ಮಾವೋವಾದಿ ಸಂಪರ್ಕಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರೊಫೆಸರ್ ಜಿಎನ್ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿದ ಬಾಂಬೆ ಉಚ್ಚ ನ್ಯಾಯಾಲಯದ ತೀರ್ಪನ್ನು ಸುಪ್ರೀಂ ಕೋರ್ಟ್ ಶನಿವಾರ ಅಮಾನತುಗೊಳಿಸಿದೆ. ಈ ಅಮಾನತಿನಿಂದಾಗಿ ಸಾಯಿಬಾಬಾ ಸೇರಿದಂತೆ ಐವರ ಬಿಡುಗಡೆಗೆ ತಡೆ ಆಗಲಿದೆ ಎಂದು ಲೈವ್ ಲಾ ವರದಿ ಮಾಡಿದೆ.
ತಮ್ಮ ಬಂಧನದ ಎಂಟು ವರ್ಷಗಳ ನಂತರ, ಬಾಂಬೆ ಹೈಕೋರ್ಟ್ ಶುಕ್ರವಾರ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿ, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಆದೇಶಿಸಿತ್ತು. ಆದರೆ ಬಾಂಬೆ ಹೈಕೋರ್ಟ್‌ನ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಮಹಾರಾಷ್ಟ್ರ ಸರ್ಕಾರವು ಸುಪ್ರೀಂಕೋರ್ಟ್‌ಗೆ ತುರ್ತು ಮನವಿಯನ್ನು ಸಲ್ಲಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಮಹಾರಾಷ್ಟ್ರ ಸರ್ಕಾರದ ಮನವಿಯನ್ನು ಆಲಿಸಲು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಬೇಲಾ ತ್ರಿವೇದಿ ಅವರ ಪೀಠದ ವಿಶೇಷ ವಿಚಾರಣೆಯನ್ನು ನಿಗದಿಪಡಿಸಿತ್ತು ಮತ್ತು ಹೈಕೋರ್ಟ್ ನೀಡಿದ್ದ ತೀರ್ಪಗೆ ತಡೆ ನೀಡಬೇಕು ಎಂಬ ಸರ್ಕಾರದ ಮನವಿಯನ್ನು ಶುಕ್ರವಾರ ಸುಪ್ರೀಂಕೋರ್ಟ್ ನಿರಾಕರಿಸಿತ್ತು.
ಇದನ್ನೂ ಓದಿ: ಸಾಯಿಬಾಬಾ ಸೇರಿ ಆರು ಜನರ ವಿರುದ್ಧದ ಶಿಕ್ಷೆ ರದ್ದು: ಪ್ರಕರಣದ ಪೂರ್ಣ ವಿವರ ಇಲ್ಲಿದೆ
ಬಂಧನಕ್ಕೊಳಗಾದ ಎಂಟು ವರ್ಷಗಳ ನಂತರ, ಬಾಂಬೆ ಹೈಕೋರ್ಟ್ ಶುಕ್ರವಾರ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಶುಕ್ರವಾರ ಆದೇಶಿಸಿತ್ತು.
2017 ರಲ್ಲಿ ವಿಚಾರಣಾ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಾಯಿಬಾಬಾ ಅವರು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಶೇ.90 ರಷ್ಟು ದೈಹಿಕ ನ್ಯೂನತೆ ಹೊಂದಿರುವ ಮತ್ತು ಹಲವು ರೋಗಗಳಿಗೆ ತುತ್ತಾಗಿರುವ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ 2017ರಲ್ಲಿ ಗಡ್‌ಚಿರೋಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೊಳಗಾಗಿದ್ದರು. ಅವರಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ಕಾಲದಲ್ಲಿಯೂ ಸಹ ಮೆಡಿಕಲ್ ಪೆರೋಲ್ ಸಿಕ್ಕಿರಲಿಲ್ಲ.
ಇದನ್ನೂ ಓದಿ: ಮಾನವ ಹಕ್ಕು ಹೋರಾಟಗಾರರಾದ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತ: ಕೂಡಲೇ ಬಿಡುಗಡೆಗೆ ಕೋರ್ಟ್ ಆದೇಶ
ಪ್ರಕರಣದಲ್ಲಿ ಅವರ ಜೊತೆಗೆ ಇತರ ಐವರು ಆರೋಪಿಗಳನ್ನು ಸಹ ಪೀಠ ಖುಲಾಸೆಗೊಳಿಸಿತ್ತು. ಆದರೆ ಅವರಲ್ಲಿ ಒಬ್ಬರು ಜೈಲಿನಲ್ಲಿಯೇ ಮೃತಪಟ್ಟಿದ್ದರು. ಉಳಿದವರು ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಗಳಾಗಿರದಿದ್ದರೆ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ಪೀಠವು ಸೂಚಿಸಿತ್ತು.


