Homeಚಳವಳಿಛತ್ತೀಸ್‌ಗಢ: ಜೀವವೈವಿಧ್ಯದಿಂದ ಸಮೃದ್ಧವಾಗಿರುವ ಪ್ರಾಚೀನ ಕಾಡಿನಲ್ಲಿ ಗಣಿಗಾರಿಕೆಗೆ ಚಾಲನೆ; ಪ್ರತಿಭಟನಾಕಾರರ ಬಂಧನ

ಛತ್ತೀಸ್‌ಗಢ: ಜೀವವೈವಿಧ್ಯದಿಂದ ಸಮೃದ್ಧವಾಗಿರುವ ಪ್ರಾಚೀನ ಕಾಡಿನಲ್ಲಿ ಗಣಿಗಾರಿಕೆಗೆ ಚಾಲನೆ; ಪ್ರತಿಭಟನಾಕಾರರ ಬಂಧನ

ಕಲ್ಲಿದ್ದಲು ಗಣಿಗಾಗಿ 3 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲಾಗುತ್ತದೆ ಎಂದು ವರದಿಯಾಗಿದೆ

- Advertisement -
- Advertisement -

ಛತ್ತೀಸ್‌ಗಢ ಅರಣ್ಯ ಇಲಾಖೆಯು ಜೀವವೈವಿಧ್ಯದಿಂದ ಸಮೃದ್ಧವಾಗಿರುವ ಪ್ರಾಚೀನ ಹಾಸ್ಡಿಯೊ ಅರಂಡ್ ಪ್ರದೇಶದಲ್ಲಿ ಮುಂಬರುವ ಕಲ್ಲಿದ್ದಲು ಗಣಿಗಾರಿಕೆ ಯೋಜನೆಗಾಗಿ ಮಂಗಳವಾರ ಮರಗಳನ್ನು ಕಡಿಯಲು ಪ್ರಾರಂಭಿಸಿದೆ. ಇದನ್ನು ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಪ್ರದೇಶದಲ್ಲಿ ಗಣಿಗಾರಿಕೆ ನಡೆದರೆ ಅರಣ್ಯ ನಾಶವಾಗಿ, ಮಾನವ-ಪ್ರಾಣಿಗಳ ಸಂಘರ್ಷಕ್ಕೆ ಕಾರಣವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಸುರ್ಗುಜಾ ಜಿಲ್ಲೆಯ ಉದಯಪುರ ಡೆವಲಪ್‌ಮೆಂಟ್ ಬ್ಲಾಕ್‌ನಲ್ಲಿರುವ ಪೆಂದ್ರಮಾರ್-ಘಾಟ್ಬರ್ರಾ ಗ್ರಾಮಗಳ ಬಳಿ ಮರ ಕಡಿಯುವ ಪ್ರಕ್ರಿಯೆಗೆ ಅನುಕೂಲವಾಗುವಂತೆ ಭಾರೀ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಇದನ್ನು ವಿರೋಧಿಸಲು ಸ್ಥಳೀಯರನ್ನು ಪ್ರಚೋದಿಸಿದ ಆರೋಪದಲ್ಲಿ ಕನಿಷ್ಠ 10 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಇಕನಾಮಿಕ್ಸ್‌ ಟೈಮ್ಸ್‌ ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪರ್ಸಾ ಈಸ್ಟ್ ಕೆಂಟೆ ಬಸನ್ (ಪಿಇಕೆಬಿ) ಕಲ್ಲಿದ್ದಲು ಗಣಿ ಎರಡನೇ ಹಂತದ ಕಾಮಗಾರಿಗಾಗಿ ಅರಣ್ಯ ಇಲಾಖೆಯು ಪೆಂಡ್ರಮಾರ್-ಘಾಟ್‌ಬರ್ರಾ ಅರಣ್ಯದಲ್ಲಿ ಬೆಳಿಗ್ಗೆ ಮರಗಳನ್ನು ಕಡಿಯಲು ಪ್ರಾರಂಭಿಸಿತು ಎಂದು ಸುರ್ಗುಜಾ ಜಿಲ್ಲಾಧಿಕಾರಿ ಕಲೆಕ್ಟರ್ ಕುಂದನ್ ಕುಮಾರ್ ಪಿಟಿಐಗೆ ತಿಳಿಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಅಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅರಣ್ಯ ಕಾನೂನು ಉಲ್ಲಂಘನೆ: ಜಗ್ಗಿ ವಾಸುದೇವ್, ಅಸ್ಸಾಂ ಸಿಎಂ ವಿರುದ್ಧ ದೂರು, ಬಂಧನಕ್ಕೆ ಆಗ್ರಹ

