Homeಮುಖಪುಟಮಧ್ಯಪ್ರದೇಶ: ಇತರ ವಿದ್ಯಾರ್ಥಿಗಳ ಮುಂದೆಯೆ ಬಾಲಕನಿಗೆ ಮನಸೋ ಇಚ್ಛೆ ಥಳಿಸಿದ ಶಿಕ್ಷಕ

ಮಧ್ಯಪ್ರದೇಶ: ಇತರ ವಿದ್ಯಾರ್ಥಿಗಳ ಮುಂದೆಯೆ ಬಾಲಕನಿಗೆ ಮನಸೋ ಇಚ್ಛೆ ಥಳಿಸಿದ ಶಿಕ್ಷಕ

- Advertisement -
- Advertisement -

ಇತರ ವಿದ್ಯಾರ್ಥಿಗಳು ಸುತ್ತಲೂ ನಿಂತು ವೀಕ್ಷಿಸುತ್ತಿರುವ ನಡುವೆ ಶಿಕ್ಷಕನೊಬ್ಬ ವಿದ್ಯಾರ್ಥಿಯನ್ನು ಹಿಡಿದು ಮನಸೋಇಚ್ಛೆ ಥಳಿಸಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೊ ವೈರಲ್ ಆಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಆರೋಪಿ ಶಿಕ್ಷಕನನ್ನು ಸಂದೀಪ್ ಭಾರ್ತಿ ಎಂದು ಗುರುತಿಸಲಾಗಿದ್ದು, ಅವನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿಯು 8 ನೇ ತರಗತಿಯಲ್ಲಿ ಕಲಿಯುತ್ತಿದ್ದು ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೇವಾದ ಖಜುಹಾ ಕಾಲಾದಲ್ಲಿನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಯ ಪೋಷಕರನ್ನು ಸಂಪರ್ಕಿಸಿದ ನಂತರ ಶಿಕ್ಷಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ರೇವಾ ಎಸ್ಪಿ ನವನೀತ್ ಭಾಸಿನ್ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪರೀಕ್ಷೆಯಲ್ಲಿ ತಪ್ಪು ಬರೆದಿದ್ದಕ್ಕೆ ದಲಿತ ಬಾಲಕನನ್ನು ಥಳಿಸಿ ಕೊಂದ ಸವರ್ಣೀಯ ಶಿಕ್ಷಕ; ಭುಗಿಲೆದ್ದ ಹಿಂಸಾಚಾರ

ಶಿಕ್ಷಕನೂ ವಿದ್ಯಾರ್ಥಿಯನ್ನು ನೆಲಕ್ಕೆ ಕೆಡವಿ ಕಪಾಳಮೋಕ್ಷ ಮಾಡುವುದು ವೀಡಿಯೊದಲ್ಲಿ ದಾಖಲಾಗಿದೆ. ಅಲ್ಲದೆ ಹತ್ತಿರದಲ್ಲಿ ಇತರ ವಿದ್ಯಾರ್ಥಿಗಳು ಅದನ್ನು ಗಮನಿಸುತ್ತಿದ್ದರೂ ಶಿಕ್ಷಕನು ತನ್ನ ಕೃತ್ಯವನ್ನು ಮುಂದುವರೆಸುತ್ತಾನೆ. ಈ ವೇಳೆ ವಿದ್ಯಾರ್ಥಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಕೂಡಾ ಪ್ರಯತ್ನಿಸುತ್ತಾರೆ.

ಒಂದು ಹಂತದಲ್ಲಿ ಶಿಕ್ಷಕನು ಥಳಿಸುವುದನ್ನು ನಿಲ್ಲಿಸಿದ ನಂತರ ವಿದ್ಯಾರ್ಥಿಯು ತನ್ನ ಕೆಸರು ಮೆತ್ತಿದ ಬಟ್ಟೆಗಳೊಂದಿಗೆ ಎದ್ದು ನಿಂತರ, ಶಿಕ್ಷಕನ ಮುಖಾಮುಖಿಯಾಗುತ್ತಾರೆ. ಇಲ್ಲಿ ಕೆಲವೆ ಕ್ಷಣದ ಮಾತಿನ ನಂತರ ಶಿಕ್ಷಕ ಮತ್ತೊಮ್ಮೆ ಬಾಲಕನತ್ತ ನುಗ್ಗಿ, ಅವರ ಕುತ್ತಿಗೆಯಿಂದ ಹಿಡಿದು ಆಸುಪಾಸಿನಲ್ಲಿ ಇರುವ ವಿದ್ಯಾರ್ಥಿಗಳ ಗುಂಪಿನೆಡೆಗೆ ತಳ್ಳುತ್ತಾನೆ.

ಇದರ ನಂತರ ಶಿಕ್ಷಕನು ಮತ್ತೆ ವಿದ್ಯಾರ್ಥಿಯ ಕಡೆಗೆ ಹೋಗುತ್ತಿರುವಾಗ, ಬೇರೊಬ್ಬ ಹುಡುಗನು ಶಿಕ್ಷಕನ ಗಮನವನ್ನು ಕ್ಯಾಮೆರಾದ ಕಡೆಗೆ ಸೆಳೆಯುತ್ತಾರೆ. ಹೀಗಾಗಿ ವಿಡಿಯೊ ಕೂಡಾ ಕೊನೆಗೊಳ್ಳುತ್ತದೆ.

“ಶಿಕ್ಷಕ ವಿದ್ಯಾರ್ಥಿಗೆ ಏಕೆ ಹೊಡೆದಿದ್ದಾರೆ ಎಂಬುದನ್ನು ನಿರ್ಧರಿಸಲು ಹೆಚ್ಚಿನ ತನಿಖೆಯ ಅಗತ್ಯವಿದೆ. ತನಿಖೆಯ ಫಲಿತಾಂಶಗಳ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಭಾಸಿನ್ ಭಾಸಿನ್ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಬಾಲಕನನ್ನು ಹೊಡೆದು ಕೊಂದ ಸವರ್ಣೀಯ ಶಿಕ್ಷಕ

ಉತ್ತರ ಪ್ರದೇಶದ 10 ನೇ ತರಗತಿಯ ವಿದ್ಯಾರ್ಥಿಯೊಬ್ಬರು ಒಂದು ಪದವನ್ನು ತಪ್ಪಾಗಿ ಬರೆದಿದ್ದಕ್ಕಾಗಿ ತನ್ನ ಶಿಕ್ಷಕರಿಂದ ನಿರ್ದಯವಾಗಿ ಥಳಿಸಲ್ಪಟ್ಟು, ಕೊಲಗೀಡಾಗಿದ್ದರು. ಈ ತಿಂಗಳ ಆರಂಭದಲ್ಲಿ ಮಧ್ಯಪ್ರದೇಶದಲ್ಲಿ ಟ್ಯೂಷನ್ ಶಿಕ್ಷಕನೊಬ್ಬ ಹೋಂ ವರ್ಕ್‌ ಮಾಡದ ಎಂಟು ವರ್ಷದ ವಿದ್ಯಾರ್ಥಿಗೆ ಕಬ್ಬಿಣದ ರಾಡ್‌ನಿಂದ ಹೊಡೆದಿದ್ದಾನೆ ಎಂದು ಆರೋಪಿಸಲಾಗಿತ್ತು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...