Homeಮುಖಪುಟಅಯೋಧ್ಯೆ: ಮಕ್ಕಳಿಗೆ ಅನ್ನ, ಉಪ್ಪು ತಿನ್ನಿಸಿದ ಶಾಲೆ; ವಿಡಿಯೊ ವೈರಲ್‌

ಅಯೋಧ್ಯೆ: ಮಕ್ಕಳಿಗೆ ಅನ್ನ, ಉಪ್ಪು ತಿನ್ನಿಸಿದ ಶಾಲೆ; ವಿಡಿಯೊ ವೈರಲ್‌

- Advertisement -
- Advertisement -

ಉತ್ತರಪ್ರದೇಶದ ಅಯೋಧ್ಯೆಯ ಕೌನ್ಸಿಲ್ ಶಾಲೆಯೊಂದರಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವಾಗಿ ಅನ್ನ ಹಾಗೂ ಉಪ್ಪನ್ನು ನೀಡಲಾಗಿದೆ. ಇದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಮಕ್ಕಳು ಅನ್ನ ಮತ್ತು ಉಪ್ಪನ್ನು ತಿನ್ನುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಬಿಕಾಪುರ ಬ್ಲಾಕ್‌ನಲ್ಲಿರುವ ಬೈಂತಿ ಚೌರೆ ಬಜಾರ್‌ನ ಪಾಂಡೆ ಪ್ರಾಥಮಿಕ ಶಾಲೆಯ ವಿಡಿಯೊ ಇದಾಗಿದೆ ವರದಿಯಾಗಿದೆ. ಮಕ್ಕಳಿಗೆ ಮಂಗಳವಾರ ಮಧ್ಯಾಹ್ನದ ಊಟದ ವೇಳೆ ಸಾದಾ ಅನ್ನ ಮತ್ತು ಉಪ್ಪು ನೀಡಲಾಯಿತು ಎಂದು ಗ್ರಾಮಸ್ಥರು ದೂರಿದ್ದಾರೆ. ಇದೇ ರೀತಿಯ ಕೃತ್ಯ ಹಲವಾರು ದಿನಗಳಿಂದ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಪ್ರಾಥಮಿಕ ಶಿಕ್ಷಣಾಧಿಕಾರಿ (ಬಿಎಸ್‌ಎ) ಸಂತೋಷ್‌ಕುಮಾರ್ ರೈ ಮಾತನಾಡಿ, “ವಿಷಯ ಗಮನಕ್ಕೆ ಬಂದ ತಕ್ಷಣ ಬ್ಲಾಕ್ ಶಿಕ್ಷಣಾಧಿಕಾರಿಯಿಂದ ವರದಿ ತರಿಸಿಕೊಳ್ಳಲಾಗಿದೆ, ತಪ್ಪಿತಸ್ಥರು ಹಾಗೂ ಕಾರಣರಾದ ಶಿಕ್ಷಕರ ವಿರುದ್ಧ ಇಲಾಖೆ ಕ್ರಮ ಜರುಗಿಸುತ್ತದೆ” ಎಂದಿರುವುದಾಗಿ ‘ದೈನಿಕ್ ಭಾಸ್ಕರ್‌’ ವರದಿ ಮಾಡಿದೆ.

“ವಿಡಿಯೋ ನೋಡಿದ ಅಯೋಧ್ಯೆಯ ಶಿಕ್ಷಣಾಧಿಕಾರಿ ಶಾಲೆಯ ಪ್ರಾಂಶುಪಾಲರನ್ನು, ಶಾಲೆಯ ಪ್ರಧಾನರನ್ನು ಅಮಾನತುಗೊಳಿಸಿದ್ದಾರೆ” ಎಂದು ಪತ್ರಕರ್ತ ಪಿಶೂರ್ ರೈ ಟ್ವೀಟ್ ಮಾಡಿದ್ದಾರೆ.

“ಉತ್ತರಪ್ರದೇಶ ಸರ್ಕಾರ ಪ್ರಾಥಮಿಕ ಶಾಲೆಯ ಪ್ರತಿ ವಿದ್ಯಾರ್ಥಿಯ ಮಧ್ಯಾಹ್ನದ ಊಟಕ್ಕೆ ದಿನವೊಂದಕ್ಕೆ 4.97 ರೂ.ಗಳನ್ನು ನೀಡುತ್ತದೆ. ಈ ಹಣದಲ್ಲಿ ಆರೋಗ್ಯಕರವಾದ ಊಟವನ್ನು ನೀಡಲು ಸಾಧ್ಯವಿಲ್ಲ ಎಂದು ಹಲವಾರು ಸಂದರ್ಭಗಳಲ್ಲಿ, ಪ್ರಾಂಶುಪಾಲರು ಮತ್ತು ಪ್ರಧಾನರು ದೂರಿದ್ದಾರೆ. ಅನುದಾನವನ್ನು ಹೆಚ್ಚಿಸುವ ಬಗ್ಗೆ ಸರಕಾರ ಚಿಂತನೆ ನಡೆಸಬೇಕು” ಎಂದು ಪಿಶೂಯ್ ಮತ್ತೊಂದು ಟ್ವೀಟ್ ಮಾಡಿದ್ದಾರೆ.

