Homeದಲಿತ್ ಫೈಲ್ಸ್ಕೋಲಾರ: ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಕ್ಕೆ ದಲಿತನ ಮೇಲೆ ಹಲ್ಲೆ; ಎಫ್‌ಐಆರ್‌

ಕೋಲಾರ: ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಕ್ಕೆ ದಲಿತನ ಮೇಲೆ ಹಲ್ಲೆ; ಎಫ್‌ಐಆರ್‌

- Advertisement -
- Advertisement -

ಕರ್ನಾಟಕದಲ್ಲಿ ಜಾತಿ ತಾರತಮ್ಯದ ಮತ್ತೊಂದು ಪ್ರಕರಣ ದಾಖಲಾಗಿದ್ದು, ಅಕ್ಟೋಬರ್ 7ರಂದು ಬಂಗಾರಪೇಟೆ ತಾಲೂಕಿನ ದೊಡ್ಡೂರು ಗ್ರಾಮದ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಕ್ಕಾಗಿ 46 ವರ್ಷದ ದಲಿತ ವ್ಯಕ್ತಿಯನ್ನು ಪ್ರಬಲ ಜಾತಿಯ ಜನರು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ದಲಿತ ವ್ಯಕ್ತಿಗೆ ಥಳಿಸಿ ಕತ್ತಿಯಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಬೂದಿಕೋಟೆ ಪೊಲೀಸರು ಆರು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಕೋಲಾರ ಜಿಲ್ಲೆಯ ಬೂದಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಕುರಿತು ಸಂತ್ರಸ್ತ ಮುನಿರಾಜು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಕ್ಟೋಬರ್ 6ರಂದು ಆಕಸ್ಮಿಕವಾಗಿ ಸಿದ್ದಯ್ಯ ಅವರಿಗೆ ಕರೆ ಮಾಡಿದ್ದೆ. ಬಳಿಕ ಗೊತ್ತಲೂರು ಗ್ರಾಮದಲ್ಲಿ ಅಂತ್ಯಕ್ರಿಯೆ ವೇಳೆ ಕರೆ ಮಾಡಿದ್ದಕ್ಕೆ ನಮ್ಮ ನಡುವೆ ಜಗಳವಾಗಿತ್ತು. ಮರುದಿನ ದೊಡ್ಡಾಪುರ ಗ್ರಾಮದ ಗಂಗಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿದ್ದ ವೇಳೆ ಸಿದ್ದಯ್ಯ, ಚಂದ್ರಪ್ಪ ಹಾಗೂ ಸಿದ್ದಯ್ಯನ ನಾಲ್ವರು ಸಂಬಂಧಿಕರು ನನ್ನ ಮೇಲೆ ಕತ್ತಿ, ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ. ಸಿದ್ದಯ್ಯ ಮತ್ತಿತರರು ಜಾತಿ ನಿಂದನೆ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ಇಲ್ಲೇ ಇದ್ದೀಯಾ ಎಂದು ನನ್ನನ್ನು ಗದರಿದರು. ನಮ್ಮ ದೇವಸ್ಥಾನದಲ್ಲಿ ನಿನಗೆ ಏನು ಕೆಲಸವಿದೆ? ಎನ್ನುತ್ತಾ ಹಲ್ಲೆ ಮಾಡಿದರು. ಗ್ರಾಮಸ್ಥರು ನನ್ನನ್ನು ಕಂಡು ಆಸ್ಪತ್ರೆಗೆ ಸೇರಿಸಿದಾಗ ನಾನು ಪ್ರಜ್ಞಾಹೀನ ಸ್ಥಿತಿಯಲ್ಲಿದೆ” ಎಂದು ಅವರು ವಿವರಿಸಿದ್ದಾರೆ.

ಮುನಿರಾಜು ತಲೆಗೆ ಗಾಯಗಳಾಗಿದ್ದು ರಕ್ತಸ್ರಾವವಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಕೋಲಾರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೂರಿನ ಮೇರೆಗೆ ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಧರಣಿ ದೇವಿ ಹಾಗೂ ಇತರ ಉನ್ನತ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಜೊತೆಗೆ  ಘಟನಾ ಸ್ಥಳಕ್ಕೆ ತೆರಳಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಇವುಗಳನ್ನು ಓದಿರಿ: ಜಾತಿ ದೌರ್ಜನ್ಯ ಸಂಬಂಧಿತ ಸುದ್ದಿಗಳನ್ನು ‘ದಲಿತ್‌ ಫೈಲ್ಸ್‌’ ಕ್ಯಾಟಗರಿಯಲ್ಲಿ ‌ಓದಬಹುದು- ಕ್ಲಿಕ್‌ ಮಾಡಿರಿ

ಭಾರತೀಯ ದಂಡ ಸಂಹಿತೆ ಸೆಕ್ಷನ್ 143, 144, 147, 148, 504, 324, 323 ಮತ್ತು 149 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇತ್ತೀಚೆಗೆ ಕರ್ನಾಟಕದಲ್ಲಿ ವರದಿಯಾದ ಜಾತಿ ಆಧಾರಿತ ದೌರ್ಜನ್ಯದ ಮೂರನೇ ಘಟನೆ ಇದಾಗಿದೆ.

ಕೋಲಾರ ಜಿಲ್ಲೆಯ ದಲಿತ ಬಾಲಕನೊಬ್ಬ ಸೆ.29ರಂದು ಗ್ರಾಮ ದೇವತೆ ಹಬ್ಬದ ವೇಳೆ ದೇವರ ಗುಜ್ಜುಗೋಲು ಮುಟ್ಟಿದನೆಂದು ಆರೋಪಿಸಿ ಜಾತಿ ದೌರ್ಜನ್ಯ ನಡೆಸಲಾಗಿತ್ತು. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಉಳ್ಳೇರಹಳ್ಳಿಯಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಕುಟುಂಬಕ್ಕೆ ಅರವತ್ತು ಸಾವಿರ ರೂ. ದಂಡ ವಿಧಿಸಲಾಗಿತ್ತು. ಇಲ್ಲವಾದರೆ ಊರು ತೊರೆಯುವಂತೆ ದಲಿತ ಕುಟುಂಬಕ್ಕೆ ಬೆದರಿಕೆ ಹಾಕಲಾಗಿತ್ತು. ಮತ್ತೊಂದು ಘಟನೆಯು ಚಿಕ್ಕಬಳ್ಳಾಪುರ ಜಿಲ್ಲೆಯ ಕೆಂಪದೇನಹಳ್ಳಿ ಗ್ರಾಮದಲ್ಲಿ ಅಕ್ಟೋಬರ್ 2ರಂದು ನಡೆದಿತ್ತು. 14 ವರ್ಷದ ದಲಿತ ಬಾಲಕನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...