Homeಮುಖಪುಟಪತ್ರಕರ್ತ ವಿಶ್ವೇಶ್ವರ ಭಟ್ಟರಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ

ಪತ್ರಕರ್ತ ವಿಶ್ವೇಶ್ವರ ಭಟ್ಟರಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ

- Advertisement -
- Advertisement -

ವಿಶ್ವವಾಣಿ ಪತ್ರಿಕೆಯ ಸಂಪಾದಕರಾದ ವಿಶ್ವೇಶ್ವರ್ ಭಟ್ ತಮ್ಮ ಅಂಕಣ ಬರಹದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಬಣ್ಣವನ್ನು ಅವಮಾನಕರ ರೀತಿಯಲ್ಲಿ ಚಿತ್ರಿಸಿ ಜನಾಂಗೀಯ ನಿಂದನೆಗೈದಿದ್ದಾರೆ.

ವಿಶ್ವವಾಣಿ ಪತ್ರಿಕೆಯ ಅಕ್ಟೋಬರ್ 06ರ ನೂರೆಂಟು ವಿಶ್ವ ಎಂಬ ಅಂಕಣದಲ್ಲಿ ನದಿಯ ಹೆಸರಿಟ್ಟುಕೊಂಡು ನೀರಿಗಾಗಿ ನರಳುವ ಜೋರ್ಡಾನ್! ಎಂಬ ಬರಹದಲ್ಲಿ “ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ!” ಎಂದು ಬರೆಯುವ ಮೂಲಕ ರಾಷ್ಟ್ರಪತಿಯವರ ಮೈಬಣ್ಣವನ್ನು ಅವಹೇಳನ ಮಾಡಿದ್ದಾರೆ ಎಂದು ಪೀಪಲ್ ಮೀಡಿಯಾ ವರದಿ ಮಾಡಿದೆ.

ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಜೋರ್ಡಾನ್ ದೇಶದ ಬಿಸಿಲಿನ ಝಳವನ್ನು ವರ್ಣಿಸುವಾಗ “ಅಪ್ಪಟ ಬೀನ್ಕಿ ಕೆಂಡ! ಅರ್ಧಗಂಟೆ ಆ ಮರುಭೂಮಿಯಲ್ಲಿ ನಿಂತರೆ ಇಡೀ ಶರೀರವೆಲ್ಲ ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ! ಕಣ್ಮುಚ್ಚಿದರೂ ಜೋಗದ ಜಲಪಾತದಂತೆ ಸುರಿಯುವ ನಿಗಿನಿಗಿ ಬಿಸಿಲ ಧಾರೆ” ಎಂದು ಬರೆದಿದ್ದಾರೆ. ಆ ಮೂಲಕ ನಮ್ಮ ರಾಷ್ಟ್ರಪತಿಯವರ ಬಣ್ಣವನ್ನು ಅಪಹಾಸ್ಯ ಮಾಡಿದ್ದಾರೆ.

ರಾಷ್ಟ್ರಪತಿ ಸ್ಥಾನಕ್ಕೆ ಮುರ್ಮುರವರ ಹೆಸರು ಘೋಷಣೆಗೊಂಡ ದಿನದಿಂದಲೂ ಅವರ ಹೆಸರಿನ ಕಾರಣಕ್ಕೆ ಹಲವರು ಅವಹೇಳನ ಮಾಡಿ ಟೀಕೆಗೆ ಗುರಿಯಾಗಿದ್ದರು. ದ್ರೌಪದಿ ಹೆಸರಿದ್ದ ಕಾರಣಕ್ಕೆ ಗೇಲಿ ಮಾಡಲಾಗಿತ್ತು. ಕನ್ನಡ ಪ್ರಭ ಪತ್ರಿಕೆ ‘ದ್ರೌಪದಿ ಮಹಾಭಾರತದ ರಾಷ್ಟ್ರಪತಿ’ ಎಂದು ಕರೆದಿತ್ತು. ಅಲ್ಲದೆ ಪ್ರತಿಭಾ ಪಾಟೀಲ್ ನಂತರ ಮೊದಲ ಮಹಿಳಾ ರಾಷ್ಟ್ರಪತಿ ಎಂದು ಬರೆದಿತ್ತು. ಇತ್ತೀಚೆಗೆ ಬಿಜೆಪಿ ಶಾಸಕ ಕೂಡ ಮೊದಲ ಮಹಿಳಾ ರಾಷ್ಟ್ರಪತಿ ಎಂದು ಬ್ಯಾನರ್‌ನಲ್ಲಿ ಬರೆಸಿದ್ದರು.

ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಮಾತಿನ ನಡುವೆ ರಾಷ್ಟ್ರಪತ್ನಿ ಎಂದು ಹೇಳಿದ್ದಕ್ಕಾಗಿ ಬಿಜೆಪಿ ಸಂಸತ್ತಿನ ಕಲಾಪ ನಡೆಯದಂತೆ 2-3 ದಿನ ಭಾರೀ ಪ್ರತಿಭಟನೆ ನಡೆಸಿತ್ತು. ಚೌಧರಿ ಬಾಯ್ತಪ್ಪಿನಿಂದ ಆದ ಪ್ರಮಾದ ಎಂದು ಕ್ಷಮೆ ಕೇಳಿದರೂ ಸಹ ಬಿಜೆಪಿ ಪ್ರತಿಭಟನೆ ನಿಂತಿರಲಿಲ್ಲ. ಈಗ ಪತ್ರಕರ್ತ ವಿಶ್ವೇಶ್ವರ ಭಟ್ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ವಿರುದ್ಧ ಜನಾಂಗೀಯ ನಿಂದನೆ ನಡೆಸಿದ್ದಾರೆ. ಇದಕ್ಕೆ ಬಿಜೆಪಿ ಹೇಗೆ ಪ್ರತಿಕ್ರಿಯಿಸುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ; ಬುಡಕಟ್ಟು ಮಹಿಳೆ ಅತ್ಯುನ್ನತ ಸ್ಥಾನಕ್ಕೇರಿರುವುದು ಪ್ರಜಾಪ್ರಭುತ್ವದ ಶಕ್ತಿ: ನೂತನ ರಾಷ್ಟ್ರಪತಿ ಮುರ್ಮು ಮೊದಲ ಭಾಷಣ ಹೀಗಿತ್ತು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನುವಾದಿ ವಿಶ್ವೇಶ್ವರಬಟ್ಟನಿಗೆ ಆದಿವಾಸಿ ಮಹಿಳೆಯೊಬ್ಬರು ಈ ದೇಶದ ರಾಷ್ಟ್ರಪತಿ ಆಗಿರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಇಂತಹ ಮಾತುಗಳು ಬರುತ್ತಿವೆ.

  2. ಭಾರತ ದೇಶದ ಪ್ರಪ್ರಥಮ ಪ್ರಜೆ…
    ಭಾರತ ದೇಶದ ಸೇನೆಯ ಮುಖ್ಯಸ್ಥರು…
    ಭಾರತ ದೇಶದ ಸಂವಿಧಾನಿಕ ಮುಖ್ಯಸ್ಥರು
    ಭಾರತ ದೇಶದ ಅತ್ಯುನ್ನತ ಹುದ್ದೆ..
    ಅಲಂಕರಿಸಿದ ಗೌರವಾನ್ವಿತ ರಾಷ್ಟ್ರಪತಿಗಳು ಆದ
    ದ್ರೌಪದಿ ಮುರ್ಮುರವರು ನಮ್ಮ ಭಾರತೀಯರ ಹೆಮ್ಮೆ. ಮಾನ್ಯರ ಬಗ್ಗೆ ಈ ರೀತಿಯ ಕ್ಷುಲ್ಲಕ; ಕೀಳು ಮನಸ್ಥಿತಿ ಹೊಂದಿರುವ ಭಟ್ ರವರಿಗೆ ದಿಕ್ಕಾರ…

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...