Homeಮುಖಪುಟ‘ಯುವತಿ ಸತ್ತಿರುವುದಕ್ಕೆ ಒಂದೇ ಕಾರಣ...’: ಉತ್ತರಾಖಂಡ್ ರೆಸಾರ್ಟ್‌‌ ಹತ್ಯೆ ಕುರಿತು ರಾಹುಲ್ ಗಾಂಧಿ

‘ಯುವತಿ ಸತ್ತಿರುವುದಕ್ಕೆ ಒಂದೇ ಕಾರಣ…’: ಉತ್ತರಾಖಂಡ್ ರೆಸಾರ್ಟ್‌‌ ಹತ್ಯೆ ಕುರಿತು ರಾಹುಲ್ ಗಾಂಧಿ

ಬಿಜೆಪಿಯ ಸಿದ್ಧಾಂತದ ನಿಜರೂಪ ಇದುವೆ ಆಗಿದ್ದು, ಅವರು ಅಧಿಕಾರವನ್ನು ಹೊರತುಪಡಿಸಿ ಏನನ್ನೂ ಗೌರವಿಸುವುದಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಉತ್ತರಾಖಂಡದಲ್ಲಿ ನಡೆದ 19 ವರ್ಷದ ಅಂಕಿತಾ ಭಂಡಾರಿ ಹತ್ಯೆಯನ್ನು ಉಲ್ಲೇಖಿಸಿ ಬಿಜೆಪಿ ಮತ್ತು ಆರೆಸ್ಸೆಸ್‌‌ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, “ಘಟನೆಯು ದೇಶಾದ್ಯಂತ ಆಘಾತ ಮತ್ತು ಆಕ್ರೋಶವನ್ನು ಉಂಟುಮಾಡಿದೆ” ಎಂದು ಹೇಳಿದ್ದಾರೆ. ಅವರು ಮಹಿಳೆಯರನ್ನು ‘ವಸ್ತು’ ಮತ್ತು ‘ಎರಡನೇ ದರ್ಜೆಯ ನಾಗರಿಕರು’ ಎಂದು ಪರಿಗಣಿಸುತ್ತಾರೆ ಎಂಬುದಕ್ಕೆ ಈ ಘಟನೆ ಒಂದು ಉದಾಹರಣೆಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿಜೆಪಿಯ ಸಿದ್ಧಾಂತದ ನಿಜರೂಪ ಇದುವೆ ಆಗಿದ್ದು, ಅವರು ಅಧಿಕಾರವನ್ನು ಹೊರತುಪಡಿಸಿ ಏನನ್ನೂ ಗೌರವಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೆಸಾರ್ಟ್‌‌ಗೆ ಬರುವ ಗ್ರಾಹಕರಿಗೆ ‘ವಿಶೇಷ ಸೇವೆಗಳನ್ನು’ ನೀಡಲು ನಿರಾಕರಿಸಿದ್ದಕ್ಕಾಗಿ ಅಲ್ಲಿ ರಿಷಪ್ಷನಿಷ್ಟ್‌ ಆಗಿ ಕೆಲಸದಲ್ಲಿದ್ದ ಅಂಕಿತಾ ಭಂಡಾರಿ ಅವರನ್ನು ಬಿಜೆಪಿ-ಆರೆಸ್ಸೆಸ್‌ನ ನಾಯಕನ ಪುತ್ರ ಪುಲ್ಕಿತ್ ಆರ್ಯ ಮತ್ತು ಅವರ ಇಬ್ಬರು ಸಹಚರರು ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ‘ನನ್ನನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗುತ್ತಿದೆ’: ಕೊಲೆಗೀಡಾದ ಉತ್ತರಾಖಂಡದ ಯುವತಿಯ ವಾಟ್ಸಾಪ್ ಚಾಟ್‌‌

ಹತ್ಯೆಯ ನಂತರ ಅವರ ದೇಹವನ್ನು ರಿಷಿಕೇಶ ಬಳಿಯ ಚಿಲ್ಲಾ ಕಾಲುವೆಗೆ ಎಸೆಯಲಾಗಿತ್ತು. ಪೊಲೀಸರು ಸೆಪ್ಟೆಂಬರ್ 24 ರಂದು ಮೃತದೇಹವನ್ನು ಪತ್ತೆ ಹೆಚ್ಚು ಅಲ್ಲಿಂದ ಹೊರತೆಗೆದಿದ್ದರು.

