Homeಮುಖಪುಟಮುಸ್ಲಿಮರನ್ನು ಸಂಪೂರ್ಣ ಬಹಿಷ್ಕರಿಸಿ: ಬಿಜೆಪಿ ಸಂಸದ ಪ್ರಚೋದನೆ

ಮುಸ್ಲಿಮರನ್ನು ಸಂಪೂರ್ಣ ಬಹಿಷ್ಕರಿಸಿ: ಬಿಜೆಪಿ ಸಂಸದ ಪ್ರಚೋದನೆ

- Advertisement -
- Advertisement -

“ಮುಸ್ಲಿಂ ಸಮುದಾಯವನ್ನು ಸಂಪೂರ್ಣವಾಗಿ ಬಹಿಷ್ಕರಿಸಬೇಕು” ಎಂದು ಪಶ್ಚಿಮ ದೆಹಲಿ ಭಾರತೀಯ ಜನತಾ ಪಕ್ಷದ ಸಂಸದ ಪರ್ವೇಶ್ ವರ್ಮಾ ಅವರು ಭಾನುವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದೇ ತಿಂಗಳು ಮೂವರು ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಮನೀಶ್ ಎಂಬವರ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನೇತೃತ್ವದಲ್ಲಿ ಬಲಪಂಥಿಯ ಸಂಘಟನೆಗಳು ‘ವಿರಾಟ್ ಹಿಂದೂ ಸಭಾ’ ಪ್ರತಿಭಟನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಸಮಾರಂಭ ಉದ್ದೇಶಿಸಿ ಮಾತನಾಡಿದ ಬಿಜೆಪಿ ಪರ್ವೇಶ್‌ ವರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಾಗಪುರದ ದಸರಾ ರ್‍ಯಾಲಿ ಉದ್ದೇಶಿಸಿ ಮಾತನಾಡಿದ್ದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ “ಅಲ್ಪಸಂಖ್ಯಾತರಿಗೆ ಅಪಾಯವಿಲ್ಲ” ಎಂದು ಹೇಳಿಕೆ ಕೊಟ್ಟಿದ್ದರು. ಇದೀಗ ಬಿಜೆಪಿಯ ಸಂಸದರ ಮುಸ್ಲಿಂ ಸಮುದಾಯದ ಬಹಿಷ್ಕಾರದ ಕರೆ ಎಲ್ಲೆಡೆ ಟೀಕೆಗೆ ಗುರಿಯಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಸದರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವರ್ಮಾ ಅವರಿಗಿಂತ ಮೊದಲು ಮಾತನಾಡಿದ ವಿಎಚ್‌ಪಿ ಅಂತರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್, “ಒಂದು ನಿರ್ದಿಷ್ಟ ಸಮುದಾಯದ ಜನರು ದೆಹಲಿಯನ್ನು ಮಿನಿ ಪಾಕಿಸ್ತಾನ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪರ್ವೇಶ್ ವರ್ಮಾ, “ಮುಸ್ಲಿಮರು ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದಾರೆ, ನಾವು ಅವರ ಅಂಗಡಿಗಳಿಂದ ತರಕಾರಿ ಖರೀದಿಸುವುದನ್ನು ನಿಲ್ಲಿಸಬೇಕು. ಮಾಂಸಾಹಾರ ಮಾರಾಟ ಮಾಡುತ್ತಿದ್ದಾರೆ, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ಗೆ ಹೇಳಿ ಪರವಾನಗಿ ಇಲ್ಲದ ಅಂಗಡಿಗಳನ್ನು ಮುಚ್ಚಬೇಕು. ಅವರು ನಡೆಸುವ ರೆಸ್ಟೋರೆಂಟ್‌ಗಳನ್ನು ಬಹಿಷ್ಕರಿಸಬೇಕು” ಎಂದು ಪ್ರಚೋದಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, “ಅವರಿಗೆ ಪಾಠ ಕಲಿಸಲು ನೀವು ಬಯಸುವುದಾದರೆ ಅದಕ್ಕೆ ಸಂಪೂರ್ಣ ಬಹಿಷ್ಕಾರವೊಂದೇ ದಾರಿ” ಎಂದು ಕರೆ ಕೊಟ್ಟ ಪರ್ವೇಶ್ ವರ್ಮಾ, ತಮ್ಮ ಮಾತಿಗೆ ಒಪ್ಪುವುದಾದರೆ ಕೈ ಮೇಲೆತ್ತುವಂತೆ ಜನರನ್ನು ಕೇಳಿಕೊಂಡಿದ್ದಾರೆ.

ಇದನ್ನೂ ಓದಿರಿ: ಬೌದ್ಧಧಮ್ಮದ ಅನುಯಾಯಿ ರಾಜೇಂದ್ರ ಪಾಲ್ ರಾಜೀನಾಮೆ; ಎಎಪಿಯ ಮೃದು ಹಿಂದುತ್ವ ಮುನ್ನೆಲೆಗೆ

“ನಾವು ಅವರನ್ನು ಸಂಪೂರ್ಣವಾಗಿ ಬಹಿಷ್ಕರಿಸುತ್ತೇವೆ ಎಂದು ನನ್ನೊಂದಿಗೆ ಹೇಳಿ. ನಾವು ಅವರಿಂದ ಏನನ್ನೂ ಖರೀದಿಸುವುದಿಲ್ಲ. ನಾವು ಅವರಿಗೆ ಯಾವುದೇ ವೇತನ ನೀಡುವುದಿಲ್ಲ” ಎಂದಿರುವ ವರ್ಮಾ ಪ್ರತಿಭಟನೆಯಲ್ಲಿ ಹಾಜರಿದ್ದ ಎಲ್ಲರೂ ಪ್ರತಿಜ್ಞೆ ತೆಗೆದುಕೊಳ್ಳುವಂತೆ ಕೇಳಿಕೊಂಡಿದ್ದಾರೆ.

ಬಿಜೆಪಿ ಸಂಸದರ ಹೇಳಿಕೆ ಭಾರೀ ಟೀಕೆಗೆ ಗುರಿಯಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಸಂಸದ ಅಸಾವುದ್ದಿನ್ ಓವೈಸಿ, “ಆರ್‌ಎಸ್‌ಎಸ್‌ನ ಮೋಹನ್ ಭಾಗವತ್, ಮುಸ್ಲಿಮರಲ್ಲಿ ಹುಸಿಭಯ ಹರಡಿಸಲಾಗುತ್ತಿದೆ ಎಂದು ಹೇಳಿದ್ದರು. ಇದೀಗ ‍ರಾಷ್ಟ್ರ ರಾಜಧಾನಿಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರು ಮುಸ್ಲಿಮರನ್ನು ಬಹಿಷ್ಕರಿಸುವ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಾಸ್ತವ ಏನೆಂದರೆ ಬಿಜೆಪಿಯು ಮುಸ್ಲಿಮರ ವಿರುದ್ಧ ಸಮರ ಆರಂಭಿಸಿದೆ. ಈ ಕುರಿತು ದೆಹಲಿ ಮುಖ್ಯಮಂತ್ರಿ ಮತ್ತು ಗೃಹಸಚಿವ ಅಮಿತ್ ಶಾ ಅವರು ಮೌನವಹಿಸಿದ್ದಾರೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...