Homeಕರ್ನಾಟಕಬೆಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ; ಓರ್ವ ಬಂಧನ

ಬೆಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ; ಓರ್ವ ಬಂಧನ

- Advertisement -
- Advertisement -

ಪಶ್ಚಿಮ ಬೆಂಗಳೂರಿನಲ್ಲಿ 17 ವರ್ಷದ ಯುವತಿಯ ಮೇಲೆ ಅತ್ಯಾಚಾರ ಮತ್ತು ಬ್ಲಾಕ್ ಮೇಲ್ ಮಾಡಿದ ಆರೋಪದ ಮೇಲೆ 24 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

“ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ” ಎಂದು ಬಾಲಕಿಯ ಪೋಷಕರು ನೀಡಿದ ಪೊಲೀಸ್ ದೂರಿನಲ್ಲಿ ತಿಳಿಸಿದ್ದರೆ, “ಒಬ್ಬ ವ್ಯಕ್ತಿ ಮಾತ್ರ ಅತ್ಯಾಚಾರದಲ್ಲಿ ಭಾಗಿಯಾಗಿರುವುದು ಆರಂಭಿಕ ತನಿಖೆಯಲ್ಲಿ ಕಂಡುಬಂದಿದೆ” ಎಂದು ಪೊಲೀಸರು ಹೇಳುತ್ತಿದ್ದಾರೆ.

ಪ್ಲೈವುಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ದೇವರಾಜ್ (24) ಎಂಬಾತನನ್ನು ‘ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ)’ ಕಾಯ್ದೆಯಡಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ದೇವರಾಜ್ ಮತ್ತು ಬಾಲಕಿ ನಾಲ್ಕು ವರ್ಷಗಳಿಂದ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಆರು ತಿಂಗಳ ಹಿಂದೆ ಬಾಲಕಿಯು ಅವನೊಂದಿಗೆ ದೂರವಾಗಲು ನಿರ್ಧರಿಸಿದಾಗ ಇಬ್ಬರ ನಡುವೆ ವಿವಾದಗಳು ಉಂಟಾದವು ಎನ್ನಲಾಗಿದೆ.

ಸೆಪ್ಟೆಂಬರ್‌ನಲ್ಲಿ ಮತ್ತೊಮ್ಮೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆತ ಕೃತ್ಯದ ಒಂದು ಗಂಟೆ ಅವಧಿಯ ವಿಡಿಯೋ ಮಾಡಿಕೊಂಡಿದ್ದ. “ಸಂಬಂಧವನ್ನು ಕೊನೆಗಾಣಿಸಿದರೆ ವಿಡಿಯೊವನ್ನು ವೈರಲ್‌ ಮಾಡುತ್ತೇನೆ” ಎಂದು ಆಕೆಗೆ ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿದ್ದಾನೆ.

ಬೇರೆಯವರನ್ನು ಮದುವೆಯಾದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ತನ್ನ ಪೋಷಕರಿಗೆ ವಿಷಯವನ್ನು ತಿಳಿಸಿದ್ದಾಳೆ.

ಶುಕ್ರವಾರ ಪೋಷಕರು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೇವರಾಜ್ ಮತ್ತು ಆತನ ಮೂವರು ಗೆಳೆಯರಾದ ಶೇಖರ್, ಬಸವ ಮತ್ತು ಭೈರವ ಸೇರಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿದ್ದಾರೆ. ಪ್ರಾಥಮಿಕ ತನಿಖೆಯ ನಂತರ, “ದೇವರಾಜ್ ಮಾತ್ರ ಕೃತ್ಯದಲ್ಲಿ ಭಾಗಿಯಾಗಿದ್ದಾನೆ” ಎಂದು ಪೊಲೀಸರು ಹೇಳುತ್ತಿದ್ದಾರೆ.

“ಪೋಷಕರ ದೂರಿನ ಆಧಾರದ ಮೇಲೆ ನಾವು ಪೋಕ್ಸೋ ಕಾಯ್ದೆಯಡಿ ಸಾಮೂಹಿಕ ಅತ್ಯಾಚಾರದ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ. ಆದರೆ ಇದುವರೆಗಿನ ತನಿಖೆಯಲ್ಲಿ ಇತರ ಮೂವರು ಯುವಕರು ಕೃತ್ಯದಲ್ಲಿ ಭಾಗಿಯಾಗಿಲ್ಲ ಎಂದು ತೋರಿಸುತ್ತದೆ. ನಂತರದಲ್ಲಿ ಏನಾದರೂ ಅವರ ವಿರುದ್ಧ ಸಾಕ್ಷ್ಯಾಧಾರಗಳು ದೊರೆತರೆ ನಾವು ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ತನಿಖೆಯ ಭಾಗವಾಗಿರುವ ಅಧಿಕಾರಿಯೊಬ್ಬರು ಹೇಳಿರುವುದಾಗಿ ‘ಡೆಕ್ಕನ್ ಹೆರಾಲ್ಡ್‌’ ವರದಿ ಮಾಡಿದೆ.

ಇತರ ಶಂಕಿತರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಇನ್ನೊಂದು ಪೊಲೀಸ್ ಮೂಲವು ಪ್ರತಿಕ್ರಿಯಿಸಿದ್ದು, “ಬಾಲಕಿಯ ಮೇಲೆ ನಾಲ್ವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಾವು ಪ್ರಕರಣವನ್ನು ಕೈಗೆತ್ತಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದೇವೆ” ಎಂದಿದೆ.

ಉತ್ತರ ಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ

ಗಾಜಿಯಾಬಾದ್‌ನ 12 ವರ್ಷದ ಅತ್ಯಾಚಾರ ಸಂತ್ರಸ್ತೆ ವೈದ್ಯಕೀಯ ಕಾಲೇಜಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಗಾಜಿಯಾಬಾದ್‌ನ ಖೋಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿಯನ್ನು ಅಕ್ಟೋಬರ್ 1 ರಂದು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು ಎಂದು ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಆರ್.ಕೆ.ಗುಪ್ತಾ ತಿಳಿಸಿದ್ದಾರೆ.

ಬಾಲಕಿ 7ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾರೆ. ಅವರ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ 19 ವರ್ಷದ ಯುವಕನೊಬ್ಬನು ಬಾಲಕಿಯನ್ನು ಬೆದರಿಸಿ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ ಎಂದು ಆಕೆಯ ಕುಟುಂಬ ಸದಸ್ಯರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...