Homeಕರ್ನಾಟಕಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ, ರಾಜ್ಯದ ಎಂಟು ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್‌

ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ, ರಾಜ್ಯದ ಎಂಟು ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್‌

- Advertisement -
- Advertisement -

ಅಕ್ಟೋಬರ್ 5ರ ಬುಧವಾರದಂದು ಬೆಂಗಳೂರು ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ‘ ಯಲ್ಲೊ ಅಲರ್ಟ್‌’ ನೀಡಲಾಗಿದೆ. ಕೇಂದ್ರ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಗೂ ಯಲ್ಲೊ ಅಲರ್ಟ್‌ ನೀಡಲಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಆದರೆ, ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಲಿದೆ ಎಂದು ಐಎಂಡಿ ಹೇಳಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರುವುದರಿಂದ ತಂಪು ವಾತಾವರಣವಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲೂ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಮಹಿಳೆಯರಿಗೆ ಸ್ವಾತಂತ್ರ್ಯ, ಸಮಾನ ಅವಕಾಶ ನೀಡುವುದು ಅಗತ್ಯ: ಮೋಹನ್ ಭಾಗವತ್‌

ಸೆಪ್ಟೆಂಬರ್‌ ತಿಂಗಳಲ್ಲಿ ಸುರಿದ ಭಾರಿ ಮಳೆಯ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿತ್ತು. ಮಳೆಯಿಂದಾಗಿ ಬೆಂಗಳೂರಿನ ಉತ್ತರ, ದಕ್ಷಿಣ ಮತ್ತು ಪೂರ್ವದ ಪ್ರಮುಖ ಪ್ರದೇಶಗಳು ಜಲಾವೃತವಾಗಿದ್ದವು. ನೆರೆಯನ್ನು ಸಮರ್ಪಕವಾಗಿ ನಿಭಾಯಿಸದ ಕಾರಣಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಕೂಡಾ ವ್ಯಕ್ತವಾಗಿತ್ತು.

ಬೆಂಗಳೂರಿನ ಸರ್ಜಾಪುರ ರಸ್ತೆ, ಸಿಲ್ಕ್ ಬೋರ್ಡ್, ಎಚ್‌ಎಸ್‌ಆರ್ ಲೇಔಟ್, ವರ್ತೂರು, ಇಕೋ ಸ್ಪೇಸ್, ​​ಬೆಳ್ಳಂದೂರು, ದೊಡ್ಡಕನ್ನೆಲಿ ಕೂಡ ಮಳೆಯಿಂದ ಜಲಾವೃತಗೊಂಡಿದ್ದವು. ಹಲವು ಪ್ರದೇಶಗಳಲ್ಲಿ ವಾಹನಗಳು ನೀರಿನಲ್ಲಿ ಸಿಲುಕಿರುವ ದೃಶ್ಯಗಳು ಕಂಡುಬಂದಿದ್ದವು.

ಚಿತ್ರದುರ್ಗ ಜಿಲ್ಲೆಯ ಕೋಳೂರು ಗ್ರಾಮದ ದ್ವೀಪವೊಂದರಲ್ಲಿ ಸೆಪ್ಟೆಂಬರ್‌‌ 9ರಂದು ಸುರಿದ ಮಳೆಯಿಂದಾಗಿ ನೀರಿನ ಮಟ್ಟ ಏರಿಕೆಯಾಗಿ ಐವರು ರೈತರು ಸಿಕ್ಕಿಬಿದ್ದಿದ್ದರು. ಕೂಡಲೇ ಗ್ರಾಮದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತಂಡವನ್ನು ಕಳುಹಿಸಿ, ಐವರು ರೈತರನ್ನು ರಕ್ಷಿಸಿದ್ದರು.

ಇದನ್ನೂ ಓದಿ: ರೆಡ್ ಅಲರ್ಟ್-ಯೆಲ್ಲೋ ಅಲರ್ಟ್: ಹವಾಮಾನ ಇಲಾಖೆ ಹೊರಡಿಸುವ ಎಚ್ಚರಿಕೆಗಳ ಅರ್ಥ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...