Homeಮುಖಪುಟಪುಣ್ಯಕೋಟಿ ಹಸು ದತ್ತು ಯೋಜನೆಗಾಗಿ ಸರ್ಕಾರಿ ನೌಕರರು 100 ಕೋಟಿ ದೇಣಿಗೆ ನೀಡುತ್ತೇವೆ -ಸಿ.ಎಸ್ ಷಡಕ್ಷರಿ

ಪುಣ್ಯಕೋಟಿ ಹಸು ದತ್ತು ಯೋಜನೆಗಾಗಿ ಸರ್ಕಾರಿ ನೌಕರರು 100 ಕೋಟಿ ದೇಣಿಗೆ ನೀಡುತ್ತೇವೆ -ಸಿ.ಎಸ್ ಷಡಕ್ಷರಿ

ಹಸಿವಿನಿಂದ ಅಸಂಖ್ಯಾತ ಮಕ್ಕಳು ಸಾಯುತ್ತಿರುವಾಗ ಹಸುಗಳನ್ನು ಮಾತ್ರ ಸಾಕಿ ಎನ್ನುವುದು ಸರಿಯೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷರಾದ ಡಿ. ಶಿವ ಶಂಕರ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ಗೋವುಗಳನ್ನು ದತ್ತು ಪಡೆಯುವ ಸರ್ಕಾರದ ಪುಣ್ಯಕೋಟಿ ದತ್ತು ಯೋಜನೆಗಾಗಿ ಸರ್ಕಾರಿ ನೌಕರರು ನವೆಂಬರ್ ತಿಂಗಳಿನಲ್ಲಿ ದೇಣಿಗೆ ನೀಡುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷರಾದ ಸಿ.ಎಸ್ ಷಡಕ್ಷರಿಯವರು ತಿಳಿಸಿದ್ದಾರೆ.

ಸರ್ಕಾರಿ ನೌಕರರು ಮತ್ತು ನಿಗಮ ಮಂಡಳಿಗಳ ಪ್ರತಿನಿಧಿಗಳನ್ನೊಳಗೊಂಡ ನಿಯೋಗವು ಇಂದು ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, ರಾಜ್ಯದ 9.5 ಲಕ್ಷ ಸರಕಾರಿ ನೌಕರರು, ನಿಗಮ ಮಂಡಳಿಗಳ ನೌಕರರು ದೇಣಿಗೆ ನೀಡಲು ಮುಂದಾಗಿದ್ದೇವೆ ಎಂದಿದ್ದಾರೆ.

ಸರ್ಕಾರಿ ನೌಕರರು ಇದುವರೆಗೂ ನೆರೆ, ಭೂಕಂಪ, ಕಾರ್ಗಿಲ್ ಯುದ್ದ, ಕೋವಿಡ್‌ನಂತಹ ದುರಂತದ ಸಂದರ್ಭದಲ್ಲಿ ದೇಣಿಗೆ ನೀಡುವ ಮೂಲಕ ಸಾಮಾಜಿಕ ಕಾಳಜಿಯ ಬದ್ದತೆಯ ಪ್ರದರ್ಶನ ಮಾಡಿದ್ದೇವೆ. ಈಗ ಸಿಎಂ ಬಸವರಾಜ ಬೊಮ್ಮಾಯಿಯವರು ಮನವಿ ಮಾಡಿರುವುದರಿಂದ ಕ್ಲಾಸ್ ಒನ್ ಅಧಿಕಾರಿಗಳು ತಲಾ 11,000 ರೂ, ಗ್ರೂಪ್ ಬಿ ನೌಕರರು 5,000 ರೂ ಮತ್ತು ಗ್ರೂಪ್ ಸಿ ನೌಕರರು 400 ರೂ ನೀಡುವ ಮೂಲಕ ಯೋಜನೆಗೆ ಕೈ ಜೋಡಿಸುತ್ತಿದ್ದೇವೆ ಎಂದಿದ್ದಾರೆ.