“ಗ್ರಾಮದ ಸಮೀಪವೇ ಶಾಲೆ ಇರುವುದರಿಂದ ಅನೇಕ ಮಕ್ಕಳು ಮಧ್ಯಾಹ್ನದ ಊಟಕ್ಕಾಗಿ ಮನೆಗೆ ಹೋಗುತ್ತಿದ್ದಾರೆ. ಊಟ ಮುಗಿಸಿಕೊಂಡು ಮತ್ತೆ ಶಾಲೆಗೆ ಹಿಂತಿರುಗುತ್ತಾರೆ. ಉಪ್ಪು, ಅನ್ನ ನೀಡುತ್ತಿರುವ ವಿಚಾರವನ್ನು ಮಕ್ಕಳು ಪೋಷಕರಿಗೆ ತಿಳಿಸಿದಾಗ ಶಾಲೆಯಲ್ಲಿ ಊಟ ಮಾಡದಂತೆ ಪೋಷಕರು ತಿಳಿಸಿದ್ದಾರೆ” ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಮಂಗಳವಾರವೂ ಇದೇ ರೀತಿಯ ಆಹಾರ ಕಂಡುಬಂದಾಗ ಗ್ರಾಮದ ಅನೇಕ ಪುರುಷರು ಮತ್ತು ಮಹಿಳೆಯರು ಶಾಲೆಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರಿಗೆ ದೂರು ನೀಡಿದರೂ ಶಿಕ್ಷಕರು ಪಾಲಕರ ಮಾತನ್ನು ನಿರ್ಲಕ್ಷಿಸಿದ್ದಾರೆ.

ಈ ಘಟನೆಯನ್ನು ಗ್ರಾಮಸ್ಥರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಬ್ಲಾಕ್ ಶಿಕ್ಷಣಾಧಿಕಾರಿ ಅಮಿತ್ ಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ ಎಂದು ‘ದೈನಿಕ್ ಭಾಸ್ಕರ್‌’ ವರದಿ ಮಾಡಿದೆ.

ಬಿಎಸ್‌ಎ ಸಂತೋಷ್‌ಕುಮಾರ್ ರೈ ಮಾತನಾಡಿ, ಈ ಸಂಬಂಧ ಸಂಜೆ ವೇಳೆಗೆ ಬ್ಲಾಕ್ ಶಿಕ್ಷಣಾಧಿಕಾರಿಯಿಂದ ವರದಿ ಕೇಳಲಾಗಿದ್ದು, ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಉಪ್ಪು ನೀಡಿದ ಘಟನೆ ಇದೇ ಮೊದಲಲ್ಲ

ಉತ್ತರ ಪ್ರದೇಶದ ಶಾಲೆಯಲ್ಲಿ ಮಕ್ಕಳಿಗೆ ಉಪ್ಪು ಬಡಿಸಿದ್ದು ಇದೇ ಮೊದಲೇನೂ ಅಲ್ಲ. 2019ರಲ್ಲಿ ಫ್ರೀಲ್ಯಾನ್ಸ್‌ ಪತ್ರಕರ್ತ ಪವನ್‌ ಜೈಸ್ವಾಲ್‌ ವಿಡಿಯೊವನ್ನು ಹಂಚಿಕೊಂಡಿದ್ದರು. ಘಟನೆಯನ್ನು ಬೆಳಕಿಗೆ ತಂದಿದ್ದಕ್ಕೆ ಅವರ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿತ್ತು.

ಮಿರ್ಜಾಪುರ ಜಿಲ್ಲೆಯ ಶಿಯುರ್‌ನಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪು ಮತ್ತು ರೊಟ್ಟಿ (ಚಪಾತಿ) ನೀಡುತ್ತಿರುವ ವೀಡಿಯೊವನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಜೈಸ್ವಾಲ್ ವಿರುದ್ಧ 2019ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆಯ ನಂತರ ಕ್ಲೀನ್ ಚಿಟ್ ನೀಡಲಾಯಿತು.

ಕ್ಯಾನ್ಸರ್‌ನಿಂದ ಬಳಸುತ್ತಿದ್ದ ಪತ್ರಕರ್ತ ಜೈಸ್ವಾಲ್‌ ಕಳೆದ ಮೇ ತಿಂಗಳಿನಲ್ಲಿ ನಿಧನರಾದರು. ಜೈಸ್ವಾಲ್ ಅವರು ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ನೀಡುವಂತೆ ಮನವಿ ಮಾಡಿದ್ದರು. ಕಾಯಿಲೆಯಿಂದ ಬಳಲುತ್ತಿದ್ದ ಪತ್ರಕರ್ತನಿಗೆ ಸಹಾಯ ಮಾಡಲು ಎಎಪಿ ಸಂಸದ ಸಂಜಯ್ ಸಿಂಗ್ ಸೇರಿದಂತೆ ಹಲವರು ಮುಂದೆ ಬಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...