Homeಮುಖಪುಟಬಳ್ಳಾರಿ: ಭೀಕರವಾಗಿ ಬಿಜೆಪಿ ಕಾರ್ಯಕರ್ತನ ಕೊಲೆ

ಬಳ್ಳಾರಿ: ಭೀಕರವಾಗಿ ಬಿಜೆಪಿ ಕಾರ್ಯಕರ್ತನ ಕೊಲೆ

- Advertisement -
- Advertisement -

ಬಿಜೆಪಿ ಕಾರ್ಯಕರ್ತರೊಬ್ಬರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ಬಳ್ಳಾರಿಯಲ್ಲಿ ನಡೆದಿದೆ. ಮಂಜುನಾಥ್ (35) ಎಂಬ ಬಿಜೆಪಿ ಕಾರ್ಯಕರ್ತರು ಕೊಲೆಯಾಗಿದ್ದಾರೆ.

ಮಂಜುನಾಥ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಬಳಿಕ ಆರೋಪಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೊಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಆರೋಪಿಗಳು ಕೊಲೆಯಾದ ಯುವಕನ ಸ್ನೇಹಿತರು ಇರಬಹುದು. ಹಳೇ ದ್ವೇಷದಿಂದ ಕೊಲೆ ಮಾಡಿರಬಹುದು ಎಂದು ಪೊಲೀಸರು ತಿಳಿಸಿದ್ದು, ಈ ಸಂಬಂಧ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಕೊಲೆಯಾಗುತ್ತಿರುವುದು ರಾಜಕೀಯ ಚರ್ಚೆಗೂ ಅವಕಾಶ ನೀಡುತ್ತಿದೆ. ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯಾದಾಗ ದೊಡ್ಡ ಮಟ್ಟದಲ್ಲಿ ಬಿಜೆಪಿ ನಾಯಕರು ಹೋರಾಟ ಮಾಡಿದ್ದರು.

ಪ್ರವೀಣ್ ನೆಟ್ಟಾರು ಕೊಲೆಯಾದಾಗ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ಹಾಗೂ ದೇಶದಲ್ಲಿ ಅಧಿಕಾರದಲ್ಲಿದ್ದರೂ ಬಿಜೆಪಿ ಕಾರ್ಯಕರ್ತರೇ ಕೊಲೆಯಾಗುತ್ತಿದ್ದಾರೆ. ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕಾರಿಗೆ ಮತ್ತಿಗೆ ಹಾಕಿ, ಉರುಳಿಸುವ ಪ್ರಯತ್ನವನ್ನು ಬಿಜೆಪಿ ಕಾರ್ಯಕರ್ತರು ಮಾಡಿದ್ದರು.

ಯಾದಗಿರಿ: ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ; ಪ್ರಕರಣ ದಾಖಲು

ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಯಾದಗಿರಿ ಜಿಲ್ಲೆಯಲ್ಲಿ ಜಗಳವಾಗಿದ್ದು, ಎರಡು ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.

ಯಾದಗಿರಿ ತಾಲೂಕಿನ ಸಾವೂರು ಗ್ರಾಮದಲ್ಲಿ ಅಡಿಗಲ್ಲು ಸಮಾರಂಭದಲ್ಲಿ ಬ್ಯಾನರ್ ವಿಚಾರಕ್ಕೆ ಘಟನೆ ನಡೆದಿದೆ. ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ್ ಹಾಗೂ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ ಸಮ್ಮುಖದಲ್ಲಿ ನಡೆದಿದ್ದ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಜೆಡಿಎಸ್​ನ ಬಂದಪ್ಪಗೌಡ ಹಾಗೂ ಬಿಜೆಪಿಯ ಶಿವರಾಜ್ ಸೇರಿ ಇತರರ ಮೇಲೆ ಕೇಸ್ ಹಾಕಲಾಗಿದೆ ಎಂದು ತಿಳಿದುಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...