Homeಮುಖಪುಟಆಪ್ ಸಚಿವನ ನೇತೃತ್ವದಲ್ಲಿ ಬೌದ್ಧ ಧರ್ಮಕ್ಕೆ ಸಾಮೂಹಿಕ ಮತಾಂತರ: ಪ್ರತಿಜ್ಞೆ ಆಕ್ಷೇಪಿಸಿದ ಬಿಜೆಪಿ

ಆಪ್ ಸಚಿವನ ನೇತೃತ್ವದಲ್ಲಿ ಬೌದ್ಧ ಧರ್ಮಕ್ಕೆ ಸಾಮೂಹಿಕ ಮತಾಂತರ: ಪ್ರತಿಜ್ಞೆ ಆಕ್ಷೇಪಿಸಿದ ಬಿಜೆಪಿ

ಜೈಭೀಮ್ ಮಿ‍ಷನ್ ಸಂಘಟನೆ ಏರ್ಪಡಿಸಿದ್ದ ಧಮ್ಮ ಚಕ್ರ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ರವರ ಸಂಬಂಧಿ ರಾಜರತ್ನ ಅಂಬೇಡ್ಕರ್ ಕೂಡ ಭಾಗವಹಿಸಿದ್ದರು.

- Advertisement -
- Advertisement -

ಡಾ.ಬಿ.ಆರ್ ಅಂಬೇಡ್ಕರ್‌ರವರು ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ದಿನದ ಅಂಗವಾಗಿ ದೆಹಲಿಯಲ್ಲಿ ನಡೆದ ಧಮ್ಮ ಚಕ್ರ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಆಪ್ ಸಚಿವ ಸೇರಿ 7000ಕ್ಕೂ ಹೆಚ್ಚು ಜನರು ಬೌದ್ಧ ಧರ್ಮ ಸ್ವೀಕರಿಸಿದ್ದಾರೆ.

ದೆಹಲಿಯ ಸಮಾಜ ಕಲ್ಯಾಣ ಇಲಾಖೆ ಸಚಿವ ರಾಜೇಂದ್ರ ಪಾಲ್ ಗೌತಮ್ ತಮ್ಮ ಸಾವಿರಾರು ಅನುಯಾಯಿಗಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂಬೇಡ್ಕರ್‌ರವರು ಪ್ರತಿಪಾದಿಸಿದ್ದ 22 ಪ್ರತಿಜ್ಞೆಗಳನ್ನು ತೆಗೆದುಕೊಂಡಿದ್ದಾರೆ.

ಈ ಕುರಿತು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. 22 ಪ್ರತಿಜ್ಞೆಗಳಲ್ಲಿ ಒಂದಾದ ಬ್ರಹ್ಮ, ವಿಷ್ಣು, ಮಹೇಶ್ವರನಲ್ಲಿ ನನಗೆ ನಂಬಿಕೆಯಿಲ್ಲ, ಅವರನ್ನು ನಾನು ಪೂಜಿಸುವುದಿಲ್ಲ ಎಂದು ಕಾರ್ಯಕ್ರಮದಲ್ಲಿ ಬೋದಿಸಿರುವುದಕ್ಕೆ ಹಿಂದೂ ದೇವತೆಗಳಿಗೆ ಅವಮಾನ ಎಂದು ಕರೆದಿದೆ.

ಎಎಪಿ ಸಚಿವರು ಗಲಭೆ ಎಬ್ಬಿಸಲು ಪ್ರಯತ್ನಿಸುತ್ತಿದ್ದಾರೆ. ಕೂಡಲೇ ಸಚಿವರನ್ನು ಪಕ್ಷದಿಂದ ತೆಗೆದು ಹಾಕಬೇಕು. ನಾವು ಅವರ ವಿರುದ್ಧ ದೂರು ಸಲ್ಲಿಸುತ್ತಿದ್ದೇವೆ ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ಹೇಳಿದ್ದಾರೆ.

“ಕೇಜ್ರಿವಾಲ್ ಮಂತ್ರಿ ಹಿಂದೂಗಳ ವಿರುದ್ಧ ಹೇಗೆ ವಿಷ ಉಗುಳುತ್ತಿದ್ದಾರೆ ನೋಡಿ. ಚುನಾವಣಾ ಹಿಂದೂ ಕೇಜ್ರಿವಾಲ್ ಮತ್ತು ಎಎಪಿಯ ಹಿಂದೂ ವಿರೋಧಿ ಮುಖ ಎಲ್ಲರ ಮುಂದೆ ಬಂದಿದೆ. ಹಿಂದೂ ವಿರೋಧಿ ಎಎಪಿಗೆ ಸಾರ್ವಜನಿಕರು ಶೀಘ್ರದಲ್ಲೇ ತಕ್ಕ ಉತ್ತರ ನೀಡಲಿದ್ದಾರೆ. ನಾಚಿಕೆ ಆಗುತ್ತಿದೆ ಕೇಜ್ರಿವಾಲ್” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ರಾಜೇಂದ್ರ ಪಾಲ್ ಗೌತಮ್, “ನನಗೆ ಬೌದ್ಧ ಧರ್ಮದಲ್ಲಿ ನಂಬಿಕೆಯಿದೆ. ಭಾರತದ ಸಂವಿಧಾನವು ನನಗಿಷ್ಟವಾದ ಧರ್ಮವನ್ನು ಅನುಸರಿಸುವ ಹಕ್ಕು ನೀಡಿದೆ. ಇದರಿಂದ ಯಾರಿಗೆ ತೊಂದರೆಯಾಗುತ್ತಿದೆ? ಬಿಜೆಪಿಯವರು ನಿಜವಾದ ದೇಶ ವಿರೋಧಿಗಳು. ಆಪ್ ಕಂಡರೆ ಅವರಿಗೆ ಭಯ, ಅದಕ್ಕಾಗಿ ಸುಳ್ಳು ದೂರು ನೀಡುತ್ತಿದ್ದಾರೆ” ಎಂದಿದ್ದಾರೆ.