ತನ್ನನ್ನು ವೇಶ್ಯಾವಾಟಿಕೆಗೆ ತಳ್ಳುವ ಹೋಟೆಲ್ ಮ್ಯಾನೇಜರ್ ಮತ್ತು ಆತನ ಸಹಾಯಕರ ಪ್ರಯತ್ನವನ್ನು ಸಂತ್ರಸ್ತ ಯುವತಿ ವಿರೋಧಿಸಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಇದನ್ನು ಊಹಿಸಿ…ಬಿಜೆಪಿಯ ನಾಯಕರೊಬ್ಬರು ಹೋಟೆಲ್ ಹೊಂದಿದ್ದಾರೆ ಮತ್ತು ಅವರ ಮಗ ಒಬ್ಬ ಹುಡುಗಿಯನ್ನು ವೇಶ್ಯೆಯಾಗಲು ಒತ್ತಾಯಿಸುತ್ತಿದ್ದಾನೆ… ಆದರೆ ಅವರು ವೇಶ್ಯೆಯಾಗಲು ನಿರಾಕರಿಸಿದಾಗ, ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ” ಎಂದು ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಕೇರಳದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಖಂಡ ಯುವತಿ ಕೊಲೆ ಪ್ರಕರಣ: ಬಿಜೆಪಿ ಮುಖಂಡನ ಪುತ್ರನ ರೆಸಾರ್ಟ್, ಬಿಜೆಪಿ ಶಾಸಕನ ಕಾರಿಗೆ ಬೆಂಕಿ

ಈ ದೇಶದಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ಮಹಿಳೆಯರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದಕ್ಕೆ ಇದು ಅತ್ಯಂತ ಅಸಹ್ಯಕರ, ಅತ್ಯಂತ ನಾಚಿಕೆಗೇಡಿನ ಉದಾಹರಣೆಯಾಗಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸಿದ್ಧಾಂತವು ಮಹಿಳೆಯರನ್ನು ವಸ್ತು ಮತ್ತು ಎರಡನೇ ದರ್ಜೆಯ ನಾಗರಿಕರನ್ನಾಗಿ ನೋಡುತ್ತದೆ. ಈ ಸಿದ್ಧಾಂತದಿಂದ ಭಾರತ ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ತನ್ನ ಮಹಿಳೆಯರನ್ನು ಗೌರವಿಸಲು ಕಲಿಯದೆ ಅಥವಾ ಅವರನ್ನು ಸಬಲೀಕರಣಗೊಳಿಸಲು ಕಲಿಯದೆ, ದೇಶವು ಎಂದಿಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ… ತನ್ನ ಮಹಿಳೆಯರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ನೋಡುವ ದೇಶವು ವಿಫಲಗೊಂಡು ಅವನತಿ ಹೊಂದುತ್ತದೆ” ಎಂದು ಅವರು ಹೇಳಿದ್ದಾರೆ.

‘ಹೆಣ್ಣು ಮಗುವನ್ನು ಉಳಿಸಿ’ ಎಂಬ ಪ್ರಮುಖ ಅಭಿಯಾನವನ್ನು ಪ್ರಾರಂಭಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನೂ ರಾಹುಲ್ ಗಾಂಧಿ ಗುರಿಯಾಗಿಸಿದ್ದಾರೆ.

“ಹೆಣ್ಣು ಮಗುವನ್ನು ಉಳಿಸಿ ಎಂದು ಪ್ರಧಾನಿ ಘೋಷಣೆ ಮಾಡುತ್ತಾರೆ. ಆದರೆ ಬಿಜೆಪಿ ಅತ್ಯಾಚಾರಿಯನ್ನು ಉಳಿಸುವ ಕೆಲಸ ಮಾಡುತ್ತದೆ. ಅವರಯ ಕೇವಲ ಭಾಷಣಗಳು, ಸುಳ್ಳು ಮತ್ತು ಪೊಳ್ಳು ಭಾಷಣಗಳನ್ನು ಮಾಡಿದ ಭಾರತದ ಮೊದಲ ಪ್ರಧಾನಿಯಾಗಿದ್ದಾರೆ. ಅವರ ಆಡಳಿತವು ಅಪರಾಧಿಗಳಿಗೆ ಮೀಸಲಾಗಿದೆ. ಆದರೆ ಈಗ ಭಾರತವು ಮೌನವಾಗಿ ಕುಳಿತುಕೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

ರಾಹುಲ್ ಗಾಂಧಿ ಅವರು ಈ ಹಿಂದೆಯೂ ಉತ್ತರಾಖಂಡ್ ಹತ್ಯೆಯ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

“ಅಪರಾಧ ಮತ್ತು ದುರಹಂಕಾರ ಬಿಜೆಪಿಗೆ ಸಮಾನಾರ್ಥಕ ಪದವಾಗಿದೆ. ಘಟೆನೆಯ ಬಗ್ಗೆ ಯಾವುದೇ ಮುಜುಗರವಿಲ್ಲ, ಯಾವುದೇ ಪದಗಳಿಲ್ಲ, ಕೇವಲ ಮೌನ ಮಾತ್ರ. ‘ಮಹಿಳೆಯರು ನನ್ನಿಂದ ಏನನ್ನೂ ನಿರೀಕ್ಷಿಸಬಾರದು’ ಎಂಬುವುದು ​​ಪ್ರಧಾನಿಯ ಈ ಸಂದೇಶ ಸ್ಪಷ್ಟವಾಗಿದೆ” ಎಂದು ಅವರು ಹೇಳಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...