Homeಮುಖಪುಟಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ: ಸಿದ್ದರಾಮಯ್ಯ

ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ: ಸಿದ್ದರಾಮಯ್ಯ

- Advertisement -
- Advertisement -

ಜಸ್ಟಿಸ್ ನಾಗಮೋಹನ್ ದಾಸ್‌ರವರ ವರದಿಯ ಶಿಫಾರಸ್ಸಿನಂತೆ ರಾಜ್ಯದಲ್ಲಿ ಎಸ್‌ಸಿ ಮೀಸಲಾತಿಯನ್ನು 15%  ದಿಂದ 17% ಗೆ ಮತ್ತು ಎಸ್‌ಟಿ ಮೀಸಲಾತಿಯನ್ನು 3% ರಿಂದ 7% ಗೆ ಹೆಚ್ಚಳ ಮಾಡುವುದಾಗಿ ವಿಪಕ್ಷ ಮುಖಂಡರ ಜೊತೆ ಸಿಎಂ ಬಸವರಾಮ ಬೊಮ್ಮಾಯಿ ಘೋಷಿಸಿದ್ದರು. ಆದರೆ ಈ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ, ಈ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ಬಗ್ಗೆ ವಿವರ ನೀಡದೆ ಮೌನವಾಗಿದ್ದುಕೊಂಡು ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಮುದಾಯಗಳ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯನ್ನು ನೇಮಿಸಿತ್ತು. ಆ ಸಮಿತಿಯ ಶಿಫಾರಸುಗಳಿಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಮೀಸಲಾತಿ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ದೀರ್ಘವಾದುದು ಮಾತ್ರವಲ್ಲ, ಆಳುವ ಪಕ್ಷದ ರಾಜಕೀಯ ಇಚ್ಛಾಶಕ್ತಿಯನ್ನೂ ಅವಲಂಬಿಸಿದೆ. ಆದರೆ ಈ ಕುರಿತು ಗಮನ ಹರಿಸಬೇಕಾದ ಸರ್ಕಾರ ಸಂಭ್ರಮಾಚರಣೆಯಲ್ಲಿ ತೊಡಗಿರುವುದು ಸರಿಯಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ.

ಎಸ್ ಸಿ/ಎಸ್ ಟಿ ಸಮುದಾಯದ ಮೀಸಲಾತಿಯ ಹೆಚ್ಚಳವಾಗಬೇಕಾದರೆ ಮೊದಲು ರಾಜ್ಯದ ವಿಧಾನಮಂಡಲ ನಿರ್ಣಯ ಕೈಗೊಂಡು ಸಂವಿಧಾನದ ತಿದ್ದುಪಡಿಗಾಗಿ ಕೇಂದ್ರ ಸರ್ಕಾರಕ್ಕೆ ಕಳಿಸಬೇಕಾಗುತ್ತದೆ. ಕೇಂದ್ರ ಸರ್ಕಾರ ಸಂಸತ್ ನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆಯಬೇಕು. ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ ನಂತರ ಮೀಸಲಾತಿ ಹೆಚ್ಚಳ ಜಾರಿಯಾಗಲಿದೆ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.

ಮೀಸಲಾತಿ ಹೆಚ್ಚಳದ ಈ ಪ್ರಕ್ರಿಯೆ ಸುಲಭದ ಕೆಲಸ ಅಲ್ಲ. ರಾಜ್ಯದಲ್ಲಿ ಈಗ ಹಿಂದುಳಿದ ಜಾತಿಗಳಿಗೆ ಶೇ.32, ಪರಿಶಿಷ್ಟ ಜಾತಿಗಳಿಗೆ ಶೇ.15 ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇ.3ರಷ್ಟು ಅಂದರೆ ಒಟ್ಟು ಶೇ.50ರಷ್ಟು ಮೀಸಲಾತಿ ಇದೆ. ಎಸ್ ಸಿ/ಎಸ್ ಟಿ ಮೀಸಲು ಹೆಚ್ಚಳದಿಂದ ಈ ಪ್ರಮಾಣ ಶೇ.56ರಷ್ಟು ಆಗಲಿದೆ.
ಸುಪ್ರೀಂ ಕೋರ್ಟ್ (ಇಂದಿರಾ ಸಹಾನಿ ಪ್ರಕರಣದ) ತೀರ್ಪಿನ ಪ್ರಕಾರ ಒಟ್ಟು ಮೀಸಲಾತಿ ಶೇ. 50 ಮೀರುವಂತಿಲ್ಲ. ಈ ಮಿತಿಯನ್ನು ಮೀರದೆ ಎಸ್ ಸಿ/ಎಸ್ ಟಿ ಮೀಸಲಾತಿಯನ್ನು ಒಟ್ಟು ಶೇ.ಆರರಷ್ಟು ಹೆಚ್ಚಿಸಲು ಹೇಗೆ ಸಾಧ್ಯ ಎಂಬುದರ ಬಗ್ಗೆ ತನ್ನ ನಿಲುವನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜಾತಿಗಣತಿಗೆ ಸರ್ಕಾರಗಳು ಹಿಂಜರಿಯುತ್ತಿರುವುದೇಕೆ? ಕರ್ನಾಟಕದ ವರದಿ ಬಿಡುಗಡೆಯಾಗಿಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...