ಹೀಗೆ ಸಂಗ್ರಹವಾಗುವ ಸುಮಾರು 80- 100 ಕೋಟಿ ರೂ ವೆಚ್ಚದಲ್ಲಿ 1 ಲಕ್ಷ ಗೋವುಗಳನ್ನು ಅದರಲ್ಲಿಯೂ ಅಶಕ್ತ, ಕಸಾಯಿಖಾನೆಗೆ ಕಳಿಸುವ ಗೋವುಗಳನ್ನು ಸಾಕುವಂತಹ ಪುಣ್ಯಕೋಟಿ ಕಾರ್ಯಕ್ಕೆ ನಾಲ್ಕನೇ ಹಂತವಾಗಿ ತೊಡಗಿಸಿಕೊಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಈ ಪುಣ್ಯಕೋಟಿ ಯೋಜನೆಗೆ ಸರ್ಕಾರಿ ನೌಕರರಿಂದ ದೇಣಿಗೆ ವಸೂಲಿ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿಯು ದೇಣಿಗೆ ನೀಡಬೇಕೆಂಬ ಪ್ರಸ್ತಾಪವನ್ನು ತಿರಸ್ಕರಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷರಾದ ಡಿ. ಶಿವ ಶಂಕರ್ ರವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಸರ್ಕಾರಿ ನೌಕರರು ದೇಣಿಗೆ ಕೊಡಲೇಬೇಕೆಂದು ಸರ್ಕಾರ ಕಡ್ಡಾಯ ಮಾಡಿಲ್ಲ. ಸಾಧ್ಯವಾದವರು ಇಚ್ಚಾನುಸಾರ ದೇಣಿಗೆ ಕೊಡಿ ಎಂದಿದೆ. ಆದರೆ ಈ ಕುರಿತು ತಳಮಟ್ಟದ ನೌಕರರ ಜೊತೆ ಚರ್ಚಿಸಿ ಒಪ್ಪಿಗೆ ಪಡೆದು ದೇಣಿಗೆ ಸಂಗ್ರಹಿಸಬೇಕಿದ್ದ ನೌಕರರ ಸಂಘದ ಅಧ್ಯಕ್ಷರು ಎಲ್ಲೊ ಕುಳಿತು ತೀರ್ಮಾನ ಮಾಡಿ ಸರ್ಕಾರವನ್ನು ಒಲೈಸುವ ಕೆಲಸ ಮಾಡುತ್ತಿದ್ದಾರೆ. ನೀವು ತಳಮಟ್ಟದಲ್ಲಿ ಯಾವುದೇ ನೌಕರರನ್ನು ಕೇಳಿದರೆ ಅವರು ವಿರೋಧ ವ್ಯಕ್ತಪಡಿಸುತ್ತಾರೆ. ಆದರೆ ಸಂಘದವರು ನೇರವಾಗಿ ನೌಕರರ ಖಾತೆಯಿಂದ ಹಣ ಕಟ್ ಮಾಡಿಕೊಳ್ಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಅಸಂಖ್ಯಾತ ಮಕ್ಕಳು ಹಸಿವಿನಿಂದ ಸಾಯುತ್ತಿದ್ದಾರೆ. ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಇದಕ್ಕಾಗಿ ದೇಣಿಗೆ ಕೇಳಿದರೆ ನಾವು ಸಂತೋಷದಿಂದ ಕೊಡುತ್ತೇವೆ. ಅಧಿಕಾರಿಗಳು ಈ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಮುಂದಾಗಬೇಕು. ಅವರಿಗೆ ಉತ್ತಮ ಶಿಕ್ಷಣ ಕೊಟ್ಟು ಉತ್ತಮ ನಾಗರೀಕರನ್ನಾಗಿ ರೂಪಿಸಬೇಕು. ಆಗ ಮಾತ್ರ ನಮ್ಮ ದೇಶ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.

ಆದರೆ ಹಸಿವಿನಿಂದ ಮಕ್ಕಳು ಸಾಯುತ್ತಿರುವಾಗ ಹಸುಗಳನ್ನು ಮಾತ್ರ ಸಾಕಿ ಎನ್ನುವುದು ಎಷ್ಟು ವೈಜ್ಞಾನಿಕ? ನಮ್ಮದು ಜಾತ್ಯಾತೀತ ದೇಶ. ಯಾವುದೇ ಒಂದು ಭಾಷೆ, ಒಂದು ಧರ್ಮಕ್ಕೆ ಮಣೆ ಹಾಕುವುದು ಸರಿಯಲ್ಲ. ಆದರೆ ನೌಕರರ ಸಂಘದ ನಡೆ ನೋಡಿದರೆ ಒಂದು ಜಾತಿಯ, ಒಂದು ಧರ್ಮದ ಪರವಾಗಿ ಕೆಲಸ ಮಾಡುವ ಷಡ್ಯಂತ್ರ ನಡೆಯುತ್ತಿದೆ. ಮುಖ್ಯಮಂತ್ರಿಗಳನ್ನು ಒಲೈಸುವ ಭರದಲ್ಲಿ ನಡೆಯುತ್ತಿರುವ ಜನಾನುರಾಗಿಯಲ್ಲದ, ಜನೋಪಯೋಗಿಯಲ್ಲದ ಈ ಕೆಲಸವನ್ನು ನಾವು ಖಂಡಿಸುತ್ತೇವೆ ಎಂದು ಡಿ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ಏನಿದು ಪುಣ್ಯಕೋಟಿ ಯೋಜನೆ

ರಾಜ್ಯದ ಸರ್ಕಾರಿ ಮತ್ತು ಖಾಸಗೀ ಗೋಶಾಲೆಗಳಲ್ಲಿರುವ ಅಲ್ಲದೆ ವಯಸ್ಸಾದ, ಖಾಯಿಲೆಗೊಳಗಾದ, ತಪ್ಪಿಸಿಕೊಂಡ ಹಾಗೂ ಅಕ್ರಮ ಸಾಗಾಟದಲ್ಲಿ ವಶಕ್ಕೆ ಪಡೆದ ಗೋವುಗಳನ್ನು ಸಾಕುವುದಕ್ಕಾಗಿ ಕರ್ನಾಟಕ ಸರ್ಕಾರವು ಪುಣ್ಯಕೋಟಿ ದತ್ತು ಯೋಜನೆಯನ್ನು ಜಾರಿಗೆ ತಂದಿದೆ. ಚಿತ್ರನಟ ಸುದೀಪ್‌ರವರನ್ನು ರಾಯಭಾರಿಯನ್ನಾಗಿ ನೇಮಿಸಿದೆ. ಆದರೆ ಈ ಯೋಜನೆ ಜಾರಿಗೆ ಆರ್ಥಿಕ ಮುಗ್ಗಟ್ಟು ಉಂಟಾಗಿದ್ದರಿಂದ ಸಿಎಂ ಬಸವರಾಜ ಬೊಮ್ಮಾಯಿಯವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟಕ್ಕೆ ಪತ್ರ ಬರೆದು ಸರ್ಕಾರಿ ನೌಕರರು ದೇಣಿಗೆ ನೀಡಬೇಕೆಂದು ಮನವಿ ಮಾಡಿದ್ದರು.

ಇದನ್ನೂ ಓದಿ: ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟ ವಿಕೃತಿ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...