ಯಂಗ್ ಇಂಡಿಯನ್ ಲಿಮಿಟೆಡ್ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದ್ದು, ಇಬ್ಬರೂ ಅಕ್ಟೋಬರ್ 7 ರಂದು ತನಿಖಾ ಸಂಸ್ಥೆಯ ಮುಂದೆ ಹಾಜರಾಗುವಂತೆ ಸೂಚಿಸಿದೆ.
ಮೈಸೂರು ಜಿಲ್ಲೆಯ ಬದನವಾಳುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, “ರಾಜ್ಯದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ಇರುವುದರಿಂದ, ವಿಚಾರಣೆಗೆ ಹಾಜರಾಗಲು ಮತ್ತೊಂದು ದಿನಾಂಕವನ್ನು ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಈ ಪ್ರಕರಣವು ನ್ಯಾಷನಲ್ ಹೆರಾಲ್ಡ್‌ನ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವಾಗ ಯಂಗ್ ಇಂಡಿಯಾ ಲಿಮಿಟೆಡ್ ಎಸಗಿರುವ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದೆ.
ಇದನ್ನೂ ಓದಿ: ಬಿಜೆಪಿಯ ಕೊನೆಯ ದಿನಗಳು ಆರಂಭ, ಬೊಮ್ಮಾಯಿ ಧಮ್ ಇಳಿಯುತ್ತದೆ: ಡಿ.ಕೆ. ಶಿವಕುಮಾರ್
“ನಾನು ಕಾನೂನು ಗೌರವಿಸಿ, ಇಡಿ ಮುಂದೆ ಹಾಜರಾಗಲು ನಿರ್ಧರಿಸಿದ್ದೇನೆ …ಆದರೆ ನಮಗೆ ಇನ್ನೊಂದು ದಿನಾಂಕವನ್ನು ಒದಗಿಸುವಂತೆ ಅವರಿಗೆ ಪತ್ರ ಬರೆಯುತ್ತೇನೆ. ಅವರಿಗೆ ಖಂಡಿತ ಸಹಕಾರ ನೀಡುತ್ತೇನೆ” ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆಯು ಮಂಡ್ಯ ಜಿಲ್ಲೆಯ ನಾಗಮಂಗಲ ಸಮೀಪದ ಒಕ್ಕಲಿಗ ಸಮುದಾಯದ ಶಕ್ತಿ ಕೇಂದ್ರವಾದ ಆದಿಚುಂಚನಗಿರಿ ಮಠದಲ್ಲಿ ವಾಸ್ತವ್ಯ ಹೂಡಲಿರುವ ದಿನದಂದೆ ಇಡಿ ಅವರಿಗೆ ಸಮನ್ಸ್ ಜಾರಿ ಮಾಡಿದೆ.
“ಇದು ನಮ್ಮ ಮಠವಾಗಿದ್ದು, ನಾನು ಆ ದಿನ ಹಾಜರಾಗದಿದ್ದರೆ ಅದು ಸರಿಯಲ್ಲ. ಯಾತ್ರೆಯ ಸಂಪೂರ್ಣ ಜವಾಬ್ದಾರಿಯನ್ನು ನಾನು ಮತ್ತು ನನ್ನ ಸಹೋದರ ವಹಿಸಿಕೊಂಡಿದ್ದೇವೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಸ್ಥಿತಿ ಗೋವಿಂದಾ, ಗೋವಿಂದ! – ಡಿ.ಕೆ. ಶಿವಕುಮಾರ್
ಕಳೆದ ತಿಂಗಳಿನಿಂದ ಇದು ಎರಡನೇ ಬಾರಿಗೆ ಇಡಿ ಶಿವಕುಮಾರ್ ಅವರಿಗೆ ಸಮನ್ಸ್ ನೀಡಿದೆ. ಸೆಪ್ಟೆಂಬರ್‌ನಲ್ಲಿ ಅವರು ತಮ್ಮ ವಿರುದ್ಧ ದಾಖಲಾದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಇಡಿ ಮುಂದೆ ಹಾಜರಾಗಿದ್ದರು. ಅಲ್ಲದೆ, ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ರಾಮನಗರ ಜಿಲ್ಲೆಯಲ್ಲಿರುವ ಅವರ ಆಸ್ತಿಗಳಿಗೆ ಪರಿಶೀಲನೆ ಉದ್ದೇಶಗಳಿಗಾಗಿ ಕಳೆದ ವಾರ ಭೇಟಿ ನೀಡಿದ್ದರು.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನ್ನ ವಿರುದ್ಧ ಇಡಿ ಆರೋಪಪಟ್ಟಿ ಸಲ್ಲಿಸಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ ಎಂದು ಶಿವಕುಮಾರ್ ಹೇಳಿದ್ದಾರೆ.
“ಆದರೂ, ಭ್ರಷ್ಟಾಚಾರ ನಿಗ್ರಹ ದಳದ ಮಟ್ಟದಲ್ಲಿ ಇತ ನಾಯಕರ ಅಂತಹ ಪ್ರಕರಣಗಳನ್ನು ತನಿಖೆ ಮಾಡಲಾಗುತ್ತಿದೆ. ಅಡ್ವೊಕೇಟ್ ಜನರಲ್ ಅವರು ಸಿಬಿಐ ತನಿಖೆಗೆ ಯೋಗ್ಯವಾದ ಪ್ರಕರಣವಲ್ಲ ಎಂದು ಅಭಿಪ್ರಾಯಪಟ್ಟಿದ್ದರೂ, ಸರ್ಕಾರ ಅದನ್ನು ಹಸ್ತಾಂತರಿಸಿದೆ. ನನಗೆ ರಾಜಕೀಯವಾಗಿ ಕಿರುಕುಳ ನೀಡಲು ಈ ರೀತಿ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಡಿ.ಕೆ.ಶಿವಕುಮಾರ್, ನನ್ನ ನಡುವೆ ಬಿರುಕಿಲ್ಲ, ಅದು ಮಾಧ್ಯಮ ಸೃಷ್ಟಿ: ಅಮೃತ ಮಹೋತ್ಸವದಲ್ಲಿ ಸಿದ್ದರಾಮಯ್ಯ ಮನದ ಮಾತು
2017ರಲ್ಲಿ ರಾಜ್ಯಸಭಾ ಚುನಾವಣೆಗೆ ಮುನ್ನ ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಆಶ್ರಯ ನೀಡುತ್ತಿದ್ದ ವೇಳೆ ಡಿಕೆ ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಇದರ ನಂತರ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಇಡಿ ದಾಖಲಿಸಿತ್ತು.


