Homeಕರ್ನಾಟಕಚೆಕ್‌ಗಳಿಗೆ ಜೈಲಿನಿಂದಲೇ ಸಹಿಹಾಕಲು ಅತ್ಯಾಚಾರ ಆರೋಪಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ

ಚೆಕ್‌ಗಳಿಗೆ ಜೈಲಿನಿಂದಲೇ ಸಹಿಹಾಕಲು ಅತ್ಯಾಚಾರ ಆರೋಪಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ

- Advertisement -
- Advertisement -

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜೈಲಿನಿಂದಲೇ ಚೆಕ್‌ಗಳಿಗೆ ಸಹಿ ಹಾಕಲು ಕರ್ನಾಟಕ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.

ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣದಲ್ಲಿ ಸೆಪ್ಟೆಂಬರ್ 1 ರಿಂದ ಮರುಘಾ ಮಠಾಧೀಶರು ಬಂಧನದಲ್ಲಿದ್ದಾರೆ. ಮಠ ಮತ್ತು ಶಿಕ್ಷಣ ಸಂಸ್ಥೆಗಳ ನೌಕರರಿಗೆ ಮಾಸಿಕ ವೇತನ ಪಾವತಿಗಾಗಿ ಚೆಕ್‌ಗಳಿಗೆ ಸಹಿ ಹಾಕಲು ಅನುಮತಿ ಕೋರಲಾಗಿತ್ತು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಅರ್ಜಿದಾರರ ಮನವಿಯನ್ನು ಪುರಸ್ಕರಿಸಿದ್ದಾರೆ. ಅಕ್ಟೋಬರ್ 3, 6 ಮತ್ತು 10 ರಂದು ಚೆಕ್‌ಗಳಿಗೆ ಸಹಿ ಮಾಡಲು ಅವಕಾಶ ನೀಡುವಂತೆ ಆದೇಶಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚೆಕ್‌ಗಳನ್ನು ತೆಗೆದುಕೊಂಡು ಹೋಗುವವರು ಜಿಲ್ಲಾಧಿಕಾರಿಗಳ ಅನುಮತಿಯನ್ನು ಪಡೆಯಬೇಕು. ಪ್ರಕರಣದ ತನಿಖಾಧಿಕಾರಿ ಮತ್ತು ಜೈಲು ಅಧಿಕಾರಿಗಳ ಸಮ್ಮುಖದಲ್ಲಿ ಚೆಕ್‌ಗಳಿಗೆ ಸಹಿ ಮಾಡಬೇಕು. ಹೀಗೆ ಸಹಿ ಮಾಡಿದ ಚೆಕ್‌ಗಳ ನಕಲು ಪ್ರತಿಗಳನ್ನು ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೈಕೋರ್ಟ್ ಹೇಳಿದೆ. ಅಕ್ಟೋಬರ್ ತಿಂಗಳವರೆಗೆ ಮಾತ್ರ ಚೆಕ್‌ಗಳಿಗೆ ಸಹಿ ಹಾಕಲು ಅವಕಾಶ ನೀಡಲಾಗಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ವಿಚಾರಣಾ ನ್ಯಾಯಾಲಯಕ್ಕೆ ಈ ಕುರಿತು ಅರ್ಜಿ ಸಲ್ಲಿಸಬೇಕು. ವಿಚಾರಣಾ ನ್ಯಾಯಾಲಯವು ಈ ಮನವಿಯನ್ನು ಪರಿಗಣಿಸಿ ಆದೇಶಗಳನ್ನು ಹೊರಡಿಸುತ್ತದೆ. ‘ಮಠದ ಟ್ರಸ್ಟ್‌ನ ಏಕೈಕ ಟ್ರಸ್ಟಿಯಾಗಿದ್ದೇನೆ. ಟ್ರಸ್ಟ್‌ನ 150ಕ್ಕೂ ಹೆಚ್ಚು ಸಂಸ್ಥೆಗಳ 3,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಂಬಳವನ್ನು ಪಾವತಿಸಬೇಕಾಗಿದೆ’ ಎಂದು ಮನವಿಯಲ್ಲಿ ಮುರುಘಾ ಶರಣರು ತಿಳಿಸಿದ್ದಾರೆ.

ಸುಮಾರು 200 ಚೆಕ್‌ಗಳಿಗೆ ಕಾರಾಗೃಹದಿಂದ ಸಹಿ ಹಾಕಲು ಅನುಮತಿ ಕೋರಿ ಸಲ್ಲಿಸಲಾಗಿರುವ ಮನವಿಯಲ್ಲಿ ಸ್ಪಷ್ಟತೆಯ ಕೊರತೆಯಿದೆ ಎಂದು ಹೈಕೋರ್ಟ್ ಹೇಳಿತ್ತು. ಏಕೆಂದರೆ ಎಲ್ಲಾ ಚೆಕ್‌ ವಿವರದಲ್ಲಿ ಸೆಲ್ಫ್ ಆರ್‌ಟಿಜಿಎಸ್ (ರಿಯಲ್‌ ಟೈಮ್‌ ಗ್ರಾಸ್‌ ಸೆಟಲ್‌ಮೆಂಟ್‌) ಎಂದು ನಮೂದಿಸಲಾಗಿದೆ ಎನ್ನಲಾಗಿತ್ತು.

