು ಅವರನ್ನು  ಪರಿಶೀಲನೆ ಮಾಡುತ್ತಿದ್ದೇವೆ. ಸದ್ಯಕ್ಕೆ ಅವರಲ್ಲಿ ಯಾರೊಬ್ಬರ ವಿರುದ್ಧವೂ ಯಾವುದೇ ಬಂಧನ ಮೆಮೊಗಳನ್ನು ದಾಖಲಿಸಲಾಗಿಲ್ಲ. ಅವರು ಪಿಎಫ್‌ಐ ಸದಸ್ಯರಿದ್ದು, ಈ ಹಿಂದೆ ಬಂಧಿತರಾದ ಪಿಎಫ್‌ಐ ಸದಸ್ಯರನ್ನು ಪ್ರಶ್ನಿಸಿದ ನಂತರ ನಮಗೆ ಹೊಸ ಮಾಹಿತಿ ಸಿಕ್ಕಿತ್ತು. ಹೀಗಾಗಿ ದಾಳಿ ನಡೆಸುತ್ತಿದ್ದೇವೆ” ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದ ಔರಂಗಾಬಾದ್, ಜಲನಾ ಮತ್ತು ಪರ್ಭಾನಿ ಜಿಲ್ಲೆಗಳಲ್ಲಿ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಸ್ಥಳೀಯ ಪೊಲೀಸರು ದಾಳಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪಿಎಫ್‌ಐ ಥರದ ಸಂಘಟನೆಗಳನ್ನು ನಿಷೇಧಿಸಿ: ಸರ್ವಧರ್ಮ ಸಮ್ಮೇಳನದಲ್ಲಿ ಸೂಫಿ ಸಂಸ್ಥೆ ಒತ್ತಾಯ

ಕರ್ನಾಟಕದ ಶಿವಮೊಗ್ಗ, ಬೀದರ್, ಬಳ್ಳಾರಿ, ಹುಬ್ಬಳ್ಳಿ, ಕಲಬುರಗಿ ಭಾಗದಲ್ಲಿ ದಾಳಿ ನಡೆಯುತ್ತಿದೆ. ಶಿವಮೊಗ್ಗದಲ್ಲಿ ಐವರು, ಬಳ್ಳಾರಿಯಲ್ಲಿ ನಾಲ್ವರು, ಹುಬ್ಬಳ್ಳಿಯಲ್ಲಿ ಇಬ್ಬರು, ಕೋಲಾರ ಜಿಲ್ಲೆಯಿಂದ ಆರು ಮಂದಿಯನ್ನು ಬಂಧಿಸಲಾಗಿದೆ. ಬೀದರ್ ಜಿಲ್ಲಾಧ್ಯಕ್ಷ ಮತ್ತು ಕಲಬುರಗಿ ಮಾಧ್ಯಮ ಸಂಯೋಜಕನನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ, ನಿಜಾಮುದ್ದೀನ್, ರೋಹಿಣಿ, ಜಾಮಿಯಾ ಮತ್ತು ಶಾಹಿನ್ ಬಾಗ್‌ನಲ್ಲಿ ದಾಳಿಗಳು ನಡೆಯುತ್ತಿವೆ. ಬಂಧಿತ ಪಿಎಫ್‌ಐ ಸದಸ್ಯರ ವಿಚಾರಣೆ ವೇಳೆ ಎನ್‌ಐಎಗೆ ಹೊಸ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ವಾರದ ಆರಂಭದಲ್ಲಿ, ಪಿಎಫ್‌ಐನ 106 ಕ್ಕೂ ಹೆಚ್ಚು ಸದಸ್ಯರನ್ನು ಎನ್‌ಐಎ ಮತ್ತು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಸೋಮವಾರ ಇಬ್ಬರು ಪಿಎಫ್‌ಐ ಸದಸ್ಯರ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಲಾಗಿದೆ. ಸದ್ಯಕ್ಕೆ, ಎನ್‌ಐಎ ಒಟ್ಟು 19 ಪಿಎಫ್‌ಐ ಸಂಬಂಧಿತ ಪ್ರಕರಣಗಳ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

“2010-2011ರಲ್ಲಿ ಸುಮಾರು 46 ಆರೋಪಿಗಳನ್ನು ಬಂಧಿಸಿ ನಂತರ ಶಿಕ್ಷೆಗೆ ಗುರಿಪಡಿಸಲಾಗಿದೆ ಎಂದು ಎನ್ಐಎ ಹೇಳಿದೆ” ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಸುಮಾರು 355 ಪಿಎಫ್‌ಐ ಸದಸ್ಯರ ವಿರುದ್ಧ ಈಗಾಗಲೇ ಎನ್‌ಐಎ ಚಾರ್ಜ್‌ಶೀಟ್ ಮಾಡಿದೆ.

