Homeಮುಖಪುಟಯುಪಿ: ಗುಂಡೇಟಿಗೊಳಗಾಗಿ ರಕ್ತದ ಮಡುವಿನಲ್ಲಿ ಬಿದ್ದಿರುವ ದಲಿತ ಯುವಕನ ವಿಡಿಯೋ ವೈರಲ್‌

ಯುಪಿ: ಗುಂಡೇಟಿಗೊಳಗಾಗಿ ರಕ್ತದ ಮಡುವಿನಲ್ಲಿ ಬಿದ್ದಿರುವ ದಲಿತ ಯುವಕನ ವಿಡಿಯೋ ವೈರಲ್‌

- Advertisement -
- Advertisement -

ದಲಿತ ಯುವಕನನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರದ ಬಸೌಲಿ ಗ್ರಾಮದಲ್ಲಿ ನಡೆದಿದೆ ಎಂದು ಎಪಿಎನ್‌‌ಲೈವ್‌ ಸುದ್ದಿ ಮಾಧ್ಯಮ ವರದಿ ಮಾಡಿದೆ. ಗುಂಡೇಟು ತಿಂದ ಯುವಕನನ್ನು ಆಸ್ಪತ್ರೆಗೆ ಸಾಗಿಸುವಾಗ ರಸ್ತೆ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಹತ್ಯೆಗೀಡಾದ ಯುವಕನನ್ನು ಅವನೀಶ್ ಎಂದು ಗುರುತಿಸಲಾಗಿದೆ ಎಂದು ಎಪಿಎನ್‌‌ಲೈವ್‌ ಸುದ್ದಿ ಮಾಧ್ಯಮ ವರದಿ ಮಾಡಿದೆ. ಗುಂಡೇಟಿಗೆ ಒಳಗಾಗಿ ರಕ್ತದ ಮಡುವಿನಲ್ಲಿ ಬಿದ್ದಿರುವ ಯುವಕನ ಶರೀರದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಕ್ತದ ಮಡುವಿನಲ್ಲಿ ಬಿದ್ದಿರುವ ಯುವಕನ ಶರೀರದ ಪಕ್ಕ ಸಂತ್ರಸ್ತ ಕುಟುಂಬ ಗೋಳಾಡುತ್ತಿರುವುದು ವೈರಲ್ ವಿಡಿಯೊದಲ್ಲಿ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಧಿಕೃತ ಹೇಳಿಕೆ ಇನ್ನೂ ನೀಡಿಲ್ಲ.

ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಹಲವಾರು ಜನರು ದುಃಖ ಮತ್ತು ಆಕ್ರೋಶವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತಪಡಿಸಿದ್ದು, ರಾಜ್ಯವು ರಾಮರಾಜ್ಯವೆ ಅಥವಾ ಬುಲ್ಡೋಜರ್ ರಾಜ್ಯವೇ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ತಮ್ಮ ಜಮೀನಿನಲ್ಲಿ ಆಟವಾಡಿದ ದಲಿತ ಬಾಲಕನನ್ನು ಕರೆಂಟ್ ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

ಉತ್ತರ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರ ಪ್ರಕರಣಗಳು ಹೆಚ್ಚುತ್ತಿದೆ. ಇತ್ತೀಚೆಗೆ ರಾಜ್ಯದ ಮೈನ್‌ಪುರಿ ಜಿಲ್ಲೆಯ ಬಜೇರಾ ಗ್ರಾಮದಲ್ಲಿ ಸಾಲವನ್ನು ಮರುಪಾವತಿಸಿಲ್ಲ ಎಂಬ ಕಾರಣಕ್ಕೆ ದಲಿತ ವ್ಯಕ್ತಿಯೊಬ್ಬರ ಹತ್ಯೆ ನಡೆದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ರಾಜ್ಯ ಮತ್ತು ಕೇಂದ್ರ, ಎರಡೂ ಕಡೆ ಮನುವಾದಿಗಳು ಅಧಿಕಾರದಲ್ಲಿ ಇರುವುದರಿಂದ, ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ದಲಿತಪರ ಸಂಘಟನೆಗಳು ಇನ್ನಾದರೂ ಎಚ್ಚೆತ್ತುಕೊಂಡು, ತಮ್ಮ ಸಂಘಟನೆಗಳ ಶಾಕೆಗಳನ್ನು ಪ್ರತಿಯೊಂದು ಗ್ರಾಮದಲ್ಲೂ ಬಲವಾಗಿ ಬೇರೂರಿಸಬೇಕಿದೆ.

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....