Homeಚಳವಳಿಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ ವಿರೋಧಿಸಿ ತಮಿಳುನಾಡಿನಾದ್ಯಂತ ಪ್ರತಿಭಟನೆ

ಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ ವಿರೋಧಿಸಿ ತಮಿಳುನಾಡಿನಾದ್ಯಂತ ಪ್ರತಿಭಟನೆ

ಹಿಂದಿಯನ್ನು ಕಡ್ಡಾಯಗೊಳಿಸಿದರೆ ಮತ್ತೊಂದು ಭಾಷಾಯುದ್ಧ ನಡೆಯುತ್ತದೆ ಎಂದು ತಮಿಳುನಾಡು ಸಿಎಂ ಸ್ಟಾಲಿನ್‌ ಎಚ್ಚರಿಸಿದ್ದರು

- Advertisement -
- Advertisement -

ದೇಶಾದ್ಯಂತ ಹಿಂದಿ ಭಾಷೆಯನ್ನು ಹೇರುವ ಒಕ್ಕೂಟ ಸರ್ಕಾರದ ಪ್ರಯತ್ನಗಳ ವಿರುದ್ಧ ಪ್ರತಿಭಟಿಸಿ, ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ತಮಿಳುನಾಡಿನ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಶನಿವಾರ ಪ್ರತಿಭಟನೆ ನಡೆಸಿದೆ. ಪಕ್ಷದ ಸಂಸದರು, ಶಾಸಕರು ಸೇರಿದಂತೆ ಪ್ರಮುಖ ನಾಯಕರು ಮತ್ತು ನೂರಾರು ಕಾರ್ಯಕರ್ತರು ರಾಜ್ಯಾದ್ಯಂತ ನಡೆದ ಪ್ರತಿಭಟನೆಗಳಲ್ಲಿ ಉಪಸ್ಥಿತರಿದ್ದರು.

ವಳ್ಳುವರ್ ಕೊಟ್ಟಂನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಮತ್ತು ಚೆಪಾಕ್‌-ಟ್ರಿಪ್ಲಿಕೇನ್ ಶಾಸಕ ಉದಯನಿಧಿ ಸ್ಟಾಲಿನ್, ‘‘ಹಿಂದಿ ಹೇರುವ ಇಂತಹ ಪ್ರಯತ್ನಗಳು ಮುಂದುವರಿದರೆ, ನಾವು ದೆಹಲಿಯಲ್ಲಿ ಪ್ರಧಾನಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಸರ್ಕಾರದ ‘ಒಂದು ರಾಷ್ಟ್ರ ಒಂದು ಭಾಷೆ’ ಅಜೆಂಡಾದ ವಿರುದ್ಧ ಘೋಷಣೆಗಳನ್ನು ಕೂಗಿದ ಉದಯನಿಧಿ ಸ್ಟಾಲಿನ್‌, ಪ್ರತಿಭಟನೆಯನ್ನು 2024 ರ ಸಾರ್ವತ್ರಿಕ ಚುನಾವಣೆಯ ಆರಂಭ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ; ದಕ್ಷಿಣದ ರಾಜ್ಯಗಳು ಪ್ರತಿಭಟನೆ ನಡೆಸುತ್ತಿದ್ದರೂ ಒಕ್ಕೂಟ ಸರ್ಕಾರ ಮೌನ!

2019 ರ ಚುನಾವಣೆಯಲ್ಲಿ ತಮಿಳುನಾಡಿನ ಜನರು ಮಾಡಿದಂತೆಯೇ 2024 ರಲ್ಲಿ ಆಡಳಿತಾರೂಢ ಬಿಜೆಪಿಯನ್ನು ದೇಶದ ಜನರು ವಿಫಲಗೊಳಿಸುತ್ತಾರೆ ಎಂದು ಅವರು ಹೇಳಿದ್ದು, ಹಿಂದಿ ಹೇರಿಕೆಯ ವಿರುದ್ಧ ಡಿಎಂಕೆ ಯಾವಾಗಲೂ ಧ್ವನಿ ಎತ್ತುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ದೇಶಾದ್ಯಂತ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನಕ್ಕಾಗಿ ಮೋದಿ ನೇತೃತ್ವದ ಸರ್ಕಾರ ಹಲವಾರು ಬಾರಿ ಟೀಕೆಗೆ ಒಳಗಾಗಿದೆ. ಇತ್ತೀಚೆಗೆ, ಅಧಿಕೃತ ಭಾಷೆಗಳ ಸಂಸತ್ತಿನ ಸಮಿತಿಯು ತನ್ನ 11 ನೇ ವರದಿಯಲ್ಲಿ, ದೇಶಾದ್ಯಂತ ಎಲ್ಲಾ ತಾಂತ್ರಿಕೇತರ ಮತ್ತು ತಾಂತ್ರಿಕ ಕಾಲೇಜುಗಳು ಮತ್ತು ಕೇಂದ್ರೀಯ ಸಂಸ್ಥೆಗಳಲ್ಲಿ ಹಿಂದಿಯನ್ನು ಕಡ್ಡಾಯ ಬೋಧನಾ ಮಾಧ್ಯಮವನ್ನಾಗಿ ಮಾಡಬೇಕೆಂದು ಶಿಫಾರಸು ಮಾಡಿತ್ತು. ಅನೇಕ ಡಿಎಂಕೆ ನಾಯಕರು ಮತ್ತು ಸಚಿವರು ಈ ಕ್ರಮವನ್ನು ಖಂಡಿಸಿದ್ದರು.

