Homeಕರ್ನಾಟಕಭಾರತ್‌ ಜೋಡೋದಲ್ಲಿ ಪಾಲ್ಗೊಳ್ಳಲು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಸೋನಿಯಾ ಗಾಂಧಿ

ಭಾರತ್‌ ಜೋಡೋದಲ್ಲಿ ಪಾಲ್ಗೊಳ್ಳಲು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಸೋನಿಯಾ ಗಾಂಧಿ

- Advertisement -
- Advertisement -

ಕಾಂಗ್ರೆಸ್ ಕೈಗೊಂಡಿರುವ ಮಹತ್ವಕಾಂಕ್ಷೆಯ ಭಾರತ್‌ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಸೋನಿಯಾ ಗಾಂಧಿ ಅವರು ಗುರುವಾರ (ಅಕ್ಟೋಬರ್ 6) ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳು ಭಾನುವಾರ ತಿಳಿಸಿವೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಎನ್‌.ಡಿ.ಟಿ.ವಿ. ವರದಿ ಮಾಡಿದೆ.

ಪಾದಯಾತ್ರೆ ಆರಂಭವಾದ ಸಂದರ್ಭದಲ್ಲಿ ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಿದ್ದ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾದ ಸೋನಿಯಾ ಅವರು ಇದೇ ಮೊದಲ ಬಾರಿಗೆ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಡ್ಯ ಜಿಲ್ಲೆಯಿಂದ ಪಾದಯಾತ್ರೆಗೆ ಸೇರಿಕೊಳ್ಳಲಿದ್ದಾರೆ. ಅವರು ನಾಳೆ ಕರ್ನಾಟಕಕ್ಕೆ ಆಗಮಿಸಲಿದ್ದು, ಎರಡು ದಿನಗಳ ನಂತರ ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಹಿಂದೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅರು ಈ ಕುರಿತು ಸುಳಿವು ನೋಡಿದ್ದರು. ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಜ್ಯದಲ್ಲಿ ಪ್ರತ್ಯೇಕವಾಗಿ ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗವಹಿಸಲಿದ್ದು, ಶೀಘ್ರದಲ್ಲೇ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದರು.

ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ‘ಭಾರತ್ ಜೋಡೋ ಯಾತ್ರೆ’ ತಮಿಳುನಾಡು ಮತ್ತು ಕೇರಳದ ನಂತರ ಕರ್ನಾಟಕವನ್ನು ಪ್ರವೇಶಿಸಿದ್ದು, 21 ದಿನಗಳ ಕಾಲ ಇಲ್ಲಿ ಸಾಗಲಿದೆ. ಐದು ತಿಂಗಳಲ್ಲಿ 12 ರಾಜ್ಯಗಳಲ್ಲಿ ಈ ಯಾತ್ರೆ ನಡೆಯಲಿದೆ.

ಅಭಿವ್ಯಕ್ತಿಗಾಗಿ ಇತರ ಎಲ್ಲಾ ವೇದಿಕೆಗಳು ಮುಚ್ಚಲ್ಪಟ್ಟಿರುವುದರಿಂದ ಜನಸಾಮಾನ್ಯರನ್ನು ತಲುಪಲು ಪಕ್ಷಕ್ಕೆ ಉಳಿದಿರುವ ಏಕೈಕ ಆಯ್ಕೆ ‘ಭಾರತ್ ಜೋಡೋ ಯಾತ್ರೆ’ ಎಂದು ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

“ಸರ್ಕಾರದ ಸಂಪೂರ್ಣ ನಿಯಂತ್ರಣವಿದೆ. ಸಂಸತ್ತಿನಲ್ಲಿ ನಮ್ಮ ಮೈಕ್‌ಗಳನ್ನು ಮ್ಯೂಟ್ ಮಾಡಲಾಗಿದೆ, ಅಸೆಂಬ್ಲಿಗಳು ಕಾರ್ಯನಿರ್ವಹಿಸಲು ಅನುಮತಿಸುವುದಿಲ್ಲ. ಪ್ರತಿಪಕ್ಷಗಳಿಗೆ ಕಿರುಕುಳ ನೀಡಲಾಗುತ್ತಿದೆ. ಈ ಪರಿಸ್ಥಿತಿಯಲ್ಲಿ ನಮಗೆ ಉಳಿದಿರುವ ಏಕೈಕ ಆಯ್ಕೆ ಭಾರತ್ ಜೋಡೋ ಯಾತ್ರೆ” ಎಂದು ಸಾರ್ವಜನಿಕ ಸಭೆಯಲ್ಲಿ ಅವರು ತಿಳಿಸಿದ್ದಾರೆ.

ಈ ಯಾತ್ರೆಯನ್ನು ದೇಶದ ಯಾವುದೇ ಶಕ್ತಿ ತಡೆಯಲು ಸಾಧ್ಯವಿಲ್ಲ. ಏಕೆಂದರೆ ಇದು ‘ಭಾರತದ ಮೆರವಣಿಗೆ’ ಎಂದು ಬಣ್ಣಿಸಿದ್ದಾರೆ. “ಇದು ಭಾರತದ ಮೆರವಣಿಗೆ ಮತ್ತು ಭಾರತದ ಧ್ವನಿಯನ್ನು ಕೇಳುವ ಮೆರವಣಿಗೆ, ಇದನ್ನು ಯಾರೂ ಹತ್ತಿಕ್ಕಲು ಸಾಧ್ಯವಿಲ್ಲ” ಎಂದಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕದಲ್ಲಿ ನಡೆಯಲಿರುವ ಪಾದಯಾತ್ರೆಯು ಪಕ್ಷದ ಕಾರ್ಯಕರ್ತರಿಗೆ ಚೈತನ್ಯ ತುಂಬಲಿದೆ ಎಂದು ಕಾಂಗ್ರೆಸ್ ನಾಯಕರು ಭಾವಿಸಿದ್ದಾರೆ.

ಇದನ್ನೂ ಓದಿರಿ: ವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

ಕರ್ನಾಟಕದ ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪಾದಯಾತ್ರೆ ನಡೆಯಲಿದೆ. ರಾಯಚೂರು ಬಳಿಕ ಮೆರವಣಿಗೆ ತೆಲಂಗಾಣ ಪ್ರವೇಶಿಸಲಿದೆ.

ರಾಯಚೂರು ಮೂಲಕ ರಾಜ್ಯದಿಂದ ನಿರ್ಗಮಿಸುವ ಮೊದಲು ಅಕ್ಟೋಬರ್ 19 ರಂದು ಬಳ್ಳಾರಿಯಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಯನ್ನು ಯೋಜಿಸಲಾಗಿದೆ.

ಈ ಹಿಂದೆ ಸೋನಿಯಾ ಗಾಂಧಿ ಅವರು ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದರಿಂದ ಬಳ್ಳಾರಿ, ಕಾಂಗ್ರೆಸ್‌ಗೆ ಮಹತ್ವದ್ದಾಗಿದೆ. 2013ರಲ್ಲಿ ಬಿಜೆಪಿ ಸರ್ಕಾರ ಮತ್ತು ಗಣಿಗಾರಿಕೆ ವಿರುದ್ಧ ಕಾಂಗ್ರೆಸ್ ಪಕ್ಷವು ಬಳ್ಳಾರಿಗೆ ಪಾದಯಾತ್ರೆಯನ್ನು ನಡೆಸಿತ್ತು. ಅದು ಚುನಾವಣೆಯಲ್ಲೂ ಪ್ರಭಾವ ಬೀರಿತ್ತು. ನಂತರದಲ್ಲಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...