ಜಾತಿ ಆಧಾರಿತ ರಾಜಕೀಯ ಮಾಡುವವರು ದ್ರೋಹಿಗಳು. ಅವರಿಗೆ ಬೇರೆ ಯಾವುದೇ ಅಜೆಂಡಾಗಳಿಲ್ಲ. ಧರ್ಮ ಧರ್ಮದ ನಡುವೆ ಎತ್ತಿಕಟ್ಟುವುದು ಅವರ ಚಾಳಿ. ಅವರು ಆಪ್ ಕಾರ್ಯಕರ್ತರು ಏಕೆ ದೇವಸ್ಥಾನಕ್ಕೆ ಹೋಗುತ್ತಾರೆ ಎಂದು ಪ್ರಶ್ನಿಸುತ್ತಾರೆ. ನನ್ನ ಪ್ರಕಾರ ಯಾರಿಗೆ ಯಾವ ಧರ್ಮದ ಮೇಲೆ ನಂಬಿಕೆಯಿದೆಯೊ ಅವರು ಆಯಾದ ಧರ್ಮದ ಪೂಜಾಸ್ಥಳಿಗೆ ಹೋಗುವ ಹಕ್ಕು ಹೊಂದಿದ್ದಾರೆ. ನನಗೆ ಬೌದ್ಧ ಧರ್ಮದ ಮೇಲೆ ನಂಬಿಕೆಯಿದೆ. ಹಾಗಾಗಿ ನಾನು ಅಲ್ಲಿಗೆ ಹೋಗುತ್ತೇನೆ. ಯಾರಿಗೂ ಇನ್ನೊಂದು ಧರ್ಮವನ್ನು ಹೇರುವ ಅಧಿಕಾರವಿಲ್ಲ” ಎಂದು ರಾಜೇಂದ್ರ ಪಾಲ್ ಗೌತಮ್ ತಿಳಿಸಿದ್ದಾರೆ.

ಜೈಭೀಮ್ ಮಿ‍ಷನ್ ಸಂಘಟನೆ ಏರ್ಪಡಿಸಿದ್ದ ಧಮ್ಮ ಚಕ್ರ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ರವರ ಸಂಬಂಧಿ ರಾಜರತ್ನ ಅಂಬೇಡ್ಕರ್ ಕೂಡ ಭಾಗವಹಿಸಿದ್ದರು.

ಇದನ್ನೂ ಓದಿ: ನಾನಕ್ ಚಂದ್ ರತ್ತುರವರ ’ಬಾಬಾ ಸಾಹೇಬರ ಕೊನೆದಿನಗಳು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರತಿಯೊಬ್ಬ ವ್ಯಕ್ತಿಯು ತನ್ನಗಿಷ್ಟವಾದ ಧರ್ಮವನ್ನು ಸ್ವೀಕರಿಸಬಹುದು….ಅದು ಎಲ್ಲಾರ ಧಾರ್ಮಿಕ ಹಕ್ಕು….. ಅದು ಭಾರತ ಕಾನೂನು…
    ಮಾತು ಮಾತಿಗೆ ಹಿಂದೂ , ಹಿಂದು ಎನ್ನುವ ನೀವು ನಿಮ್ಮ ಬ್ರಾಹ್ಮಣ ಸಮಾಜದ ಹೆಣ್ಣುಮಕ್ಕಳನ್ನು ಮುಸ್ಲಿಂರಿಗೆ ಕೊಟ್ಟು ವಿವಾಹ ಮಾಡುತ್ತೀರಿ… ಅದು ನಾಶ ಮಾಡದಂಗೆ ಅಲ್ವ…..
    ರೀಮಾ- ಶಾರುಖ್ ಖಾನ್..
    1)ಕಿರಣ್ ರಾವ್ 2), ರೀತು – ಅಮೀರ್ ಖಾನ್….
    ಮೋನಿಕ ಬೇಡಿ – ಅಬ್ಬು ಸಲಿಂ….( ದಾವುದ್ ಶಿಷ್ಯ)
    ಸಂಗೀತ ಬಿಜಲಾನಿ- ಅಜರ್…cricket ..
    ಕರೀನಾ ಕಪೂರ್ – ಸೈಫ್ ಆಲಿಖಾನ್…
    MP ಶನ್ವಾಜ್ ಹೆಂಡತಿ ಬ್ರಾಹ್ಮಣಿ…
    BJP , MP ಸುಬ್ರಮಣೀ ಸ್ವಾಮಿ ಮಗಳು (ಬ್ರಾಹ್ಮಣಿ) ಮಸ್ಲಿಂರ ಜೊತೆ ಮದುವೆ …
    ಇನ್ನು ನೂರಾರು….
    ಈ BJP ಯವರಿಗೆ ಶ್ರೀಮಂತ ಮುಸ್ಲಿಂರು ಅಳಿಯಂದಿರು…..
    ಬಡ ಮಸ್ಲಿಂರು ದೇಶದ್ರೋಹಿಗಳು…

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...