ಪಬ್ಲಿಕ್ ಪ್ರಾಸಿಕ್ಯೂಟರ್‌‌ ಕಿರಣ್ ಜವಳಿ ಅವರು ವಾದಿಸಿ, “ಆರೋಪಿಗಳು ಸಲ್ಲಿಸಿರುವ ಸಲ್ಲಿಕೆಗಳು ಮೇಲ್ನೋಟಕ್ಕೆ ಸತ್ಯವೆಂದು ತೋರುತ್ತಿಲ್ಲ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದು, ಅರ್ಜಿಯನ್ನು ಅರ್ಹತೆಯ ಆಧಾರದ ಮೇಲೆ ಚಿತ್ರದುರ್ಗದ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಲು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಜೈಲಿನಲ್ಲಿರುವ ಆರೋಪಿಗಳು ಸ್ವಯಂ ವಿಳಾಸವಿರುವ ಚೆಕ್‌ಗಳಿಗೆ ಸಹಿ ಹಾಕುವಂತೆ ಮನವಿ ಮಾಡುವುದು ಸರಿಯಲ್ಲ ಎಂದು ಹೈಕೋರ್ಟ್ ಹೇಳಿತ್ತು. ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರ ಮುಂದೆ ಸ್ವಾಮೀಜಿ ಇದೇ ರೀತಿಯ ಮನವಿಯನ್ನು ಸಲ್ಲಿಸಿದ್ದರು. ನ್ಯಾಯಾಧೀಶರು ಮನವಿಯನ್ನು ತಿರಸ್ಕರಿಸಿದರು. ಹಾಗಾಗಿ, ಅದೇ ಅರ್ಜಿಯೊಂದಿಗೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಮರುಘಾ ಶರಣರು ಪೀಠ ತೊರೆಯುವಂತೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಯತ್ನಾಳ್ ಪತ್ರ

ಲೈಂಗಿಕ ಕಿರುಕುಳ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಪೀಠತ್ಯಾಗ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿಗಳಿಗೆ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಇತ್ತೀಚೆಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿರಿ: ಪೋಕ್ಸೋ ಪ್ರಕರಣ: ಮುರುಘಾ ಶರಣರಿಗೆ ಜಾಮೀನು ನಿರಾಕರಣೆ

ಮಠದ ಸಾವಿರಾರು ನೌಕರರು ಸಂಬಳ, ಸಾರಿಗೆಯ ಖರ್ಚಿಗಾಗಿ ಮತ್ತು ಜೀವನ ನಿರ್ವಹಣೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್‌ ಕಾಲೇಜು, ಬ್ಯಾಂಕ್‌ಗಳು ಸೇರಿದಂತೆ ಎಸ್‌ಜೆಎಂ ವಿದ್ಯಾಸಂಸ್ಥೆಯ ಅಧೀನದಲ್ಲಿ ರಾಜ್ಯದ ವಿವಿಧೆಡೆ ಇರುವ ನೂರಾರು ಘಟಕಗಳ ನಿತ್ಯದ ಆಡಳಿತಕ್ಕೆ ಪಾರ್ಶ್ವವಾಯು ಹೊಡೆದಂತಾಗುತ್ತದೆ ಎಂದು ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಶಿವಮೂರ್ತಿ ಮುರುಘಾ ಶರಣರು ಪೀಠದಲ್ಲಿ ಮುಂದುವರಿಯುವುದು ಶ್ರೀಮಠದ ಘನ ಪರಂಪರೆಯಗೆ ಕಳಂಕ ತರುವಂತಹ ಸಂಗತಿಯಾಗಿರುತ್ತದೆ. ಆದ್ದರಿಂದ ಶಿವಮೂರ್ತಿ ಶರಣರು ಈ ಕೂಡಲೇ ಸ್ವಇಚ್ಛೆಯಿಂದ ಪೀಠತ್ಯಾಗ ಮಾಡಬೇಕು. ಇಲ್ಲವಾದಲ್ಲಿ ಅವರನ್ನು ಪದಚ್ಯುತಗೊಳಿಸುವ ಕಾನೂನುಬದ್ಧ ಪ್ರಕ್ರಿಯೆಗೆ ನಾಡಿನ ಭಕ್ತ ಸಮೂಹ ಮುಂದಾಗಲು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...