Homeಮುಖಪುಟಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಕ್ಕೆ: TMC ಆರೋಪ

ಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಕ್ಕೆ: TMC ಆರೋಪ

ಅಮಿತ್ ಶಾ ಪುತ್ರ ಜಯ್ ಶಾ ಅವರು ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಬಹುದಾದರೆ ಸೌರವ್ ಗಂಗೂಲಿ ಯಾಕಿಲ್ಲ ಎಂದು ಟಿಎಂಸಿ ಪ್ರಶ್ನಿಸಿದೆ.

- Advertisement -
- Advertisement -

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷರಾಗಿದ್ದ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿಯವರನ್ನು ಎರಡನೇ ಅವಧಿಗೆ ಮುಂದುವರೆಸುವುದಿಲ್ಲ, ಬದಲಿಗೆ ರೋಜರ್ ಬಿನ್ನಿಯವರು ಆ ಸ್ಥಾನ ಪಡೆಯುತ್ತಾರೆ ಎಂಬ ವರದಿಗಳ ಬೆನ್ನಲ್ಲೆ ತೃಣಮೂಲ ಕಾಂಗ್ರೆಸ್ ಪಕ್ಷವು ಬಿಜೆಪಿ ಮೇಲೆ ಹರಿಹಾಯ್ದಿದೆ. ಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಹಾಕಲಾಗುತ್ತಿದೆ ಎಂದು TMC ಆರೋಪಿಸಿದೆ.

ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಬಹುದಾದರೆ ಸೌರವ್ ಗಂಗೂಲಿ ಯಾಕಿಲ್ಲ? ಏಕೆಂದರೆ ಇದು ಬಿಜೆಪಿಯ ಸೇಡಿನ ರಾಜಕೀಯದ ಉದಾಹರಣೆಯಾಗಿದೆ ಎಂದು ಟಿಎಂಸಿ ಹೇಳಿದೆ.

ಬಿಜೆಪಿಯು ಬಂಗಾಳದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ. ಹಾಗಾಗಿ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಜನಪ್ರಿಯತೆ ಹೊಂದಿರುವ ಸೌರವ್ ಗಂಗೂಲಿ ಬಿಜೆಪಿ ಸೇರುತ್ತಾರೆ ಎಂಬ ಉಹಾಪೋಹ ಹಬ್ಬಿಸಿತ್ತು. ಅದು ಸಾಧ್ಯವಾಗದ ಕಾರಣ ಅವರನ್ನು ಎರಡನೇ ಭಾರಿಗೆ ಮುಂದುವರೆಸಿಲ್ಲ ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.

ಗಂಗೂಲಿ ಅವರು ಎರಡನೇ ಬಾರಿಗೆ ಆಯ್ಕೆಯಾಗದಿರುವ ಹಿಂದೆ ರಾಜಕೀಯವಿದೆ. ಅವರನ್ನು ಅವಮಾನಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ನಾವು ಈ ವಿಷಯದ ಬಗ್ಗೆ ನೇರವಾಗಿ ಪ್ರತಿಕ್ರಿಯಿಸುವುದಿಲ್ಲ, ಆದರೆ ಚುನಾವಣೆಯ ಸಮಯದಲ್ಲಿ ಮತ್ತು ನಂತರ ಬಿಜೆಪಿಯು ಇಂತಹ ಪ್ರಚಾರವನ್ನು ಮಾಡಿದ್ದರಿಂದ ಅದಕ್ಕೆ ಪ್ರತಿಕ್ರಿಯಿಸುವುದು ಖಂಡಿತವಾಗಿಯೂ ಬಿಜೆಪಿಯ ಜವಾಬ್ದಾರಿಯಾಗಿದೆ ಎಂದು ಘೋಷ್ ಹೇಳಿದ್ದಾರೆ.

ಈ ವರ್ಷದ ಮೇ ತಿಂಗಳಿನಲ್ಲಿ ಬಿಜೆಪಿಯ ಹಿರಿಯ ನಾಯಕರೊಬ್ಬರು (ಅಮಿತ್ ಶಾ) ಗಂಗೂಲಿ ಅವರ ಮನೆಗೆ ಊಟಕ್ಕೆ ಹೋಗಿದ್ದರು. ಈ ಕುರಿತು ಚೆನ್ನಾಗಿ ವಿವರಿಸಲು ಸೌರವ್ ಅವರಿಗೆ ಸಾಧ್ಯವಿದೆ ಎಂದು ನನಗನಿಸುತ್ತದೆ. ಅಂದಿನ ರಾಜಕೀಯದ ಕುರಿತು ಅವರು ಎಷ್ಟು ಮಾತನಾಡುತ್ತಾರೆ ಎಂಬುದು ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಟಿಎಂಸಿ ಹೇಳಿಕೆಗೆ ಆಧಾರವಿಲ್ಲದ ಆರೋಪ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ. ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಮಾತನಾಡಿ, “ಸೌರವ್ ಗಂಗೂಲಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಬಗ್ಗೆ ನನಗೆ ಗೊತ್ತಿಲ್ಲ. ಅವರು ಕ್ರಿಕೆಟ್ ದಂತಕತೆಯಾಗಿದ್ದಾರೆ. ಆದರೆ ಕೆಲವರು ಅವರನ್ನು ಎರಡನೇ ಬಾರಿಗೆ ಮುಂದುವರೆಸುತ್ತಿಲ್ಲ ಎಂದು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಅವರು ಬಿಸಿಸಿಐ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಾಗ ಅವರ ಪಾತ್ರ ಏನಾದರೂ ಇದೆಯೇ? ತೃಣಮೂಲವು ಪ್ರತಿಯೊಂದು ವಿಷಯವನ್ನು ರಾಜಕೀಯಗೊಳಿಸುವುದನ್ನು ನಿಲ್ಲಿಸಬೇಕು” ಎಂದಿದ್ದಾರೆ.

1983ರ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯ ರೋಜರ್ ಬಿನ್ನಿಯವರು ಮಂಗಳವಾರ BCCI ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಅಕ್ಟೋಬರ್ 18 ರಂದು ಮುಂಬೈನಲ್ಲಿ BCCI ವಾರ್ಷಿಕ ಸಾಮಾನ್ಯ ಸಭೆ ನಡೆಯಲಿದ್ದು ಅಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

ಜಯ್ ಶಾ ಕೂಡ ನಾಮಪತ್ರ ಸಲ್ಲಿಸಿದ್ದು, ಬೇರೆ ಯಾರೂ ನಾಮಪತ್ರ ಸಲ್ಲಿಸದಿದ್ದಲ್ಲಿ ಅವರು ಸತತ ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಆಗ ಅವರು ಐಸಿಸಿ ಮಂಡಳಿಯಲ್ಲಿ ಭಾರತದ ಪ್ರತಿನಿಧಿಯಾಗಿ ಗಂಗೂಲಿಯನ್ನು ಬದಲಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.

ಇದನ್ನೂ ಓದಿ; ಭಾರತ್ ಜೋಡೋ ಜೊತೆಗೆ ದಲಿತರನ್ನೂ ಬೆಸೆಯಬಹುದೇ ಕಾಂಗ್ರೆಸ್ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....