ಪಿಎಫ್‌ಐ ವಿರುದ್ಧ ಎನ್‌ಐಎ ನಡೆಸುತ್ತಿರುವ ದಾಳಿಯು ಪೂರ್ವಾಗ್ರಹ ಪೀಡಿತವಾದದ್ದು ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ. ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ದಾಳಿಗೆ ಏನು ಕಾರಣ ಎಂಬ ಬಗ್ಗೆ ಎನ್‌ಐಎ ಏನೂ ಹೇಳುತ್ತಿಲ್ಲ. ಪೂರ್ವಾಗ್ರಹ ಪೀಡಿತರಾಗಿ ದಾಳಿ ನಡೆಸುತ್ತಿದೆ. ಮುನ್ಸೂಚನಾ ಕ್ರಮವಾಗಿ ಶಾಂತಿ ಕದಡುವ ಪ್ರಯತ್ನ ಆಗಬಹುದು ಎಂದು ಐಪಿಸಿ 107 ಅಡಿಯಲ್ಲಿ ಬಂಧಿಸುತ್ತಿದ್ದಾರೆ” ಎಂದು ಹೇಳಿದರು.

“ಆರೆಸ್ಸೆಸ್‌ ಮತ್ತು ಬಜರಂಗದಳ ಇಲ್ಲಿವರೆಗೆ ಬಹಿರಂಗವಾಗಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ನಡೆಸುತ್ತಿದೆ. ವಿಜಯದಶಮಿ ದಿನ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್‌ ಸಾವಿರಾರು ಶಸ್ತ್ರಾಸ್ತ್ರಗಳನ್ನು ಜೋಡಿಸಿಕೊಂಡು ಪೂಜೆ ಮಾಡುತ್ತಾರೆ. ಈ ಶಸ್ತ್ರಾಸ್ತ್ರಗಳ ಲೈಸನ್ಸ್‌ ಯಾರ ಹೆಸರಿನಲ್ಲಿದೆ ಎಂಬುವುದನ್ನು ಎನ್‌ಐಎ ಇಲ್ಲಿವರೆಗೂ ಪ್ರಶ್ನೆ ಮಾಡಿಲ್ಲ” ಎಂದು ಭಾಸ್ಕರ್‌ ಪ್ರಸಾದ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

“ಪಿಎಫ್‌ಐ ಕಚೇರಿಗಳ ಮೇಲೆ ನಡೆದ ದಾಳಿಯಲ್ಲಿ ಪೆನ್ನು, ಪೇಪರ್‌, ಕಂಪ್ಯೂಟರ್‌ಗಳು ಬಿಟ್ಟರೆ ಈವರೆಗೂ ಒಂದು ರೇಝರ್‌ ಕೂಡಾ ಎನ್‌ಐಎ‌ಗೆ ಸಿಕ್ಕಿಲ್ಲ. ಆದರೆ ಮಾಧ್ಯಮಗಳು ಮಾತ್ರ ಭಯಂಕರವಾಗಿರುವು ಏನೋ ಸಿಕ್ಕಿದೆ ಎಂದು ಹೇಳುತ್ತಿವೆ. ಆದರೆ ಅದು ಏನು ಎಂದು ಅವುಗಳು ಹೇಳುತ್ತಿಲ್ಲ. ಅಷ್ಟೆ ಅಲ್ಲದೆ, ಎನ್‌ಐಎ ಕೂಡಾ ಒಂದೇ ಒಂದು ಸಣ್ಣ ವಿಚಾರವನ್ನು ಅಧೀಕೃತವಾಗಿ ಬಹಿರಂಗಪಡಿಸಿಲ್ಲ. ಆದರೆ ಮಾಧ್ಯಮಗಳು ಮಾತ್ರ ಎನ್‌ಐಎ ಹೇಳದೆ ಇರುವುದನ್ನು ಮಾಧ್ಯಮಗಳು ಹೇಳುತ್ತಿವೆ. ಯಾಕೆಂದರೆ ಈ ಮಾಧ್ಯಮಗಳು ಎಲ್ಲವೂ ಬಿಜೆಪಿ ಸಾಕಿಕೊಂಡಿರುವವುಗಳಾಗಿವೆ” ಎಂದು ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...