Homeಮುಖಪುಟಆಲ್ಟ್‌ನ್ಯೂಸ್‌ ಸಂಸ್ಥಾಪಕರಾದ ಮೊಹಮ್ಮದ್‌ ಜುಬೇರ್‌‌ ಮತ್ತು ಪ್ರತೀಕ್‌ ಸಿನ್ಹಾ ನೋಬೆಲ್‌ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ

ಆಲ್ಟ್‌ನ್ಯೂಸ್‌ ಸಂಸ್ಥಾಪಕರಾದ ಮೊಹಮ್ಮದ್‌ ಜುಬೇರ್‌‌ ಮತ್ತು ಪ್ರತೀಕ್‌ ಸಿನ್ಹಾ ನೋಬೆಲ್‌ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ

- Advertisement -
- Advertisement -

ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕರು ಮತ್ತು ಅಂತಾರಾಷ್ಟ್ರೀಯ ಖ್ಯಾತಿಯ ಪತ್ರಕರ್ತರಾದ ಮೊಹಮ್ಮದ್‌ ಝುಬೇರ್‌ ಹಾಗೂ ಪ್ರತೀಕ್‌ ಸಿನ್ಹಾ ಅವರು 2022ರ ನೊಬೆಲ್‌ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ನೊಬೆಲ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವವರನ್ನು ಸಮಿತಿಯು ಬಹಿರಂಗಪಡಿಸಿಲ್ಲ. ಮೂಲಗಳ ಪ್ರಕಾರ, ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್, ಪೋಪ್ ಫ್ರಾನ್ಸಿಸ್, ಟುವಾಲು ವಿದೇಶಾಂಗ ಸಚಿವ ಸೈಮನ್ ಕೋಫೆ ಸೇರಿ ಹಲವರು ನಾಮನಿರ್ದೇಶನಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2022ರ ನೊಬೆಲ್ ಶಾಂತಿ ಪ್ರಶಸ್ತಿ ಸ್ಪರ್ಧೆ ಪಟ್ಟಿಯಲ್ಲಿ ಸುಮಾರು 343 ಅಭ್ಯರ್ಥಿಗಳಿದ್ದಾರೆ. ಈ ಪೈಕಿ 251 ವ್ಯಕ್ತಿಗಳು ಮತ್ತು 92 ಸಂಸ್ಥೆಗಳನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಪಟ್ಟಿಯಲ್ಲಿ ಝುಬೇರ್‌ ಮತ್ತು ಪ್ರತೀಕ್ ಸಿನ್ಹಾ ಹೆಸರು ಸೇರಿರುವುದು ವಿಶೇಷ.

ಇದನ್ನೂ ಓದಿ: ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯರ ಕೆಲಸವನ್ನು ಮಾಧ್ಯಮಗಳೇ ಮಾಡುತ್ತಿವೆ: ಜುಬೇರ್‌

ನೊಬೆಲ್‌ ಪ್ರಶಸ್ತಿಯ 50ನೇ ವಾರ್ಷಿಕೋತ್ಸವ ಇದಾಗಿದ್ದು, ಅಂತಿಮ ಹಂತದವರೆಗೆ ನಾಮನಿರ್ದೇಶನಗೊಂಡಿರುವವರ ಹೆಸರನ್ನು ಬಹಿರಂಗಪಡಿಸಬಾರದು ಎಂಬುದು ನಿಯಮ. ಆದರೆ, ಮೂಲಗಳ ಪ್ರಕಾರ ಸಿನ್ಹಾ ಮತ್ತು ಝುಬೇರ್‌ ಮಾತ್ರವಲ್ಲದೆ, ಉಕ್ರೇನ್‌ ಅಧ್ಯಕ್ಷ ವೊಲೊಡೊಮಿರ್‌ ಝೆಲೆನ್‌ಸ್ಕಿ, ರಷ್ಯಾದ ವಿಪಕ್ಷ ನಾಯಕ ಅಲೆಕ್ಸಿ ನವಲ್ನಿ ಕೂಡ ಸ್ಪರ್ಧಿಗಳಾಗಿದ್ದಾರೆ.

ಅಕ್ಟೋಬರ್‌ 7ರಂದು ಓಸ್ಲೋದಲ್ಲಿ ನಡೆಯುವ ಸಮಾರಂಭದಲ್ಲಿ ನೊಬೆಲ್‌ ಶಾಂತಿ ಪ್ರಶಸ್ತಿಯನ್ನು ವಿತರಿಸಲಾಗುತ್ತದೆ.

ಮುಖ್ಯವಾಗಿ ಬಿಜೆಪಿ ಐಟಿ ಸೆಲ್‌ಗಳಿಂದ ಹೊರ ಬರು‌ತ್ತಿದ್ದ ಸುಳ್ಳು ಸುದ್ದಿಗಳನ್ನು ಬಯಲಿಗೆ ಎಳೆದ ಕಾರಣಕ್ಕೆ ಝುಬೇರ್‌‌ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದರು. ಜೂನ್‌ ತಿಂಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ದೆಹಲಿ ಪೊಲೀಸರು ಝುಬೇರ್‌ ಅವರನ್ನು ಬಂಧಿಸಿದ್ದರು. ಬಳಿಕ ಝುಬೇರ್‌ ವಿರುದ್ಧ ಉತ್ತರ ಪ್ರದೇಶದಲ್ಲಿ ಆರು ಪ್ರಕರಣಗಳು ದಾಖಲಾಗಿದ್ದವು.

ಇದನ್ನೂ ಓದಿ: ‘ಬಂಧನವನ್ನು ದಂಡಿಸುವ ಸಾಧನವಾಗಿ ಬಳಸುವಂತಿಲ್ಲ’: ಜುಬೇರ್‌‌ ಪ್ರಕರಣದ ವಿವರವಾದ ತೀರ್ಪು ಬಿಡುಗಡೆ

ಪ್ರಕರಣಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಝುಬೇರ್‌ ಅವರಿಗೆ ಜಾಮೀನು ನೀಡಿತ್ತು. ಈ ಸಂದರ್ಭದಲ್ಲಿ ಎಲ್ಲ ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸುವಂತೆ ಸೂಚಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....