“ಛತ್ತೀಸ್‌ಗಢದ ಹಾಸ್ಡಿಯೋ ಅರಣ್ಯದಲ್ಲಿ ಬೃಹತ್ ಮರವನ್ನು ಕಡಿಯಲಾಗುತ್ತಿದೆ. ಕಲ್ಲಿದ್ದಲು ಗಣಿಗಾಗಿ 3 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲಾಗುತ್ತದೆ” ಎಂದು ಆದಿವಾಸಿಗಳ ಪರ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲಸ ಮಾಡುವ ಟ್ರೈಬಲ್ ಆರ್ಮಿ ಟ್ವಿಟರ್‌ ಹ್ಯಾಂಡಲ್ ಆತಂಕ ವ್ಯಕ್ತಪಡಿಸಿದೆ.

“ಈ ಗಣಿಗಾಗಿ 100 ರಷ್ಟು ಆದಿವಾಸಿಗಳನ್ನು ಸ್ಥಳಾಂತರಿಸಲಾಗುತ್ತದೆ. ಅಪಾಯದಲ್ಲಿರುವ ಅನೇಕ ವನ್ಯಜೀವಿ ಪ್ರಭೇದಗಳಿಗೆ ಈ ಪ್ರಾಚೀನ ಅರಣ್ಯ ನೆಲೆಯಾಗಿದೆ. ದಯವಿಟ್ಟು ನಮ್ಮ ಹಾಸ್ಡಿಯೊ ಅರಣ್ಯವನ್ನು ಉಳಿಸಿ” ಎಂದು ಟ್ರೈಬಲ್ ಆರ್ಮಿ ವಿನಂತಿಸಿದೆ.

ಇದನ್ನೂ ಓದಿ: ಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

ಹಾಸ್ಡಿಯೊ ಪ್ರದೇಶದಲ್ಲಿ ಯಾವುದೇ ಹೊಸ ಗಣಿಗಳನ್ನು ತೆರೆಯುವುದಿಲ್ಲ ಎಂಬ ರಾಜ್ಯ ಸರ್ಕಾರ ನೀಡಿದ್ದ ಭರವಸೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಪಿಇಕೆಬಿ ಹಳೆಯ ಗಣಿಯಾಗಿದ್ದು, ಅದಕ್ಕೆ ಈಗಾಗಲೇ ಅಗತ್ಯ ಅನುಮತಿಗಳನ್ನು ನೀಡಲಾಗಿದೆ” ಎಂದು ಹೇಳಿದ್ದಾರೆ.

ಅಧೀಕೃತ ಕೆಲಸಕ್ಕೆ ಅಡ್ಡಿಪಡಿಸಿದ ಮತ್ತು ಮರ ಕಡಿಯುವ ಪ್ರಕ್ರಿಯೆಯ ವಿರುದ್ಧ ಸ್ಥಳೀಯರನ್ನು ಪ್ರಚೋದಿಸಿದ ಆರೋಪದ ಮೇಲೆ ಕನಿಷ್ಠ 10 ಗ್ರಾಮಸ್ಥರನ್ನು ಬಂಧಿಸಲಾಗಿದೆ ಎಂದು ಜಿಲ್ಲಾಡಳಿತದ ಇನ್ನೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಪರಿಸರದ ವಿಚಾರಗಳು ಮತ್ತು ಬುಡಕಟ್ಟು ಜನಾಂಗದವರ ಹಕ್ಕುಗಳಿಗಾಗಿ ಕೆಲಸ ಮಾಡುವ ಛತ್ತೀಸ್‌ಗಢ ಬಚಾವೋ ಆಂದೋಲನದ ಸಂಚಾಲಕ, ಹೋರಾಟಗಾರ ಅಲೋಕ್ ಶುಕ್ಲಾ ಅವರು,“ಪರಿಸರ ಸೂಕ್ಷ್ಮ ಹಸ್ದಿಯೋ ಅರಂದ್ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುವುದರಿಂದ 1,70,000 ಹೆಕ್ಟೇರ್ ಅರಣ್ಯ ನಾಶವಾಗುತ್ತದೆ. ಅಲ್ಲದೆ ಮಾನವ-ಆನೆ ಸಂಘರ್ಷಕ್ಕೆ ಕಾರಣವಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಮುಖಭಂಗ: ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ ವರ್ಗಾವಣೆ ಆದೇಶಕ್ಕೆ ತಡೆ

ರಾಜ್ಯ ಸರ್ಕಾರವು 841.538 ಹೆಕ್ಟೇರ್ ಅರಣ್ಯ ಭೂಮಿಯನ್ನು ಪಾರ್ಸಾ ಗಣಿಗಾಗಿ ಸುರ್ಗುಜಾ ಮತ್ತು ಸೂರಜ್‌ಪುರ ಜಿಲ್ಲೆಗಳ 1,136.328 ಹೆಕ್ಟೇರ್‌ಗಳನ್ನು, PEKB ಹಂತ-II ಗಣಿ (ಸುರ್ಗುಜಾ) ಗಾಗಿ ರಾಜಸ್ಥಾನ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮಕ್ಕೆ (RVUNLMITED) ಮಂಜೂರು ಮಾಡಲು ಅರಣ್ಯೇತರ ಬಳಕೆಗೆ ಅನುಮತಿ ನೀಡಿದೆ.