“ಭಾರತೀಯ ಒಕ್ಕೂಟದ ಸಾರ್ವಭೌಮತ್ವವು ಅದರ ಬಹುತ್ವದಲ್ಲಿ ಬೇರೂರಿದೆ. ಇದಕ್ಕೆ ವ್ಯತಿರಿಕ್ತವಾಗಿ, ಪ್ರತಿಯೊಂದಕ್ಕೂ ಏಕತ್ವವನ್ನು ಹೇರಲು ಪ್ರಯತ್ನಿಸುವುದು ಪ್ರಜಾಪ್ರಭುತ್ವದ ಮನೋಭಾವಕ್ಕೆ ವಿರುದ್ಧವಾಗಿದೆ” ಎಂದು ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಕನಿಮೊಳಿ ಅಕ್ಟೋಬರ್ 9 ರಂದು ಹೇಳಿದ್ದರು.

ಇದನ್ನೂ ಓದಿ: ಶಿಕ್ಷಣ ಮಾಧ್ಯಮದಲ್ಲಿ ಹಿಂದಿ ಹೇರಿಕೆ: ಕೇಂದ್ರದ ನಡೆ ವಿರೋಧಿಸಿದ ಸ್ಟಾಲಿನ್ ಜೊತೆಗೂಡಿದ ಕೇರಳ ಸಿಎಂ

ಅಕ್ಟೋಬರ್ 10 ರಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪ್ರತಿಕ್ರಿಯಿಸಿ, ಭಾರತದ ಶಕ್ತಿ ಅದರ ವೈವಿಧ್ಯತೆಯಲ್ಲಿದೆ ಎಂದು ಸೂಚಿಸಿದ್ದರು. “ಬಿಜೆಪಿ ಸರ್ಕಾರವು ‘ಒಂದು ರಾಷ್ಟ್ರ’ ಎಂಬ ನೆಪದಲ್ಲಿ ಜನರ ಮೇಲೆ ಒಂದು ಭಾಷೆ, ಒಂದು ಧರ್ಮ ಮತ್ತು ಒಂದು ಸಂಸ್ಕೃತಿಯನ್ನು ಹೇರುವ ಮೂಲಕ ವೈವಿಧ್ಯತೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದೆ. ಇದು ಭಾರತದ ವೈವಿಧ್ಯಮಯ ಸಂಸ್ಕೃತಿಗೆ ಅಪಾಯವಾಗಿದೆ” ಎಂದು ಅವರು ಹೇಳಿದ್ದರು.

ಸರ್ಕಾರಿ ಅಧಿಕಾರಿಗಳು ಹಿಂದಿಯಲ್ಲಿ ಮಾತನಾಡದಿದ್ದರೆ ಎಚ್ಚರಿಕೆ ನೀಡಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಮಿತಿ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ. ಇತರ ಭಾಷೆಗಳಿಗಿಂತ ಹಿಂದಿಗೆ ನೀಡಲಾದ ಈ ಆದ್ಯತೆಯು ಅಸಾಂವಿಧಾನಿಕವಾಗಿದೆ ಮತ್ತು ಅಂತಹ ಕ್ರಮವು ರಾಷ್ಟ್ರದ ಸಮಗ್ರತೆಗೆ ಬೆದರಿಕೆಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಹಿಂದಿ ಹೇರಿಕೆಯನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಡಿಎಂಕೆ ಪಕ್ಷದ ಯುವ ಮತ್ತು ವಿದ್ಯಾರ್ಥಿ ಘಟಕಗಳು, “ಐಐಟಿ, ಐಐಎಂ ಮತ್ತು ಎಐಐಎಂಎಸ್‌ನಂತಹ ಕೇಂದ್ರೀಯ ಸಂಸ್ಥೆಗಳಲ್ಲಿ ಹಿಂದಿಯನ್ನು ಬೋಧನಾ ಮಾಧ್ಯಮವನ್ನಾಗಿ ಮಾಡುವ ನಿರ್ಧಾರವು ಹಿಂದಿಯೇತರ ರಾಜ್ಯಗಳ ಭಾವನೆಗೆ ವಿರುದ್ಧವಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಯು ಹಿಂದಿಯೇತರ ಅಭ್ಯರ್ಥಿಗಳ ಉದ್ಯೋಗಾವಕಾಶಗಳನ್ನು ಕಸಿದುಕೊಳ್ಳುತ್ತದೆ ಎಂದು ಅದು ಆರೋಪಿಸಿವೆ.

ಇದನ್ನೂ ಓದಿ: ಹಿಂದಿಯೊಂದನ್ನೆ ರಾಷ್ಟ್ರಭಾಷೆ ಮಾಡಲು ಸಾಧ್ಯವಿಲ್ಲ: ಶಿಕ್ಷಣ ತಜ್ಞರೊಂದಿಗಿನ ಸಂವಾದದಲ್ಲಿ ರಾಹುಲ್ ಗಾಂಧಿ

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ, “ಪಕ್ಷವು ಹಿಂದಿ ಭಾಷೆಯ ಹೇರಿಕೆಯ ವಿರುದ್ಧ ಇದ್ದು, ಹಿಂದಿ ಭಾಷೆಯ ವಿರುದ್ಧ ಅಲ್ಲ. ಭಾಷಾ ಹೇರಿಕೆಯ ವಿರುದ್ಧ ಮಾತ್ರ ಪಕ್ಷ ಧ್ವನಿ ಎತ್ತುತ್ತಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...