Homeಮುಖಪುಟಸೌರವ್ ಗಂಗೂಲಿಗೆ ವಂಚಿಸಲಾಗುತ್ತಿದೆ: ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರೋಪ

ಸೌರವ್ ಗಂಗೂಲಿಗೆ ವಂಚಿಸಲಾಗುತ್ತಿದೆ: ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನದಿಂದ ಸೌರವ್ ಗಂಗೂಲಿಯವರನ್ನು ಕೆಳಗಿಳಿಸುತ್ತಿರುವುದನ್ನು ವಂಚನೆ ಎಂದು ಕರೆದಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಯವರು, ಪ್ರಧಾನಿಗಳೇ ದಯವಿಟ್ಟು ಅವರನ್ನು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಗಾದರೂ ಕಳಿಸಿಕೊಡಿ ಎಂದು ಮನವಿ ಮಾಡಿದ್ದಾರೆ.

ಕೋಲ್ಕಾತ್ತ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, “ಸೌರವ್ ಗಂಗೂಲಿಯವರನ್ನು ಹೊರಗಿಡುತ್ತಿರುವುದು ಅವರಿಗೆ ಮಾಡುತ್ತಿರುವ ವಂಚನೆಯಾಗಿದೆ. ಅವರು ಮಾಡಿದ ತಪ್ಪಾದರೂ ಏನು? ಇದರಿಂದ ನನಗೆ ಬಹಳ ದುಃಖವಾಗಿದೆ. ಸೌರವ್ ಜನಪ್ರಿಯ ವ್ಯಕ್ತಿ. ಅವರು ಭಾರತ ತಂಡದ ನಾಯಕರಾಗಿದ್ದರು. ದೇಶಕ್ಕಾಗಿ ಬಹಳ ಕೊಡುಗೆ ನೀಡಿದ್ದಾರೆ. ಅವರು ಕೇವಲ ಬಂಗಾಳದ ಹೆಮ್ಮೆ ಮಾತ್ರವಲ್ಲ ಇಡೀ ಭಾರತದ ಹೆಮ್ಮೆಯಾಗಿದ್ದಾರೆ. ಅವರನ್ನು ಅನ್ಯಾಯ ಮಾರ್ಗದಲ್ಲಿ ಹೊರಗಿಡುತ್ತಿರುವುದು ಏಕೆ? ಎಂದು ಪ್ರಶ್ನಿಸಿದ್ದಾರೆ.

“ಸೌರವ್ ಗಂಗೂಲಿ ಮತ್ತು ಜಯ್ ಶಾ ಎರಡನೇ ಅವಧಿಗೆ ಮುಂದುವರೆಯಬಹುದು ಎಂದು ಕೋರ್ಟ್ ಹೇಳಿದೆ. ಆದರೆ ಅಮಿತ್ ಶಾ ಮಗ ಮಾತ್ರ ಕಾರ್ಯದರ್ಶಿಯಾಗಿ ಮುಂದುವರೆಯುತ್ತಿದ್ದು, ಸೌರವ್ ಗಂಗೂಲಿಯವರನ್ನು ಏಕೆ ಹೊರಹಾಕಲಾಗುತ್ತಿದೆ ನನಗೆ ಗೊತ್ತಿಲ್ಲ. ನನಗೆ ಜಯ್ ಶಾ ಬಗ್ಗೆ ಯಾವುದೇ ತಕರಾರಿಲ್ಲ. ಆದರೆ ಅನ್ಯಾಯಯುತವಾಗಿ ಸೌರವ್‌ರವರನ್ನು ಹೊರಹಾಕುತ್ತಿರುವಾಗ ಐಸಿಸಿಯಲ್ಲಿ ಅವರಿಗೆ ಸ್ಥಾನ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನು ಪ್ರತೀಕಾರವಾಗಿ ಅಥವಾ ರಾಜಕೀಯವಾಗಿ ತೆಗೆದುಕೊಳ್ಳಬೇಡಿ ಎಂದು ನಾನು ಸರ್ಕಾರವನ್ನು ವಿನಂತಿಸುತ್ತೇನೆ. ಕ್ರಿಕೆಟ್‌ಗಾಗಿ, ಕ್ರೀಡೆಗಾಗಿ ನಿರ್ಧಾರ ತೆಗೆದುಕೊಳ್ಳಿ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

1983ರ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯ, ಕರ್ನಾಟಕದ ರೋಜರ್ ಬಿನ್ನಿಯವರು BCCI ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಅಕ್ಟೋಬರ್ 18 ರಂದು ಮುಂಬೈನಲ್ಲಿ BCCI ವಾರ್ಷಿಕ ಸಾಮಾನ್ಯ ಸಭೆ ನಡೆಯಲಿದ್ದು ಅಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

ಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಹಾಕಲಾಗುತ್ತಿದೆ ಎಂದು ಈ ಹಿಂದೆ TMC ಆರೋಪಿಸಿತ್ತು. ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಬಹುದಾದರೆ ಸೌರವ್ ಗಂಗೂಲಿ ಯಾಕಿಲ್ಲ? ಏಕೆಂದರೆ ಇದು ಬಿಜೆಪಿಯ ಸೇಡಿನ ರಾಜಕೀಯದ ಉದಾಹರಣೆಯಾಗಿದೆ ಎಂದು ಟಿಎಂಸಿ ಹೇಳಿತ್ತು.

ಬಿಜೆಪಿಯು ಬಂಗಾಳದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ. ಹಾಗಾಗಿ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಜನಪ್ರಿಯತೆ ಹೊಂದಿರುವ ಸೌರವ್ ಗಂಗೂಲಿ ಬಿಜೆಪಿ ಸೇರುತ್ತಾರೆ ಎಂಬ ಉಹಾಪೋಹ ಹಬ್ಬಿಸಿತ್ತು. ಅದು ಸಾಧ್ಯವಾಗದ ಕಾರಣ ಅವರನ್ನು ಎರಡನೇ ಭಾರಿಗೆ ಮುಂದುವರೆಸಿಲ್ಲ ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದ್ದರು.

ಇನ್ನು ದೊಡ್ಡ ಹುದ್ದೆಗೆ ಹೋಗುತ್ತೇನೆ ಎಂದು ಸೌರವ್ ಗಂಗೂಲಿ ಹೇಳಿದ್ದರು. ಆದರೂ ಅವರು ಬಂಗಾಳ ಕ್ರಿಕೆಟ್ ಅಸೋಷಿಯೇಷನ್ ಹುದ್ದೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಕ್ಕೆ: TMC ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...