ಈ ವರ್ಷದ ಮಾರ್ಚ್‌ನಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಭೇಟಿಯಾದ ನಂತರ ಈ ಹಿಂದೆ ರಾಜ್ಯಕ್ಕೆ ಮಂಜೂರು ಮಾಡಲಾದ ಕಲ್ಲಿದ್ದಲು ಬ್ಲಾಕ್‌ಗಳ ಅಭಿವೃದ್ಧಿಯಲ್ಲಿನ ಅಡೆತಡೆಗಳನ್ನು ತೆರವುಗೊಳಿಸಲು ಅನುಮತಿ ನೀಡಲಾಯಿತು.

ಗಣಿಗಳ ಹಂಚಿಕೆಯನ್ನು ವಿರೋಧಿಸಿ ಕಳೆದ ಹಲವು ತಿಂಗಳುಗಳಿಂದ ಸ್ಥಳೀಯರು ಹಸ್ದಿಯೋ ಅರಂದ್ ಬಚಾವೋ ಸಂಘರ್ಷ ಸಮಿತಿಯ ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ವರ್ಷದ ಮೇ ತಿಂಗಳಲ್ಲಿ ಅರಣ್ಯ ಇಲಾಖೆಯು ಪಿಇಕೆಬಿ ಹಂತ II ಕಲ್ಲಿದ್ದಲು ಗಣಿ ಪ್ರಾರಂಭಕ್ಕೆ ದಾರಿ ಮಾಡಿಕೊಡಲು ಮರ ಕಡಿಯುವ ಪ್ರಕ್ರಿಯೆಯನ್ನು ಪ್ರಾರಂಭಿಸಿತು. ಸ್ಥಳೀಯ ಗ್ರಾಮಸ್ಥರಿಂದ ತೀವ್ರ ವಿರೋಧವನ್ನು ಉಂಟಾಗಿದ್ದು, ಅಧಿಕಾರಿಗಳು ತಮ್ಮ ಕ್ರಮವನ್ನು ನಿಲ್ಲಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಜಾರ್ಖಂಡ್‌: ಅರಣ್ಯ ಉಳಿಸಲು ’ಜಂಗಲ್ ಬಚಾವೋ’ ತಂಡ ರಚಿಸಿ ಬಿದಿರು ಕೋಲು ಹಿಡಿದ ದಿಟ್ಟ ಮಹಿಳೆಯರು

ಇದರ ನಂತರ, ರಾಜ್ಯ ಸರ್ಕಾರವು ಜೂನ್‌ನಲ್ಲಿ ಈ ಮೂರು ಪ್ರಸ್ತಾವಿತ ಕಲ್ಲಿದ್ದಲು ಗಣಿ ಯೋಜನೆಗಳ ವಿಚಾರಣೆಯನ್ನು ಸ್ಥಗಿತಗೊಳಿಸಿತು.

ಈ ಕಲ್ಲಿದ್ದಲು ಗಣಿಗಳ ಹಂಚಿಕೆಯ ವಿರುದ್ಧ ಪ್ರತಿಭಟನೆಯ ಮುಂಚೂಣಿಯಲ್ಲಿರುವ ಹೋರಾಟಗಾರ ಅಲೋಕ್ ಶುಕ್ಲಾ, “ಹಸ್ಡೆಯೋ ಅರಂದ್ ಪ್ರದೇಶದಲ್ಲಿ ಯಾವುದೇ ಹೊಸ ಗಣಿಗಳನ್ನು ತೆರೆಯುವುದಿಲ್ಲ ಎಂದು ಭರವಸೆ ನೀಡಿದೆ. ಆದರೂ ಕಾಂಗ್ರೆಸ್ ಸರ್ಕಾರವು ಮರಗಳನ್ನು ಕಡಿಯಲು ಪ್ರಾರಂಭಿಸಿ ಪ್ರತಿಭಟನಾಕಾರರನ್ನು ಬಂಧಿಸಿರುವುದು ಅತ್ಯಂತ ದುರದೃಷ್ಟಕರ” ಎಂದು ಹೇಳಿದ್ದಾರೆ. ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರ ಕಾರ್ಪೊರೇಟ್‌ಗಳ ಪರವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...