Homeಕರ್ನಾಟಕಗುಬ್ಬಿ: ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಿಸಿ ಅಸ್ಪೃಶ್ಯತೆ ಆಚರಣೆ

ಗುಬ್ಬಿ: ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಿಸಿ ಅಸ್ಪೃಶ್ಯತೆ ಆಚರಣೆ

- Advertisement -
- Advertisement -

ದೇವಸ್ಥಾನಕ್ಕೆ ಬಂದ ದಲಿತ ಕುಟುಂಬಕ್ಕೆ ಪೂಜೆ ನಿರಾಕರಿಸಿ, ದೇವಸ್ಥಾನದಿಂದ ಹೊರಕ್ಕೆ ಹೋಗುವಂತೆ ಒತ್ತಾಯಿಸಿ ಅಸ್ಪೃಶ್ಯತೆ ಆಚರಿಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದಿದೆ. ಪ್ರಕರಣದ ಬಗ್ಗೆ ಈ ವರೆಗೂ ಯಾವುದೆ ಬಂಧನ ನಡೆದಿಲ್ಲ. ಘಟನೆಯ ವಿಡಿಯೊ ವೈರಲ್ ಆಗಿದ್ದು ಆಕ್ರೋಶ ವ್ಯಕ್ತವಾಗಿದೆ.

ಘಟನೆಯು ಗುಬ್ಬಿಯ ನಿಟ್ಟೂರು ಗ್ರಾಮದ ಮುಳಕಟ್ಟಮ್ಮ ದೇವಾಲಯದಲ್ಲಿ ನಡೆದಿದೆ. ದೇವಾಲಯಕ್ಕೆ ತೆರಳಿದ್ದ ದಲಿತ ಕುಟುಂಬಕ್ಕೆ ಅರ್ಚಕ ಶ್ರೀಧರ್ ಎಂಬುವವರು, “ದೇವಾಲಯದ ಒಳಗಡೆ ಯಾಕೆ ಬಂದಿದ್ದೀರಿ, ಹೊರಗಡೆಯೇ ನಿಲ್ಲಿ. ನಿಮಗೆ ಪೂಜೆ ತಾನೇ ಮಾಡುತ್ತೇನೆ. ಆದರೆ ನೀವು ದೇವಸ್ಥಾನದ ಹೊರಗಡೆ ಹೋಗಿ” ಎಂದು ಹೇಳುವುದು ವಿಡಿಯೊದಲ್ಲಿ ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದರ ನಂತರ ದಲಿತ ಕುಟುಂಬದೊಂದಿಗೆ ಮಾತಿನ ಚಕಮಕಿ ನಡೆಸಿದ ಅರ್ಚಕ ಪೂಜೆ ಮಾಡದೆ ನಿರಾಕರಿಸಿ ಪೂಜೆ ಸಾಮಾನು ವಾಪಸ್ಸು ಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಇದರ ನಂತರ ದೇವಾಲಯದ ಕಮಿಟಿ ಮತ್ತು ದಲಿತರ ನಡುವೆ ವಾದ-ವಿವಾದ ಕೂಡಾ ನಡೆದಿದೆ ಎಂದು ವರದಿಯಾಗಿದೆ.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿ ಗುಬ್ಬಿ ಸರ್ಕಲ್ ಇನ್ಸ್‌‌ಪೆಕ್ಟರ್‌‌ ಎಫ್‌.ಕೆ.ನದಾಫ್‌‌,“ಅಲ್ಲಿ ಮೊದಲಿನಿಂದಲೂ ದಲಿತರು ಪೂಜೆ ಮಾಡುತ್ತಲೆ ಬಂದಿದ್ದಾರೆ. ‘ಟ್ರಸ್ಟ್‌‌ನವರನ್ನು ಕೇಳಬೇಕು, ಹೊರಗಡೆ ಹೋಗಿ’ ಎಂದು ಅರ್ಚಕ ಹೇಳಿದ್ದಾನೆ. ಅವನನ್ನು ಕರೆಸಿ ಮಾತನಾಡಿದ್ದೇವೆ. ಇದೀಗ ಎಲ್ಲರಿಗೂ ಪೂಜೆಗೆ ಅವಕಾಶವಿದೆ ಎಂಬ ಬೋರ್ಡ್‌ ಹಾಕಿದ್ದು, ಎಲ್ಲರೂ ಪೂಜೆ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ವಿಗ್ರಹ ಮುಟ್ಟಿದ್ದಾನೆಂದು ದಲಿತ ವ್ಯಕ್ತಿಯ ಕೊಲೆ; ಆರೋಪ

ಪ್ರಕರಣ ದಾಖಲಾಗಿಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,“ಎಫ್‌ಐಆರ್‌ ಏನೂ ಆಗಿಲ್ಲ. ಪ್ರಕರಣ ದಾಖಲಿಸುವುದು ಬೇಡ ಎಂದು ದಲಿತ ಕುಟುಂಬ ಕೇಳಿಕೊಂಡಿದೆ. ಸ್ಥಳೀಯರೇ ಆಗಿರುವುದರಿಂದ ಸೌಹಾರ್ದಯುತವಾಗಿ ಪ್ರಕರಣ ಮುಗಿಸುವಂತೆ ಮತ್ತು ಪೂಜೆಗೆ ಅವಕಾಶ ಮಾಡಿಕೊಡುವಂತೆ ಕೇಳಿದ್ದಾರೆ. ಅದಕ್ಕೆ ಅವಕಾಶ ಮಾಡಿಕೊಟ್ಟಿದ್ದೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Kaanuva devaru galada budda, Basava, Ambedkar ravarannu poojisade kanada devaru galige ee jaativyavaste yalli balavantavagi poojisalu hogo ee dalitarige buddi illa. Evaru este gudigalige hogi pooje madidaru evaru Hindugalagalu eedeshadalli sadyavilla, evarugalu modalu aatma sakshi mattu swabhiman belasikollali

  2. ಎಲ್ಲರಿಗೂ ಪ್ರವೇಶ ವಿದೆ ಎಂಬ ಬೋರ್ಡ್ ಹಾಕಲು ೨೦೧೪ ರಲ್ಲೇ ಆದೇಶವಾಗಿದೆ. ಕೋಲಾರದ ನಮ್ಮ ತಂಡ ಪದೇಪದೇ ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಆದೇಶ ಹೊರಡಿಸಿದ್ದರು. ನಮ್ಮ ಕೋಲಾರ ಮಾತ್ರವಲ್ಲದೆ ಅಲ್ಲಲ್ಲಿ ಬೋರ್ಡ್ ಹಾಕಿದ್ದಾರೆ. ಎಲ್ಲಾ ಕಡೆ ಹಾಕಬೇಕೆಂದು ಒತ್ತಾಯಿಸಬೇಕಿದೆ.

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...