Homeಮುಖಪುಟಬಂಧನದ ಆಧಾರ ಹಿಂದಿಯಲ್ಲಿ ಒದಗಿಸಿದ ಕಾರಣ ವಿದೇಶಿ ಪ್ರಜೆಯನ್ನು ಬಿಡುಗಡೆ ಆದೇಶಿಸಿದ ಬಾಂಬೆ ಹೈಕೋರ್ಟ್!

ಬಂಧನದ ಆಧಾರ ಹಿಂದಿಯಲ್ಲಿ ಒದಗಿಸಿದ ಕಾರಣ ವಿದೇಶಿ ಪ್ರಜೆಯನ್ನು ಬಿಡುಗಡೆ ಆದೇಶಿಸಿದ ಬಾಂಬೆ ಹೈಕೋರ್ಟ್!

- Advertisement -
- Advertisement -

ಬಂಧಿಸಲು ನೀಡಿದ ಕಾರಣಗಳು ಆರೋಪಿಗೆ ಅರ್ಥವಾಗದ ಹಿಂದಿ ಭಾಷೆಯಲ್ಲಿವೆ ಎಂದು ಕಂಡುಕೊಂಡಿರುವ ಬಾಂಬೆ ಹೈಕೋರ್ಟ್ ಮಾದಕವಸ್ತು ಪ್ರಕರಣದಲ್ಲಿ ಸಿಲುಕಿದ್ದ ವಿದೇಶಿ ಪ್ರಜೆಯೊಬ್ಬರನ್ನು ಬಿಡುಗಡೆ ಮಾಡಲು ಆದೇಶಿಸಿದೆ. ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರ ಪೀಠವು ಬಂಧನದ ಆಧಾರವನ್ನು ಒದಗಿಸುವುದು ಬಹಳ ಅಮೂಲ್ಯವಾದ ಸಾಂವಿಧಾನಿಕ ಹಕ್ಕು ಎಂದು ಅಭಿಪ್ರಾಯಪಟ್ಟಿದೆ.

“ಯಾಕೆ ಬಂಧಿಸಲಾಗಿದೆ ಎಂಬ ಅನುವಾದಿತ ಆವೃತ್ತಿಯನ್ನು ಆರೋಪಿಗೆ ನೀಡದಿರುವುದು ವಾಸ್ತವವಾಗಿ ಬಂಧನದ ಆಧಾರವನ್ನು ಬಂಧಿತನಿಗೆ ಪೂರೈಸದಂತಾಗುತ್ತದೆ. ಹೀಗಾಗಿ ಬಂಧನವು ದುರ್ಬಲಗೊಳ್ಳುತ್ತದೆ” ಎಂದು ಪೀಠವು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಅವರ ಪಾಲುದಾರರ ಸಹೋದರ ಅಗಿಸಿಲಾಸ್ ಡಿಮೆಟ್ರಿಯಾಡ್ಸ್ ಆರೋಪಿಯಾಗಿದ್ದು ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಶಕ್ಕೆ ಪಡೆದಿತ್ತು. ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ವಸ್ತುಗಳ ಅಕ್ರಮ ಸಾಗಾಟವನ್ನು ತಡೆಗಟ್ಟುವ ಕಾಯ್ದೆ (ಪಿಐಟಿಎನ್‌ಪಿಎಸ್‌ಎ) ಅಡಿಯಲ್ಲಿ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಶಿಕ್ಷಣ ಮಾಧ್ಯಮದಲ್ಲಿ ಹಿಂದಿ ಹೇರಿಕೆ: ಕೇಂದ್ರದ ನಡೆ ವಿರೋಧಿಸಿದ ಸ್ಟಾಲಿನ್ ಜೊತೆಗೂಡಿದ ಕೇರಳ ಸಿಎಂ

ಒಂದು ತಿಂಗಳ ನಂತರ ಅವರಿಗೆ ಜಾಮೀನು ನೀಡಲಾಯಿತು ಮತ್ತು ಸೆಪ್ಟೆಂಬರ್ 2021 ರಲ್ಲಿ ಕಂದಾಯ ಇಲಾಖೆ (ಪಿಐಟಿಎನ್‌ಡಿಪಿಎಸ್ ಘಟಕ) ಬಂಧನ ಆದೇಶವನ್ನು ಜಾರಿಗೊಳಿಸಿತು.

ವಕೀಲ ಕುಶಾಲ್ ಮೋರ್ ಮೂಲಕ ಹೈಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಿದ ಆರೋಪಿ, ತಾನು ವಿದೇಶಿ ಪ್ರಜೆಯಾಗಿರುವುದರಿಂದ ತನಗೆ ಹಿಂದಿ ಭಾಷೆಯ ಅರಿವಿಲ್ಲ ಎಂದು ಸೂಚಿಸಿದ್ದಾರೆ. ಈ ಕಾರಣದಿಂದಾಗಿ, ಹಿಂದಿಯನ್ನು ಓದಲು, ಬರೆಯಲು ಅಥವಾ ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಅಲ್ಲದೆ ಬಂಧನದ ದಾಖಲೆಗಳು ಹಿಂದಿಯಲ್ಲಿದ್ದು, ಅದಕ್ಕೆ ಯಾವುದೇ ಅನುವಾದವನ್ನು ಒದಗಿಸಲಾಗಿಲ್ಲ. ಇದರಿಂದಾಗಿ ಪರಿಣಾಮಕಾರಿ ಮತ್ತು ಸಂಪೂರ್ಣ ಪ್ರಾತಿನಿಧ್ಯವನ್ನು ನೀಡುವಲ್ಲಿ ವಿಫಲರಾಗಿದ್ದೇನೆ ಎಂದು ವಾದಿಸಿದ್ದರು.

ಎನ್‌ಸಿಬಿ ಪರ ವಕೀಲ ಶ್ರೀರಾಮ್ ಶಿರ್ಸಾತ್ ವಾದ ಮಂಡಿಸಿ, ಅರ್ಜಿದಾರರ ಪರ ವಕೀಲರೊಬ್ಬರು ಹಿಂದಿ ದಾಖಲೆಗಳನ್ನು ಭಾಷಾಂತರಿಸಿದ್ದಾರೆ ಎಂದು ವಾದಿಸಿದರು. ಆದರೆ ಆರೋಪಿಯು ಪಂಚನಾಮದಲ್ಲಿನ ಪುಟಗಳಿಗೆ ಸಹಿ ಹಾಕಲು ನಿರಾಕರಿಸಿದ್ದನ್ನು ಗಮನಿಸಿದ ನ್ಯಾಯಾಲಯವು, ಎನ್‌ಸಿಬಿಯ ವಾದವನ್ನು ಸುಳ್ಳು ಎಂದು ನಿರ್ಧಾರಿಸಿದೆ.

ಇದನ್ನೂ ಓದಿ: ಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ; ದಕ್ಷಿಣದ ರಾಜ್ಯಗಳು ಪ್ರತಿಭಟನೆ ನಡೆಸುತ್ತಿದ್ದರೂ ಒಕ್ಕೂಟ ಸರ್ಕಾರ ಮೌನ!

ನ್ಯಾಯಾಲಯವು ಸೆಪ್ಟೆಂಬರ್ 2021 ರ ಬಂಧನ ಆದೇಶವನ್ನು ರದ್ದುಗೊಳಿಸಿ, ಆರೋಪಿಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...