Homeಮುಖಪುಟ‘ಅಂದ ಹಾಗೆ ನಡ್ಡಾ ಯಾವಾಗ ನಾಮಪತ್ರ ಸಲ್ಲಿಸಿದರು’: ಬಿಜೆಪಿಯ ಚುನಾವಣಾ ಪ್ರಕ್ರಿಯೆಯ ಬಗ್ಗೆ ಚಿದಂಬರಂ ಪ್ರಶ್ನೆ

‘ಅಂದ ಹಾಗೆ ನಡ್ಡಾ ಯಾವಾಗ ನಾಮಪತ್ರ ಸಲ್ಲಿಸಿದರು’: ಬಿಜೆಪಿಯ ಚುನಾವಣಾ ಪ್ರಕ್ರಿಯೆಯ ಬಗ್ಗೆ ಚಿದಂಬರಂ ಪ್ರಶ್ನೆ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಬಗ್ಗೆ ಬಿಜೆಪಿಯ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಒಕ್ಕೂಟ ಸರ್ಕಾರದ ಮಾಜಿ ಸಚಿವ ಪಿ. ಚಿದಂಬರಂ ಅವರು, ‘ಜೆ.ಪಿ.ನಡ್ಡಾ ಅವರು ಯಾವಾಗ ತಮ್ಮ ನಾಮಪತ್ರ ಸಲ್ಲಿಸಿದರು” ಎಂದು ಬಿಜೆಪಿ ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಕ್ರಿಯೆಯನ್ನು ವ್ಯಂಗ್ಯವಾಡಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರ ಅವಧಿ 2023 ರಲ್ಲಿ ಕೊನೆಗೊಳ್ಳಬೇಕಿದೆ, ಆದರೆ ಅವರ ಅಧಿಕಾರಾವಧಿಯನ್ನು 2024ರ ವರೆಗೆ ಮುಂದುವರೆಸಲಾಗಿದೆ.

ಚಿದಂಬರಂ ಅವರು ಮಂಗಳವಾರ ಟ್ವೀಟ್ ಮಾಡಿದ್ದು,“ಅಂದಹಾಗೆ ಶ್ರೀ ನಡ್ಡಾ ಅವರು, ಯಾವ ‘ಚುನಾವಣಾ ಪ್ರಾಧಿಕಾರದ ಮುಂದೆ, ಯಾವಾಗ ತಮ್ಮ ‘ನಾಮಪತ್ರಗಳನ್ನು’ ಸಲ್ಲಿಸಿದರು ಎಂಬುವುದನ್ನು ಕಂಡುಹಿಡಿಯಲು ನಾನು ಪ್ರಯತ್ನಿಸುತ್ತಿದ್ದೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯು ಅಪಾರ ಸಾರ್ವಜನಿಕ ಮತ್ತು ಮಾಧ್ಯಮದ ಆಸಕ್ತಿಯನ್ನು ಹುಟ್ಟುಹಾಕಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಮುಹೂರ್ತವಾಗಿದೆ. 2020 ರ ಜನವರಿಯಲ್ಲಿ ಬಿಜೆಪಿ ಅಧ್ಯಕ್ಷರಾಗಿ ಶ್ರೀ ಜೆ ಪಿ ನಡ್ಡಾ ಅವರ ‘ಜನಸಾಮಾನ್ಯರ ಮತದಿಂದ ಅವಿರೋಧ ಆಯ್ಕೆ’ ನಂತರ ಇದಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ದಲಿತ ನಾಯಕ ನೇಮಕ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಅಕ್ಟೋಬರ್ 17 ರಂದು ಮತ್ತು ಮತ ಎಣಿಕೆ ಅಕ್ಟೋಬರ್ 19 ರಂದು ನಡೆಯಲಿದೆ.

ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಶಶಿ ತರೂರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಇಬ್ಬರಿಗೂ ಗೌರವ ಸಲ್ಲಿಸುವಂತೆ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಪ್ರಾಧಿಕಾರ (ಸಿಇಎ) ಎಲ್ಲಾ ರಾಜ್ಯ ಅಧ್ಯಕ್ಷರಿಗೆ ಮಾರ್ಗಸೂಚಿಗಳನ್ನು ನೀಡಿದೆ.

ಪ್ರದೇಶ ಚುನಾವಣಾ ಅಧಿಕಾರಿಗಳು (PRO) ಆಯಾ ರಾಜ್ಯ ಕಾಂಗ್ರೆಸ್ ಸಮಿತಿಗಳ ಮತಗಟ್ಟೆ ಅಧಿಕಾರಿಗಳಾಗಿರುತ್ತಾರೆ. ಮತದಾನ ಕೇಂದ್ರಗಳಲ್ಲಿ ಕ್ರಮವನ್ನು ಇಟ್ಟುಕೊಳ್ಳುವ ಮತ್ತು ಚುನಾವಣೆಯು ನ್ಯಾಯಯುತವಾಗಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ಮಾರ್ಗಸೂಚಿಗಳು ಹೇಳುತ್ತವೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ; ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ

ಈ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರನ್ನು ಪಕ್ಷದ ಮುಖ್ಯಸ್ಥರನ್ನಾಗಿ ವಿಸ್ತರಿಸಲು ನಿರ್ಧರಿಸಲಾಗಿದೆ. 2024ರಲ್ಲಿ ಲೋಕಸಭೆ ಚುನಾವಣೆ ಮುಗಿಯುವವರೆಗೆ ವಿಸ್ತರಣೆ ನಡೆಯಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೆ ವರದಿ ಹೇಳಿದೆ.

ನಡ್ಡಾ ಅವರು ಮೂರು ವರ್ಷಗಳ ಅಧಿಕಾರಾವಧಿಯು ಜನವರಿ 20, 2023 ರಂದು ಕೊನೆಗೊಳ್ಳಲಿದೆ. ನಡ್ಡಾ ಅವರನ್ನು 2019 ರ ಜುಲೈನಲ್ಲಿ ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಯಿತು ಮತ್ತು 2020ರ ಜನವರಿ 20 ರಂದು ಪೂರ್ಣ ಸಮಯದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಅವರ ಆಯ್ಕೆಯು ಸರ್ವಾನುಮತದಿಂದ ನಡೆಯಿತು.

ಬಿಜೆಪಿಯ ಸಂವಿಧಾನದ ಪ್ರಕಾರ, ಪಕ್ಷದ ಅಧ್ಯಕ್ಷರು ತಲಾ ಮೂರು ವರ್ಷಗಳಂತೆ ಸತತ ಎರಡು ಅವಧಿಗೆ ಅಧ್ಯಕ್ಷರಾಗಿ ಇರಬಹುದಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಶಶಿ ತರೂರು v/s ಮಲ್ಲಿಕಾರ್ಜುನ ಖರ್ಗೆ; ದಿಗ್ವಿಜಯ್ ಸಿಂಗ್ ಕಣದಿಂದ ಹೊರಕ್ಕೆ

ಬಿಜೆಪಿ ನಾಯಕರ ಪ್ರಕಾರ, ನಡ್ಡಾ ಅವರು ಪ್ರಧಾನಿ ಮೋದಿಯವರ ವಿಶ್ವಾಸನೀಯ ವ್ಯಕ್ತಿಯಾಗಿದ್ದು, ಅವರ ಅಧಿಕಾರದ ನಂತರ ಪಕ್ಷವೂ ನಿರಂತರ ಉತ್ತಮ ಪ್ರದರ್ಶನ ನೀಡುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...